ಪ್ರಯೋಜನಕ್ಕೆ ಬಾರದ ಕೇಂದ್ರದ ಪ್ಯಾಕೇಜ್: ಖರ್ಗೆ
Team Udayavani, May 25, 2020, 9:19 PM IST
ಬೆಂಗಳೂರು: ಕೇಂದ್ರ ಸರ್ಕಾರ ಕೋವಿಡ್-19 ಸಂಕಷ್ಟದಿಂದ ಜನರನ್ನು ಪಾರು ಮಾಡಲು ಘೋಷಿಸಿರುವ 20 ಲಕ್ಷ ಕೋಟಿ ಪರಿಹಾರ ಯಾರಿಗೂ ಪ್ರಯೋಜನಕ್ಕೆ ಬರದಂತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ದೇಶದಲ್ಲಿ ಏಕಾಏಕಿ ಲಾಕ್ ಡೌನ್ ಘೋಷಣೆ ಮಾಡಿ 62 ದಿನಗಳು ಕಳೆದಿದ್ದು, ಕೇಂದ್ರ ಸರಕಾರ ಘೋಷಣೆ ಮಾಡಿರುವ 20 ಲಕ್ಷದ ಪ್ಯಾಕೇಜ್ ತಕ್ಷಣಕ್ಕೆ ಯಾರಿಗೂ ಅನುಕೂಲಕ್ಕೆ ಬಾರದಂತಿದೆ.
ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಪ್ರವಾಸೋದ್ಯಮ, ಸಾರಿಗೆ, ವಿಮಾನಯಾನ, ರೈಲ್ವೆ, ಹೋಟೆಲ್ ಸೇರಿದಂತೆ ವಲಯವಾರು ಪರಿಹಾರ ನೀಡಿದ್ದರೆ ಅವರಿಗೆ ಅನುಕೂಲವಾಗುತ್ತಿತ್ತು. ಅಲ್ಲದೆ ಕೇಂದ್ರ ಘೋಷಿಸಿರುವ ಪರಿಹಾರ ಒಟ್ಟು ಜಿಡಿಪಿಯ ಶೇ 1 ರಷ್ಟು ಮಾತ್ರ ಇದೆ ಎಂದು ತಜ್ಞರು ಅಭಿಪ್ರಾಯ ಪಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಪ್ರಚಾರಕ್ಕಾಗಿ ಈ ಪ್ಯಾಕೇಜ್ ಘೋಷಣೆ ಮಾಡಿದ್ದರಿಂದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪರಿಹಾರ ಘೋಷಣೆ ಮಾಡಲು ಪರದಾಡುವಂತಾಯಿತು. ಅಲ್ಲದೇ ಪ್ರಧಾನ ಮಂತ್ರಿಯ ಆರ್ಥಿಕ ಸಲಹೆಗಾರರು ಇಷ್ಟೊಂದು ದೊಡ್ಡ ಪ್ರಮಾಣದ ಪ್ಯಾಕೇಜ್ ನೀಡಲು ವಾಸ್ತವವಾಗಿ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಕೇಂದ್ರದ ಆರ್ಥಿಕ ಪರಿಹಾರ ರೈತರಿಗೆ ತಕ್ಷಣಕ್ಕೆ ಅನುಕೂಲಕ್ಕೆ ಬರುವಂತಾಗಿದ್ದರೆ ಆಹಾರ ಉತ್ಪಾದನೆ ಹೆಚ್ಚಳಕ್ಕೆ ಅನುಕೂಲವಾಗುತ್ತಿತ್ತು. ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ನಾಲ್ಕು ತಿಂಗಳಿಗೊಮ್ಮೆ ನೀಡುವ 2 ಸಾವಿರ ರೂ. ಯಾವುದಕ್ಕೂ ಪ್ರಯೋಜನ ಬರುವುದಿಲ್ಲ ಎಂದು ಖರ್ಗೆ ಆರೋಪಿಸಿದ್ದಾರೆ.
ಅಲ್ಲದೆ ಕೇಂದ್ರ ಸರ್ಕಾರ ನರೆಗಾ ಯೋಜನೆಗೆ ನೀಡಿರುವ 40 ಸಾವಿರ ಕೋಟಿ ಹೆಚ್ಚುವರಿ ಪರಿಹಾರ 10 ಕೃಷಿ ಕಾರ್ಮಿಕರ ಜೊತೆಗೆ 8 ಕೋಟಿ ವಲಸೆ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಲು ಸಾಧ್ಯವಾಗುವುದಿಲ್ಲ. ಇದರಿಂದ ಕಾರ್ಮಿಕರಿಗೆ ಕನಿಷ್ಟ 20 ದಿನ ಮಾತ್ರ ಉದ್ಯೋಗ ನೀಡಬಹುದು ಎಂದು ಖರ್ಗೆ ಹೇಳಿದ್ದಾರೆ.
ಕೋವಿಡ್-19 ಸಂದರ್ಭದಲ್ಲಿ ಕೇಂದ್ರ ಸರ್ಕಾರ ಕಾರ್ಮಿಕರು ಹಾಗೂ ಉದ್ಯಮಿಗಳಿಗೆ ಸೂಕ್ತ ಪರಿಹಾರ ದೊರಕಿಸಿಕೊಡುವಲ್ಲಿ ವಿಫಲವಾಗಿದೆ ಎಂದು ಖರ್ಗೆ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal: ಸರ್ಕಾರಿ ಬಸ್ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!
Wine Merchants: ನಾಳೆಯ ಮದ್ಯ ಮಾರಾಟ ಬಂದ್ ನಿರ್ಧಾರ ವಾಪಸ್ ಪಡೆದ ಅಸೋಸಿಯೇಷನ್
Darshan: ದರ್ಶನ್ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Ration Card: ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.