ಶೆಟ್ಟರ್ ಕ್ಷಮಿಸುವ ಪ್ರಶ್ನೆಯೇ ಇಲ್ಲ: ಜೋಶಿ
ರಾಜ್ಯ ಸರಕಾರದ ಮೀಸಲು ಕ್ರಮಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿಲ್ಲ
Team Udayavani, Apr 26, 2023, 7:36 AM IST
ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಏಕೆಂದರೆ ಅವರು ಕ್ಷಮಿಸುವಂತೆ ಯಾರನ್ನೂ ಕೇಳಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಗದೀಶ್ ಶೆಟ್ಟರ್ ಅವರನ್ನು ಕ್ಷಮಿಸದಂತೆ ಹೇಳಿರುವುದು ಬೇರೆ ರೂಪದಲ್ಲಿ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಅಮಿತ್ ಶಾ ಅವರು ಶೆಟ್ಟರ್ ಅವರನ್ನು ಕ್ಷಮಿಸಬಾರದು ಎನ್ನುವ ಅರ್ಥ ಈ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಬೇಕು ಎಂಬುದಾಗಿದೆ ವಿನಾ ಬೇರೆ ಯಾವುದೇ ಅರ್ಥವಿಲ್ಲ. ಕ್ಷಮಿಸಬಾರದು ಎನ್ನುವುದಾದರೆ ಅವರು ನಮಗೆ ಕ್ಷಮೆ ಕೇಳಿಲ್ಲವಾದ್ದರಿಂದ ಕ್ಷಮಿಸುವ ಪ್ರಮೇಯ ಬಂದಿಲ್ಲ ಎಂದರು.
ಮುಸ್ಲಿಂ ಮೀಸಲಾತಿ ರದ್ದು ಮಾಡಿರುವ ರಾಜ್ಯ ಸರಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿಲ್ಲ. ಈ ಕುರಿತು ಸಂಬಂಧಿಸಿದ ವಕೀಲರು ಹಾಗೂ ಮುಖ್ಯಮಂತ್ರಿ ಗಳೊಂದಿಗೆ ಮಾತನಾಡಿ ದ್ದೇನೆ. ವಿಚಾರಣೆ ಪೂರ್ಣಗೊಳ್ಳುವವರೆಗೂ ಯಾವುದೇ ಅನುಷ್ಠಾನ ಮಾಡುವುದಿಲ್ಲ ಎಂದು ಪೀಠಕ್ಕೆ ಹೇಳಿದ್ದೇವೆ. ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಲಾಗಿದೆ ಅಷ್ಟೆ. ಹಿಂದೆ ಯಾವ ಸ್ಥಿತಿಯಲ್ಲಿತ್ತೋ ಯಥಾಸ್ಥಿತಿ ಮುಂದುವರಿದಿದೆ. ಸಂವಿಧಾನ ವಿಸ್ತೃತ ಪೀಠ ಈ ಹಿಂದೆ ಧರ್ಮ ಆಧಾರಿತ ಮೀಸಲಾತಿ ರದ್ದುಗೊಳಿಸಿತ್ತು. ಹೀಗಾಗಿ ಇದನ್ನು ಕೂಡ ರದ್ದುಗೊಳಿಸಿ ನಮ್ಮ ನಿರ್ಧಾರವನ್ನು ಎತ್ತಿ ಹಿಡಿಯಲಿದ್ದು, ಇದನ್ನು ಜಾರಿಗೆ ತರುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.