ಮತಾಂತರ ಮಾಡಿದರೆ ಕನಿಷ್ಠ1 ವರ್ಷ ಜಾಮೀನು ಸಿಗಬಾರದು: ಮುತಾಲಿಕ್
ಮತಾಂತರ ನಿಷೇಧ ಕಾನೂನು ಜಾರಿಯಾಗಲಿ
Team Udayavani, Oct 1, 2021, 6:44 PM IST
ಬೀದರ್ : ರಾಜ್ಯಾದ್ಯಂತ ಮತಾಂತರ ಹೆಚ್ಚುತ್ತಿದ್ದು, ಈ ಬಗ್ಗೆ ಅಧಿವೇಶನದಲ್ಲಿ ಸಹ ಗಂಭೀರ ಚರ್ಚೆ ಆಗಿದೆ. ಹೀಗಾಗಿ ಮತಾಂತರ ತಡೆಗೆ ಬಿಗಿಯಾದ ಕಾನೂನು ಜಾರಿಗೆ ತರುವುದು ಅವಶ್ಯಕತೆ ಇದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಶುಕ್ರವಾರ ಸರಕಾರಕ್ಕೆ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಬೀದರ್ ಜಿಲ್ಲೆಯಲ್ಲೂ ನಿರಂತರವಾಗಿ ಮತಾಂತರ ನಡೆಯುತ್ತಿದೆ. ಇಲ್ಲಿಯ ಎರಡು ಸಮುದಾಯಗಳನ್ನು ಗುರಿಯಾಗಿಸಿಕೊಂಡು ಮತಾಂತರ ಮಾಡಲಾಗುತ್ತಿದೆ. ಮತಾಂತರ ಮಾಡಿದರೆ ಕನಿಷ್ಠ ಒಂದು ವರ್ಷ ಜಾಮೀನು ಸಿಗಬಾರದು. ಇಂಥಹ ಕಟ್ಟುನಿಟ್ಟಿನ ನಿಯಮಗಳೊಂದಿಗೆ ಕಾನೂನು ಜಾರಿಗೆ ತರಲು ಸರಕಾರ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
‘ಮಸೀದಿಗಳ್ಲಲಿ ಧ್ವನಿವರ್ಧಕ ಬಳಸಿ ಪ್ರಾರ್ಥನೆ ಮಾಡುವುದನ್ನು ಕೂಡಲೇ ನಿಲ್ಲಿಸಬೇಕು. ಮಸೀದಿಗಳಲ್ಲಿ ಶಬ್ಧ ಮಾಲಿನ್ಯ ತಡೆಗೆ ಸುಪ್ರೀಂಕೋರ್ಟ್ ನೀಡಿದ ಆದೇಶ ಸರಕಾರ ಹಾಗೂ ಪೊಲೀಸ್ ಇಲಾಖೆಯ ನಿರ್ಲಕ್ಷ್ಯದಿಂದ ಈವರೆಗೆ ಪಾಲನೆಯಾಗಿಲ್ಲ. ಹೀಗಾಗಿ ನ್ಯಾಯಾಲಯದ ಆದೇಶ ಕಟ್ಟುನಿಟ್ಟಿನಿಂದ ಜಾರಿಗೆ ತರಲು ಆಗ್ರಹಿಸಿ 7ರಿಂದ ರಾಜ್ಯಾದ್ಯಂತ ಹೋರಾಟ ನಡೆಸಲು ನಿರ್ಧರಿಸಲಾಗಿದೆ. ರಾತ್ರಿ ೧೦ರಿಂದ ಬೆಳಗ್ಗೆ 9 ರವರೆಗೆ ಶಬ್ಧ ಮಾಲಿನ್ಯ ಆಗಬಾರದು ಎಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಆದೇಶ ಹೊರಡಿಸಿದೆ. ಆದರೆ ಈ ಆದೇಶವನ್ನು ಜಾರಿಗೆ ತರಬೇಕಾದ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ’ ಎಂದು ಕಿಡಿಕಾರಿದರು.
‘ಮುಸ್ಲಿಮರ ಪ್ರಾರ್ಥನೆ, ಭಕ್ತಿಗೆ ನಮ್ಮ ಆಕ್ಷೇಪ ಇಲ್ಲ. ಆದರೆ ಮಸೀದಿಗಳಲ್ಲಿ ಬಳಸುವ ಧ್ವನಿವರ್ಧಕದಿಂದ ಸಮಸ್ಯೆ ಆಗುತ್ತಿದೆ. ಬೆಳಗ್ಗೆ 5 ಗಂಟೆಗೆ ಪ್ರಾರ್ಥನೆ ಮಾಡುವುದರಿಂದ ಸಾರ್ವಜನಿಕರಿಗೆ ಕಿರಿಕಿರಿ ಮತ್ತು ಉಂಟಾಗುವ ಶಬ್ಧ ಮಾಲಿನ್ಯದ ಬಗ್ಗೆ ನಮ್ಮ ಹೋರಾಟ ಮುಂದುವರೆಯಲಿದೆ. ನ್ಯಾಯಾಲಯದ ಆದೇಶವಿದ್ದರೂ ಅದನ್ನು ಉಲ್ಲಂಘಿಸಲಾಗುತ್ತಿದೆ ಎಂದ ಮುತಾಲಿಕ್, ದೇವಾಲಯ, ಮಸೀದಿ, ಚರ್ಚ್ ಹೀಗೆ ಅನೇಕ ಪ್ರದೇಶಗಳನ್ನು ನಿಶಬ್ಧ ವಲಯಗಳು ಎಂದು ಘೋಷಿಸಲಾಗಿದೆ. ದಿನಕ್ಕೆ ಐದು ಬಾರಿ ಮೈಕ್ ಬಳಸುವ ಮಸೀದಿಗಳಲ್ಲಿನ ಶಬ್ದ ಮಾಲಿನ್ಯ ತಡೆಗಟ್ಟುವಲ್ಲಿ ಸರಕಾರ ಕಣ್ಮುಚ್ಚಿ ಕುಳಿತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.
‘ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ತಾಲಿಬಾನ್‌ಗೆ ಹೋಲಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಸರಿಯಲ್ಲ. ದೇಶದಲ್ಲಿ 62 ವರ್ಷ ಒಂದೇ ಮನೆತನದ ನೇತೃತ್ವದಲ್ಲಿ ಆಡಳಿತ ಮಾಡಿರುವ ಕಾಂಗ್ರೆಸ್‌ನವರಿಗೆ ದೇಶ ಭಕ್ತ ಸಂಘಟನೆ ಆಗಿರುವ ಆರ್‌ಎಸ್‌ಎಸ್ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ’ ಎಂದರು .
ಸುದ್ದಿಗೋಷ್ಠಿಯಲ್ಲಿ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಜಿಲ್ಲಾಧ್ಯಕ್ಷ ವೀರಶೆಟ್ಟಿ ಖ್ಯಾಮಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.