ಪಿಎಫ್ಐ ಕಾರ್ಯಕರ್ತರ ಮೇಲೆ ಎನ್‌ಐಎ ದಾಳಿ
Team Udayavani, Dec 9, 2022, 10:45 AM IST
ಬೆಂಗಳೂರು: ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ನಿಷೇಧಗೊಳಿಸಿದರೂ ಅದರ ಪದಾಧಿಕಾರಿಗಳು, ಸದಸ್ಯರು ಮತ್ತು ಕಾರ್ಯಕರ್ತರು ದೇಶದ ವಿವಿಧೆಡೆ ಭಯೋತ್ಪಾದಕ ಹಾಗೂ ಇತರೆ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸಲು ಹವಣಿಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಗುರುವಾರ ರಾಜ್ಯದ ಕಲಬುರಗಿ ಮತ್ತು ಕೇರಳದ ಕೋಝಿಕ್ಕೋಡ್‌ನ ಮೂರು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದೆ.
ಇತ್ತೀಚೆಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ನಿಷೇಧಗೊಳಿಸಲಾಗಿತ್ತು. ಆದರೂ ಅದರ ಪದಾಧಿಕಾರಿಗಳು, ಸದಸ್ಯರು ಮತ್ತು ಕಾರ್ಯಕರ್ತರು ದೇಶದ ವಿವಿಧ ಭಾಗಗಳಲ್ಲಿ ಭಯೋತ್ಪಾದಕ ಕೃತ್ಯಗಳನ್ನು ಎಸಗಲು ಮುಂದಾಗಿದ್ದಾರೆ. ಭಾರತ ಮತ್ತು ವಿದೇಶಗಳಿಂದ ಹಣ ಸಂಗ್ರಹಿಸಲು ಯತ್ನಿಸುತ್ತಿದ್ದಾರೆ. ಅಲ್ಲದೆ, ಈ ನಿಷೇಧದ ಬಳಿಕ ಸಂಘಟನೆಗಳ ಕಾರ್ಯಕರ್ತರು ಕೇರಳ, ತಮಿಳುನಾಡು, ಕರ್ನಾಟಕ, ಉತ್ತರ ಪ್ರದೇಶ, ದೆಹಲಿ ಸೇರಿ ಇತರೆ ರಾಜ್ಯಗಳಲ್ಲಿ ತಲೆಮರೆಸಿಕೊಂಡಿದ್ದು, ಅಲ್ಲಿಂದಲೇ ದೇಶಾದ್ಯಂತ ವಿವಿಧ ಸ್ಥಳಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು, ತಮ್ಮ ಕಾರ್ಯಕರ್ತರಿಗೆ ತರಬೇತಿ ಶಿಬಿರಗಳನ್ನು ಆಯೋಜಿಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಈ ಸಂಬಂಧ ದಾಳಿ ನಡೆಸಲಾಗಿದೆ.
ದಾಳಿ ವೇಳೆ ಡಿಜಿಟಲ್ ಸಾಧನಗಳು ಮತ್ತು ವಿವಿಧ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ದೆಹಲಿಯ ಎನ್‌ಐಎ ಪ್ರಕರಣ ದಾಖಲಿಸಿಕೊಂಡಿದೆ ಎನ್‌ಐಎ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!
PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್ ಸ್ಟೋರಿ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.