Breaking News! ಚಾಮರಾಜನಗರ: ಹೆಣ್ಣು ಮಗುವಿಗೆ ಜನ್ಮ ನೀಡಿದ ಕೋವಿಡ್ ಸೋಂಕಿತ ಮಹಿಳೆ!
Team Udayavani, Jul 19, 2020, 7:00 PM IST
ಚಾಮರಾಜನಗರ: ನಗರದ ಕೋವಿಡ್ ಆಸ್ಪತ್ರೆಯಲ್ಲಿ ಸೋಂಕಿತ ಮಹಿಳೆಯೊಬ್ಬರು ಇಂದು ಸಂಜೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮಗು ಕ್ಷೇಮವಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಹನೂರು ತಾಲೂಕಿನ ಗಾಣಿಗ ಮಂಗಲದ 21 ವರ್ಷದ ಮಹಿಳೆ (ರಾಜ್ಯ ಸಂಖ್ಯೆ ಪಿ 64279, ಜಿಲ್ಲಾ ಸಂಖ್ಯೆ ಸಿಎಚ್‌ಎನ್-266) ಹೆಣ್ಣು ಮಗುವಿಗೆ ಜನ್ಮವಿತ್ತವರು. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ ಮಹಿಳೆ ಜನ್ಮ ನೀಡಿದ ಮೊದಲ ಪ್ರಕರಣ ಇದಾಗಿದೆ.
ಈ ಮಹಿಳೆ ಎರಡು ದಿನಗಳ ಹಿಂದೆಯೇ ಹೆರಿಗೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಮುನ್ನೆಚ್ಚರಿಕಾ ಕ್ರಮವಾಗಿ ಅವರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಇಂದು ಬೆಳಿಗ್ಗೆ ಬಂದ ವರದಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿತ್ತು. ದಿನ ತುಂಬಿದ್ದರಿಂದ ಆಕೆಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಲು ಆಸ್ಪತ್ರೆ ವೈದ್ಯರು ನಿರ್ಧರಿಸಿದರು.
ಇಂದು (ಭಾನುವಾರ) ಸಂಜೆ 6 ಗಂಟೆ ಸಮಯದಲ್ಲಿ ನಗರದ ಕೋವಿಡ್ ಆಸ್ಪತ್ರೆಯ ಕೆಳಗಿರುವ ಹಳೆಯ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಮಹಿಳೆಗೆ ಸಿಸೇರಿಯನ್ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಹೆಣ್ಣು ಮಗು ಜನಿಸಿದ್ದು, ಆರೋಗ್ಯವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಪ್ರಸೂತಿ ತಜ್ಞೆ ಡಾ. ಸ್ವಾತಿ, ಅರವಳಿಕೆ ತಜ್ಞ ಡಾ. ಸಮರ್ಥ್, ಮಕ್ಕಳ ತಜ್ಞೆ ಡಾ. ಲಕ್ಷ್ಮೀ ಹಾಗೂ ಸ್ಟಾಫ್ ನರ್ಸ್ ಪುಟ್ಟ ಲಿಂಗಮ್ಮ ಈ ಶಸ್ತ್ರಚಿಕಿತ್ಸೆಯಲ್ಲಿ ಭಾಗವಹಿಸಿದ್ದರು.
ಮಹಿಳೆ ದಾಖಲಾಗಿದ್ದ ಹೆರಿಗೆ ವಾರ್ಡ್ ಅನ್ನು ಸೀಲ್‌ಡೌನ್ ಮಾಡಲಾಗಿದೆ. ಅಲ್ಲಿ ದಾಖಲಾಗಿದ್ದ ಇನ್ನಿತರ ರೋಗಿಗಳ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.