ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್; ಐಸಿಎಂಆರ್ ಒಪ್ಪಿಗೆ: ಸಚಿವ ದಿನೇಶ್ ಗುಂಡೂರಾವ್
ಮಾರ್ಚ್ ವರೆಗೆ ಜನ ಬಹಳ ಎಚ್ಚರಿಕೆಯಿಂದ ಇರಬೇಕು...
Team Udayavani, Feb 10, 2024, 6:57 PM IST
ಉಡುಪಿ: ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ಕುರಿತು ಐಸಿಎಂಆರ್ ಜತೆ ಚರ್ಚೆ ನಡೆಸಲಾಗಿದ್ದು, ತಯಾರಿಕೆಗೆ ಒಪ್ಪಿಗೆ ಸೂಚಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಉಡುಪಿಯಲ್ಲಿ ಶನಿವಾರ ಮಂಗನ ಕಾಯಿಲೆ ನಿಯಂತ್ರಣ ಕುರಿತಂತೆ ಆರೋಗ್ಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಸಚಿವರು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮಳೆಗಾಲ ಆರಂಭ ಮತ್ತು ಅಂತ್ಯದಲ್ಲಿ ಮಂಗನ ಕಾಯಿಲೆ ಹೆಚ್ಚಳವಾಗುತ್ತದೆ. ಮಾರ್ಚ್ ವರೆಗೆ ಜನ ಬಹಳ ಎಚ್ಚರಿಕೆಯಿಂದ ಇರಬೇಕು. ಲಕ್ಷಣಗಳು ಬಂದ ಕೂಡಲೇ ಚಿಕಿತ್ಸೆ ಪಡೆದುಕೊಳ್ಳಲು ಮುಂದಾಗಬೇಕು ಎಂದರು.
ಮಂಗನ ಕಾಯಿಲೆಗೆ ಎಬಿಎಆರ್ ಕೆ ಫಂಡ್ ನಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ಈಗಾಗಲೇ ಸೂಚಿಸಲಾಗಿದೆ. ಅಲ್ಲದೇ ಕೆ.ಎಫ್.ಡಿ ಪಾಸಿಟಿವ್ ಬಂದವರನ್ನ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲು ಕಡ್ಡಾಯಗೊಳಿಸಲಾಗಿದೆ ಎಂದರು.
ರಾಜ್ಯದಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಒಟ್ಟು 70 ಕೆಎಫ್ ಡಿ ಪ್ರಕರಣ ದಾಖಲಾಗಿವೆ. ಹಲವರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 20 ಸಕ್ರಿಯ ಪ್ರಕರಣಗಳು ಇವೆ. 2 ಸಾವಾಗೀಡಾಗಿದ್ದು, ಇಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿಗೀಡಾದ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡುವುದಾಗಿ ತಿಳಿಸಿದರು.
ಸಾವು ಆಗದೆ ಇರುವ ಬಗ್ಗೆ ಮುನ್ನೆಚ್ಚರಿಕೆ ಕಾರ್ಯಕ್ರಮ ಕೈಗೊಳ್ಳುಲು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಿಂದೆ ಇರುವ ವ್ಯಾಕ್ಸಿನ್ ಬಳಕೆ ಮಾಡಬೇಡಿ ಎಂದು ಸೂಚಿಸಲಾಗಿದೆ. ಹೊಸ ವ್ಯಾಕ್ಸಿನ್ ಬಗ್ಗೆ ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದೆ. ಐಸಿಎಂಆರ್ ನವರು ವ್ಯಾಕ್ಸಿನ್ ತಯಾರಿಕೆಗೆ ಒಪ್ಪಿಗೆ ನೀಡಿದ್ದು, ಹೈದರಾಬಾದ್ ಸಂಸ್ಥೆ ಸಂಶೋಧನೆ ಮಾಡಿ ವ್ಯಾಕ್ಸಿನ್ ತಯಾರಿಸುತ್ತದೆ. ಮುಂದಿನ ವರ್ಷಕ್ಕೆ ಮಂಗನ ಕಾಯಿಲೆಗೆ ಒಳ್ಳೆಯ ಚುಚ್ಚುಮದ್ದು ಸಿಗಬಹುದು ಎಂದು ಭರವಸೆ ನೀಡಿದರು.
ಉಣ್ಣೆ ಕಡಿತವನ್ನು ತಡೆಗಟ್ಟಲು ಬಳಸಲಾಗುವ DEPA ತೈಲವನ್ನು ಸಾರ್ವಜನಿಕರಿಗೆ ಬಳಸಲು ಉಚಿತವಾಗಿ ನೀಡಲಾಗಿದೆ. ರಾಜ್ಯಮಟ್ಟದಿಂದ ಈವರೆಗೆ 62794 DEPA ಬಾಟಲ್ ಗಳನ್ನು ವಿತರಿಲಾಗಿದೆ. ರಾಜ್ಯ ಮಟ್ಟದಿಂದ ಅಧಿಕಾರಿಗಳು, RRT ತಂಡ ನಿಯಮಿತವಾಗಿ ಭೇಟಿ ನೀಡುತ್ತಿದ್ದು ಸಮಯೋಚಿತ ಮಾರ್ಗದರ್ಶನವನ್ನು ನೀಡುತ್ತಿದ್ದಾರೆ. ಪ್ರತಿ ದಿನ ವಿ.ಸಿ. ಮುಖೇನ ಸದರಿ ಕಾರ್ಯ ಚಟುವಟಿಕೆಗಳ ಮೇಲ್ವಿಚಾರಣೆಯನ್ನು ನಡೆಸಲಾಗುತ್ತಿದೆ. VDL ಶಿವಮೊಗ್ಗ ಮತ್ತು MIV ಮಣಿಪಾಲದಲ್ಲಿನ ಪ್ರಯೋಗಾಲಯಗಳನ್ನು KFD ಪರೀಕ್ಷೆಗೆ ಗುರುತಿಸಲಾಗಿದ್ದು, ಶೀಘ್ರವಾಗಿ ಮಾದರಿಗಳನ್ನು ಸಂಸ್ಕರಿಸಿ ಪರೀಕ್ಷೆ ನಡೆಸಿ ವರದಿ ನೀಡಲಾಗುತ್ತಿದೆ ಎಂದು ವಿವರ ನೀಡಿದರು.
KFD ಪಾಸಿಟಿವ್ ಪ್ರಕರಣಗಳನ್ನು ಮನೆಯಿಂದ ಆಸ್ಪತ್ರೆಗೆ ಸಾಗಿಸಲು ಮತ್ತು ಅಗತ್ಯವಿದ್ದರೆ, ಉನ್ನತ ರೆಫರಲ್ ಸೆಂಟರ್ ನಾಗಿಸಲು ಉಚಿತ ಆಂಬ್ಯುಲೆನ್ಸ್ ಸೌಲಭ್ಯ ಒದಗಿಸಿದೆ. ರೋಗ ಪ್ರಸರಣಾ ಋತುವಿನಲ್ಲಿ ತಾಲೂಕು ಆಸ್ಪತ್ರೆಗಳಾದ ಜಿಸಿಎಚ್ ತೀರ್ಥಹಳ್ಳಿ, ಸಾಗರ, ಸಿದ್ದಾಪುರ ಮತ್ತು ಹೊನ್ನಾವರ ಉಪ ವಿಭಾಗೀಯ ಆಸ್ಪತ್ರೆಗಳಲ್ಲಿ KFD ಗೆ ಚಿಕಿತ್ಸೆ ನೀಡಲು ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. ICU ನಲ್ಲಿ ದಾಖಲಾಗಿರುವ ರೋಗಿಗಳ ಆರೋಗ್ಯ ಸ್ಥಿತಿ-ಗತಿಯನ್ನು ಪ್ರತಿದಿನ ಪರೀಶೀಲಿಸಲು ಟೆಲಿ-ICU ಸೇವೆಯನ್ನು KFD ಗೂ ವಿಸ್ತರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಕೈಗೊಂಡ ಕ್ರಮಗಳ ಕುರಿತು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.