H-1B ವೀಸಾ ನೋಂದಣಿಗೆ ಇನ್ನು ಹೊಸ ಕ್ರಮ ಜಾರಿ?
ವಂಚನೆ ಪ್ರಕರಣಗಳು ದೃಢಪಟ್ಟಿರುವ ಹಿನ್ನೆಲೆಯಲ್ಲಿ ನಿರ್ಧಾರ
Team Udayavani, Apr 30, 2023, 7:05 AM IST
ವಾಷಿಂಗ್ಟನ್: ಅಮೆರಿಕದ ಮಾಹಿತಿ ತಂತ್ರಜ್ಞಾನ ಕಂಪನಿಗಳಲ್ಲಿ ಉದ್ಯೋಗ ಪಡೆಯಲು ಇರುವ ಎಚ್-1ಬಿ ವೀಸಾ ನೋಂದಣಿಗೆ ಇರುವ ವ್ಯವಸ್ಥೆ ಆಧುನೀಕರಣಗೊಳಿಸಲು ಚಿಂತನೆ ನಡೆಸಲಾಗಿದೆ. ಸದ್ಯ ಇರುವ ಕಂಪ್ಯೂಟರೀಕೃತ ವ್ಯವಸ್ಥೆಯಲ್ಲಿ ಕೆಲವೊಂದು ಲೋಪ-ದೋಷಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅಮೆರಿಕದ ಪೌರತ್ವ ಮತ್ತು ವಲಸೆ ಸೇವೆಗಳ ಇಲಾಖೆ (ಯುಎಸ್‌ಸಿಐಎಸ್) ಈ ನಿರ್ಧಾರ ಕೈಗೊಂಡಿದೆ. 2023 ಮತ್ತು 2024ನೇ ಸಾಲಿನ ವಿತ್ತೀಯ ವರ್ಷದಲ್ಲಿ ಎಚ್1ಬಿ ವೀಸಾ ನೀಡುವ ಸಂದರ್ಭದಲ್ಲಿ ಕೆಲವೊಂದು ವಂಚನೆಯ ಪ್ರಕರಣಗಳು ಬಹಿರಂಗವಾಗಿದೆ. ಅಂಥವುಗಳನ್ನು ಪತ್ತೆ ಹಚ್ಚಿ ಆ ಅರ್ಜಿಗಳಿಗೆ ನಿಷೇಧ ಹೇರಲಾಗಿದೆ ಎಂದು ಶುಕ್ರವಾರ ಬಿಡುಗಡೆ ಮಾಡಲಾಗಿರುವ ವಾರ್ಷಿಕ ವರದಿಯಲ್ಲಿ ಉಲ್ಲೇಖೀಸಲಾಗಿದೆ.
ಕೆಲವೊಂದು ಸಣ್ಣ ಕಂಪನಿಗಳು ಪದೇ ಪದೆ ಒಂದೇ ಹೆಸರುಗಳನ್ನು ಅರ್ಜಿಗಳನ್ನು ಹಾಕಿರುತ್ತವೆ. ಹೀಗಾಗಿ, ಲಾಟರಿ ಪ್ರಕ್ರಿಯೆಯಲ್ಲಿ ಹಲವು ಬಾರಿ ಅವುಗಳು ಆಯ್ಕೆಯಾಗುತ್ತವೆ. ಈ ಮೂಲಕ ಕೃತಕವಾಗಿ ವೀಸಾ ಪಡೆಯಲು ಬೇಕಾಗುವ ಅರ್ಹತೆಯನ್ನು ಹೆಚ್ಚಿಸಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ. ಪ್ರಸಕ್ತ ವರ್ಷ 7,80,884 ಅರ್ಜಿಗಳು ಸಲ್ಲಿಕೆಯಾಗಿದ್ದವು. 2023ರಲ್ಲಿ 4,83,927, 2022ರಲ್ಲಿ 3,01,447, 2021ರಲ್ಲಿ 2,74,237 ಅರ್ಜಿಗಳು ಸಲ್ಲಿಕೆಯಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.