ಎಪಿಎಲ್ ಕಾರ್ಡ್‌ದಾರರಿಗಿಲ್ಲ ಅಕ್ಕಿ!
Team Udayavani, Oct 22, 2022, 6:55 AM IST
ಉಡುಪಿ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ ಕಳೆದ ಎರಡು ತಿಂಗಳಿಂದ ಬಡತನ ರೇಖೆಗಿಂತ ಮೇಲಿರುವ (ಎಪಿಎಲ್ )ಕಾರ್ಡ್‌ದಾರರಿಗೆ ಪಡಿತರ ಸಿಗುತ್ತಿಲ್ಲ.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರ ಇಲಾಖೆಯ ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ಎಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ದಾರರಿಗೆ ಉಚಿತವಾಗಿ ಪಡಿತರ ವಿತರಿಸುವಂತೆ ಎಪಿಎಲ್ ಕಾರ್ಡ್‌ದಾರರಿಗೂ ನಿರ್ದಿಷ್ಟ ದರದಲ್ಲಿ ನಿರ್ದಿಷ್ಟ ಪ್ರಮಾಣದ ಅಕ್ಕಿಯನ್ನು ಪ್ರತೀ ತಿಂಗಳು ವಿತರಣೆ ಮಾಡಲಾಗುತ್ತದೆ.ಆದರೆ ಸೆಪ್ಟಂಬರ್‌ನಿಂದ ಉಭಯ ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್‌ದಾರರಿಗೆ ಸರಿಯಾಗಿ ಅಕ್ಕಿ ಪೂರೈಕೆಯಾಗುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ.
ಉಡುಪಿ ತಾಲೂಕಿನ ಬಹುತೇಕ ನ್ಯಾಯಬೆಲೆ ಅಂಗಡಿ ಯಲ್ಲಿ ಈ ಸಮಸ್ಯೆಯಿದೆ. ಎಪಿಎಲ್ ಕಾರ್ಡ್‌ದಾರರು ಪಡಿತರಕ್ಕಾಗಿ ಸರತಿ ಸಾಲಿನಲ್ಲಿ ನಿಂತರೂ ಪಡಿತರ ಪಡೆದು ಕೊಳ್ಳಲು ಸಾಧ್ಯವಾಗುತ್ತಿಲ್ಲ. ಬೈಂದೂರು ಮತ್ತು ಕುಂದಾಪುರ ತಾಲೂಕಿನಲ್ಲಿ ಸ್ವಲ್ಪ ಪ್ರಮಾಣದ ದಾಸ್ತಾನಿದ್ದು, ಸಮಸ್ಯೆ ಎಷ್ಟೊಂದು ತೀವ್ರವಾಗಿಲ್ಲ. ದ.ಕ. ಜಿಲ್ಲೆಯ ಬಹುತೇಕ ಎಲ್ಲ ತಾಲೂಕುಗಳಲ್ಲೂ ಎಪಿಎಲ್ ಕಾರ್ಡ್‌ದಾರರಿಗೆ ಅಕ್ಕಿಯ ಕೊರತೆಯಿದೆ ಎಂದು ಹೇಳಾಗುತ್ತಿದೆ.
ಎಪಿಎಲ್ ಕಾರ್ಡ್ ಹೊಂದಿದ ಎಲ್ಲರಿಗೂ ಅಕ್ಕಿ ನೀಡಲಾಗುವುದಿಲ್ಲ. ಯಾರು ತಮಗೆ ಅಕ್ಕಿ ಬೇಕು ಎಂದು ಮುಂಚಿತವಾಗಿ ತಿಳಿಸಿರುತ್ತಾರೋ ಅಂಥವರಿಗೆ ಮಾತ್ರ ವಿತರಣೆ ಮಾಡಲಾಗುತ್ತದೆ. ಸಮಸ್ಯೆಯನ್ನು ಮೇಲಧಿಕಾರಿ ಗಳ ಗಮನಕ್ಕೂ ತಂದಿದ್ದೇವೆ.ಶೀಘ್ರ ಪರಿಹಾರ ಸಿಗಲಿದೆ ಎಂದು ಫುಡ್ ಇನ್‌ಸ್ಪೆಕ್ಟರ್‌ಗಳು ಮಾಹಿತಿ ನೀಡಿದರು.
ಶೀಘ್ರ ಪೂರೈಕೆ: ಎಪಿಎಲ್ ಕಾರ್ಡ್‌ದಾರರಿಗೆ ಪಡಿತರ ವ್ಯವಸ್ಥೆಯಡಿ ಅಕ್ಕಿ ವಿತರಣೆ ಬೇಕಾದಷ್ಟು ಅಕ್ಕಿಯ ದಾಸ್ತಾನು ಇಲ್ಲದೇ ಕೊರತೆ ಆಗಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ರಾಜ್ಯ ಮಟ್ಟದ ಅಧಿಕಾರಿಗಳ ಗಮನಕ್ಕೂ ತರಲಾಗಿದೆ. ಶೀಘ್ರವೇ ಪೂರೈಕೆಯಾಗುವ ಸಾಧ್ಯತೆಯಿದೆ. ಫುಡ್ ಕಾರ್ಪೊರೇಶನ್ ಆಫ್ ಇಂಡಿಯಾದಿಂದ ಬಂದ ತತ್‌ಕ್ಷಣ ದಿಂದಲೇ ಪೂರೈಕೆ ಪ್ರಕ್ರಿಯೆ ಪುನರ್ ಆರಂಭಿಸಲಾಗುವುದು ಎಂದು ಇಲಾಖೆಯ ದ.ಕ. ಜಿಲ್ಲೆಯ ಉಪನಿರ್ದೇಶಕರಾದ ಎನ್. ಮಾಣಿಕ್ಯ, ಉಡುಪಿ ಜಿಲ್ಲೆಯ ಉಪನಿರ್ದೇಶಕರಾದ ಮೊಹಮ್ಮದ್ ಇಸಾಕ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.