ಹೊಸ ವರ್ಷ; ಹಂಪಿಯತ್ತ ಪ್ರವಾಸಿಗರ ದಂಡು

Team Udayavani, Dec 27, 2021, 4:47 PM IST

hampi

ಹೊಸಪೇಟೆ: ಹೊಸ ವರ್ಷ(2022)ಆಗಮನಕ್ಕೆ ದಿನಗಣನೆ ಆರಂಭವಾಗುತ್ತಿದಂತೇ ವಿಶ್ವಪ್ರಸಿದ್ಧ ಹಂಪಿ ಕಡೆ ಪ್ರವಾಸಿಗರು ಧಾವಿಸಿ ಬರುತ್ತಿದ್ದಾರೆ. ಹೌದು! ನೂತನ ವರ್ಷದ ಆಗಮನದ ಹಿನ್ನೆಲೆಯಲ್ಲಿ ಎಂಬಂತೆ ಪ್ರವಾಸಿಗರು ಹಂಪಿ ಕಡೆ ಮುಖ ಮಾಡಿದ್ದು, ಭಾನುವಾರ ಒಂದೇ ದಿನ 14 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಹಂಪಿಗೆ ಆಗಮಿಸಿದ್ದಾರೆ.

ಹಂಪಿ ಮಾತ್ರವಲ್ಲದೇ, ಪಕ್ಕದ ಆನೆಗುಂದಿಯ ಆಂಜನಾದ್ರಿ ಬೆಟ್ಟ, ಹೊಸಪೇಟೆಯ ತುಂಗಭದ್ರಾ ಡ್ಯಾಂ, ಕಮಲಾಪುರದಲ್ಲಿರುವ ಕರಡಿಧಾಮ ಹಾಗೂ ಅಟಲ್‌ಬಿಹಾರಿ ವಾಜಪೇಯಿ ಝೂಲಾಜಿಕಲ್‌ ಪಾರ್ಕ್‌ ಮುಂತಾದ ಸ್ಥಳಗಳನ್ನು ವೀಕ್ಷಣೆ ಮಾಡುವ ಉದ್ದೇಶದಿಂದ ವರ್ಷಾಂತ್ಯದಲ್ಲಿ ಪ್ರವಾಸಿಗರು ಹಂಪಿಗೆ ಬಂದು ಇಳಿಯುತ್ತಿದ್ದಾರೆ. ನಿತ್ಯ ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವುದರಿಂದ ಹಂಪಿ-ಕಮಲಾಪುರ ಹಾಗೂ ಹೊಸಪೇಟೆ ಸುತ್ತಮುತ್ತಲಿನ ರೆಸ್ಟಾರ್ಟ್‌, ಹೋಟೆಲ್‌ ಹಾಗೂ ಲಾಡ್‌ jಗಳು ಪುಲ್‌ ಆಗಿದ್ದು, ಜ. 2ರ ವರೆಗೂ ಕೊಠಡಿಗಳು ಬುಕ್‌ ಆಗಿವೆ. ರೂಮ್‌ ಸಿಗದೇ ಪ್ರವಾಸಿಗರು ಪರದಾಡುವಂತಾಗಿದೆ.

ಒಮಿಕ್ರಾನ್‌ ಭೀತಿ ನಡುವೆ ಸಂಭ್ರಮ

ಒಮಿಕ್ರಾನ್‌ ಭೀತಿ ನಡುವೆ ಹಂಪಿ ಪ್ರವಾಸ ಕೈಗೊಂಡಿರುವ ಪ್ರವಾಸಿಗರು, ಹಂಪಿ ಪರಸರ ಹಾಗೂ ಸ್ಮಾರಕಗಳನ್ನು ಕಣ್ತುಂಬಿಕೊಂಡು ಸಂಭ್ರಮಿಸಿದರು. ಮೊದಲು ವಿರೂಪಾಕ್ಷೇಶ್ವರ ಹಾಗೂ ಪಂಪಾದೇವಿ ದರ್ಶನ ಪಡೆದರು. ದೇವಸ್ಥಾನದ ಪಟ್ಟಾದ ಆನೆ ಜೊತೆಗೆ ಫೋಟೋ ಕ್ಲಿಕ್ಕಿಸಿಕೊಂಡು ಖುಷಿ ಪಟ್ಟರು. ನಂತರ ಕೋದಂಡರಾಮ ಸ್ವಾಮಿ, ಯಂತ್ರೋದ್ಧಾರಕ ಆಂಜನೇಯ ಹಾಗೂ ಉದ್ಧಾನ ವೀರಭದ್ರೇಶ್ವರ ದೇವಾಲಯಕ್ಕೂ ಭೇಟಿ ನೀಡಿ ದರ್ಶನ ಪಡೆದರು.

ಸ್ಮಾರಕ ವೀಕ್ಷಣೆ

ಹೇಮಕೂಟ, ಸಾಸವಿಕಾಳು, ಕಡಲೆಕಾಳು ಗಣಪತಿ, ಕೃಷ್ಣ ದೇವಾಲಯ, ಬಡವಿಲಿಂಗ, ಲಕ್ಷಿ ¾à ನರಸಿಂಹ, ಭೂಮಿಮಟ್ಟದ ಶಿವಾಲಯ, ಹಜಾರರಾಮ ದೇವಾಲಯ, ಮಹಾನವಮಿ ದಿಬ್ಬ, ಪುಷ್ಕರಣಿ, ರಾಣಿ ಸ್ನಾನ ಗೃಹ, ಕಮಲ ಮಹಲ್‌, ಗಜಶಾಲೆ, ವಿಜಯ ವಿಠಲ ದೇವಾಲಯದ ಆವರಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಕಂಡು ಬಂದರು. ಕಾಲ್ನಡಿಗೆ: ಬ್ಯಾಟರಿ ಚಾಲಿತ ವಾಹನಗಳ ಕೊರತೆಯಿಂದ ಅನಿವಾರ್ಯವಾಗಿ ಪ್ರವಾಸಿಗರು ಕಾಲ್ನಡಿಗೆ ಮೂಲಕ ವಿಜಯ ವಿಠಲ ದೇವಾಲಯಕ್ಕೆ ತೆರಳಿದರು.

ಪಾರ್ಕಿಂಗ್‌ ಪ್ರದೇಶದಲ್ಲಿರುವ ಗೂಡಂಗಡಿಗಳು, ಸಣ್ಣಪುಟ್ಟ ಹೋಟೆಲ್‌ ಗಳಲ್ಲಿ ಪ್ರವಾಸಿಗರು ಕಂಡು ಬಂದರು. ಬಸ್‌, ಕಾರು ಹಾಗೂ ಆಟೋ, ಬೈಕ್‌ ಮೂಲಕ ಹಂಪಿಗೆ ಆಗಮಿಸಿದ್ದರು. ಟ್ರಾμಕ್‌ ಕಿರಿಕಿರಿ: ಪ್ರವಾಸಿಗರ ಸಂಖ್ಯೆ ದ್ವಿಗುಣವಾಗುತ್ತಿದಂತೆ ವಿರೂಪಾಕ್ಷ ರಥ ಬೀದಿ ಹಾಗೂ ಪಾರ್ಕಿಂಗ್‌ ಪ್ರದೇಶದಲ್ಲಿ ಕಿಕ್ಕಿರಿದ ವಾಹನ ಒಡಾಟದಿಂದ ಟ್ರಾμಕ್‌ ಕಿರಿಕಿರಿ ಉಂಟಾಗಿತ್ತು. ಪ್ರವಾಸಿಗರ ಹೆಚ್ಚಳದ ಹಿನ್ನೆಲೆಯಲ್ಲಿ ಹಂಪಿ ಗೈಡ್‌ಗಳು, ಸಣ್ಣಪುಟ್ಟ ಹೋಟೆಲ್‌ ಹಾಗೂ ಗೂಡಂಡಿಗಳಲ್ಲಿ ವ್ಯಾಪಾರ ಜೋರಾಗಿ ನಡೆದಿದೆ. ಆಟೋ, ಟ್ಯಾಕ್ಷಿ ಮೊಗದಲ್ಲಿ ಮಂದಹಾಸ ಮೂಡಿತ್ತು. ರಾಜ್ಯ ಸೇರಿದಂತೆ ಆಂಧ್ರ, ತೆಲಂಗಾಣ, ತಮಿಳುನಾಡು ರಾಜ್ಯಗಳಿಂದ ಪ್ರವಾಸಿಗರು ಹಂಪಿಗೆ ಆಗಮಿಸಿದ್ದರು.

ಟಾಪ್ ನ್ಯೂಸ್

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Karnataka ಪ್ರತ್ಯೇಕ ಪ್ರಕರಣ: ಅಪಘಾತಗಳಲ್ಲಿ 11 ಮಂದಿ ಸಾವು

Karnataka ಪ್ರತ್ಯೇಕ ಪ್ರಕರಣ: ಅಪಘಾತಗಳಲ್ಲಿ 11 ಮಂದಿ ಸಾವು

ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

Bengaluru: ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

13

Surathkal: ಅನಾರೋಗ್ಯದಿಂದ ಸಿ.ಎ. ವಿದ್ಯಾರ್ಥಿನಿ ಸಾವು

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.