ನಿಯಮ 69 ರ ಚರ್ಚೆಗೆ ಸಮಯವೇಕಿಲ್ಲ? :ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಆಕ್ಷೇಪ
Team Udayavani, Mar 21, 2022, 8:03 PM IST
ನಿಯಮ 69 ರ ಚರ್ಚೆ, ಸಮಯ,ಕಾಂಗ್ರೆಸ್ ಶಾಸಕಾಂಗ ಸಭೆ,ಆಕ್ಷೇಪ
ವಿಧಾನಸಭೆ : ಬಜೆಟ್ ಅಧಿವೇಶನ ಸಂದರ್ಭದಲ್ಲಿ ನಿಯಮ 69 ರ ಅನ್ವಯ ಚರ್ಚೆಗೆ ಅವಕಾಶ ನೀಡದೇ ಇರುವ ಬಗ್ಗೆ ಕಾಂಗ್ರೆಸ್ ಶಾಸಕರು ಈಗ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಕ್ಷೇಪ ವ್ಯಕ್ತವಾಗಿದೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ವಿಚಾರ ಪ್ರಸ್ತಾಪವಾಗಿದೆ. ಕಾಂಗ್ರೆಸ್ ಮಂಡಿಸಿರುವದೂ ಸೇರಿದಂತೆ ನಾಲ್ಕು ನಿಲುವಳಿ ಸೂಚನೆಯನ್ನು ನಿಯಮ 69 ಕ್ಕೆ ಪರಿವರ್ತಿಸಲಾಗಿದೆ. ಆದರೆ ಇದುವರೆಗೂ ಒಂದು ವಿಚಾರದ ಬಗ್ಗೆಯೂ ಚರ್ಚೆ ನಡೆದಿಲ್ಲ. ಇದು ಕಾಂಗ್ರೆಸ್ ಶಾಸಕರ ಆಕ್ಷೇಪಕ್ಕೆ ಕಾರಣವಾಗಿದೆ.
ಇದರ ಜತೆಗೆ ಬಿಟ್ ಕಾಯಿನ್, 40 ಪರ್ಸೆಂಟ್ ಕಮಿಷನ್, ಕಾನೂನು ಮತ್ತು ಸುವ್ಯವಸ್ಥೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಸದನದಲ್ಲಿ ಚರ್ಚೆ ನಡೆಸುವುದಕ್ಕೆ ಅವಕಾಶ ನೀಡಬೇಕೆಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆಯಾಗಿದೆ.
28ಕ್ಕೆಪಾಟೀಲ್ ಅಧಿಕಾರ : ಇದರ ಜತೆಗೆ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ.ಪಾಟೀಲ್ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮದ ಸಿದ್ಧತೆ ಬಗ್ಗೆ ಚರ್ಚಿಸಲಾಗಿದೆ. ಮಾರ್ಚ್ 28ಕ್ಕೆ ಅಧಿಕಾರ ಸ್ವೀಕಾರ ಸಮಾರಂಭ ನಡೆಯುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.