ಗ್ರಾಮಾಂತರಕ್ಕೆ ಬಸ್ಸಿಲ್ಲದೆ ಮಕ್ಕಳ ಪರದಾಟ : ಪ್ರತಿದಿನ 4-5 ಕಿ.ಮೀ. ನಡೆದೇ ಸಾಗಬೇಕು
Team Udayavani, Mar 9, 2021, 5:10 AM IST
ಕುಂದಾಪುರ: ಶಾಲಾ ಕಾಲೇಜುಗಳು ಆರಂಭವಾಗಿದ್ದು ಪೂರ್ಣಪ್ರಮಾಣದಲ್ಲಿ ಹಾಜರಾತಿ ಆಗುತ್ತಿದೆ. ಆದರೆ ಇನ್ನೂ ಗ್ರಾಮಾಂತರ ಪ್ರದೇಶದಲ್ಲಿ ಬಸ್‌ಗಳ ಓಡಾಟ ಪೂರ್ಣ ಹಂತದಲ್ಲಿ ಆರಂಭವಾಗಿಲ್ಲ. ಇದರಿಂದಾಗಿ ಶಾಲಾ-ಕಾಲೇಜು ಮಕ್ಕಳಿಗೆ ಸಮಸ್ಯೆಯಾಗಿದೆ.
ಜಪ್ತಿ ಗ್ರಾಮದಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ ಊರಿನ ವಿದ್ಯಾರ್ಥಿಗಳಿಗೆ ಏಳನೇ ತರಗತಿಯ ವರೆಗೆ ಮಾತ್ರ ವಿದ್ಯಾಭ್ಯಾಸ ಮಾಡಲು ಅವಕಾಶವಿದ್ದು, ಉನ್ನತ ವಿದ್ಯಾಭ್ಯಾಸಕ್ಕಾಗಿ ದೂರದ ಬಸ್ರೂರು ಅಥವಾ ಬಿದ್ಕಲ್ ಕಟ್ಟೆ ಶಾಲೆ/ಕಾಲೇಜುಗಳಿಗೆ ಹೋಗಬೇಕಾಗುತ್ತದೆ. ಆದರೆ ಇಲ್ಲಿ ಬಸ್ಸು ಸಂಚಾರ ವ್ಯವಸ್ಥೆ ಇಲ್ಲದಿರುವುದು ಸಮಸ್ಯೆಯಾಗಿದೆ. ಇದರಿಂದ ಈ ಗ್ರಾಮದ ವಿದ್ಯಾರ್ಥಿಗಳು ಮಳೆಗಾಲವಿರಲಿ, ಬಿಸಿಲಿರಲಿ ಪ್ರತಿದಿನ 4-5 ಕಿ. ಮೀ. ನಡೆದು ಸಾಗಬೇಕಾಗಿದೆ. ಹಳ್ಳಿಯ ಕುಟುಂಬಗಳಾದ ಕಾರಣ ಆಟೋ ಅಥವಾ ಬೇರೆ ವ್ಯವಸ್ಥೆ ಮಾಡಿಕೊಳ್ಳುವಷ್ಟು ಅನುಕೂಲ ಇವರಿಗೆ ಇರುವುದಿಲ್ಲ. ಹೆಚ್ಚು ಬಾಲಕಿಯರೇ ಇರುವುದಲ್ಲದೆ, ರಸ್ತೆಯ ಇಕ್ಕೆಲಗಳಲ್ಲಿ ಕಾಡು ಪ್ರದೇಶವಾದ ಕಾರಣ ರಸ್ತೆಯಲ್ಲಿ ಒಬ್ಬೊಬ್ಬರೇ ನಡೆದು ಹೋಗುವಷ್ಟು ಸುರಕ್ಷಿತವಾಗಿಲ್ಲ. ಈ ಸಮಸ್ಯೆಯಿಂದಾಗಿ ಕೆಲವು ಕುಟುಂಬಗಳು ಮಕ್ಕಳ ವಿದ್ಯಾಭ್ಯಾಸವನ್ನೇ ಅರ್ಧಕ್ಕೆ ನಿಲ್ಲಿಸಬೇಕಾದ ಪರಿಸ್ಥಿತಿ ಬಂದಿದೆ. ಈ ಬಗ್ಗೆ ಗಮನಹರಿಸುವಂತೆ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ನೀಡಿದ್ದಾರೆ.
ಮನವಿ
ಬಸ್ರೂರು-ಹುಣ್ಸೆಮಕ್ಕಿ ಮಾರ್ಗವಾಗಿ ಆದಷ್ಟು ಬೇಗ ಬಸ್ ವ್ಯವಸ್ಥೆ ಕಲ್ಪಿಸುವ ಮೂಲಕ ನಮ್ಮ ದೇಶದ ಭವಿಷ್ಯದ ಪ್ರಜೆಗಳಾದ ವಿದ್ಯಾರ್ಥಿಗಳ ಭವಿಷ್ಯವನ್ನು ಬೆಳಗಬೇಕು ಎಂದು ಡಿಸಿಗೆ ಮನವಿ ನೀಡಲಾಗಿದೆ. -ರಾಘವೇಂದ್ರ ಮೊಗವೀರ, ಜಪ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.