ನೆಟ್ಟಣಿಗೆ ಮುಡ್ನೂರು ಗ್ರಾಮದಲ್ಲಿ ಮತ್ತೂಂದು ಕೋವಿಡ್ ಪಾಸಿಟಿವ್ ಪ್ರಕರಣ ದೃಢ!
Team Udayavani, Jul 23, 2020, 5:11 PM IST
ಈಶ್ವರಮಂಗಲ: ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಪಳ್ಳತ್ತೂರು ಸಮೀಪದ ಕೋಡಿಯಡ್ಕ ಎಂಬಲ್ಲಿ ವ್ಯಕ್ತಿಯೋರ್ವರಿಗೆ ಕೋವಿಡ್ ಪಾಸಿಟಿವ್ ಧೃಡ ಪಟ್ಟಿದ್ದು ಅಧಿಕಾರಿಗಳು ಮನೆಯನ್ನು ಸೀಲ್ ಡೌನ್ ಮಾಡಿದ್ದಾರೆ. ಮಂಗಳವಾರ ಈಶ್ವರಮಂಗಲ ಮೇನಾಲದಲ್ಲಿ ಕೋವಿಡ್ ಪಾಸಿಟಿವ್ ಬಂದ ಎರಡೇ ದಿನದಲ್ಲಿ ಇನ್ನೊಂದು ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು ಆತಂಕಕ್ಕೆ ಕಾರಣವಾಗಿದೆ.
ಸೋಂಕಿತ ವ್ಯಕ್ತಿ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದು ಕೆಲವು ತಿಂಗಳ ಹಿಂದೆ ಊರಿಗೆ ಮರಳಿ ಮತ್ತೆ ಬೆಂಗಳೂರಿಗೆ ತೆರಳಿ ಇತ್ತೀಚೆಗೆ ಊರಿಗೆ ಬಂದಿದ್ದಾರೆ ಹಾಗೂ ತಾಯಿಯನ್ನು ಡಯಾಲಿಸ್ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರೆನ್ನಲಾಗಿದೆ. ಆದರೆ ವ್ಯಕ್ತಿಗೆ ಯಾವಾಗ ಕೋವಿಡ್ ವೈರಸ್ ಸಂಪರ್ಕವಾಗಿದೆ ಎನ್ನುವುದು ನಿಗೂಢವಾಗಿದೆ. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸೋಂಕಿತನ ಸಂಪರ್ಕದಲ್ಲಿರುವವರನ್ನು 7 ದಿನ ಕ್ವಾರೆಂಟೈನ್ ಮಾಡುವಂತೆ ಆರೋಗ್ಯ ಇಲಾಖೆ ತಿಳಿಸಿದೆ.
ಈಶ್ವರಮಂಗಲದಲ್ಲಿ ಸಾಮಾಜಿಕ ಅಂತರದ ಕೊರತೆ!
ಮಹಾಮಾರಿ ಕೋವಿಡ್ ಗ್ರಾಮೀಣ ಪ್ರದೇಶದಲ್ಲಿ ಹರಡಲು ಪ್ರಾರಂಭಿಸಿದ್ದು ಸಾರ್ವಜನಿಕರಲ್ಲಿ ಸ್ವಯಂ ಸುರಕ್ಷತೆ ಬಗ್ಗೆ ಕಾಳಜಿ ಇಲ್ಲದೆ ಇರುವುದು ಕಂಡು ಬರುತ್ತಿದೆ. ಈಶ್ವರಮಂಗಲದ ನ್ಯಾಯ ಬೆಲೆಯಲ್ಲಿ ಅಂಗಡಿಯಲ್ಲಿ ಪಡಿತರ ಪಡೆಯುವಲ್ಲಿ ಸಾಮಾಜಿಕ ಅಂತರದ ಕೊರತೆ ಎದ್ದು ಕಂಡು ಬರುತ್ತಿದ್ದು ಇದನ್ನು ಸರಿಪಡಿಸಲು ಸ್ಥಳೀಯ ಪೊಲೀಸ್ ಠಾಣೆಯ ಪೇದೆ ಬರಬೇಕಾಯಿತು ಎನ್ನಲಾಗಿದೆ.
ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್, ಪೊಲೀಸರು, ಕೊವಿಡ್ ವಾರಿಯರ್ಸ್ ಗಳ ವಿನಂತಿಗೆ ಸಾರ್ವಜನಿಕರು ಪೂರಕವಾಗಿ ಸ್ಪಂದಿಸುವುದಿಲ್ಲ ಎಂಬ ಮಾತು ಕೇಳಿ ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.