ವಾಹನ ಪಾರ್ಕಿಂಗ್ ಮೀಸಲು ಸ್ಥಳದ ವಾಣಿಜ್ಯ ಅಂಗಡಿ ತೆರವಿಗೆ ಸೂಚನೆ
Team Udayavani, Feb 25, 2021, 4:50 AM IST
ಉಡುಪಿ: ಬಹು ಮಹಡಿ ಕಟ್ಟಡ, ವಾಣಿಜ್ಯ ಸಂಕೀರ್ಣಗಳಲ್ಲಿ ಅನುಮೋದಿತ ನಕ್ಷೆಯಲ್ಲಿರುವಂತೆ ವಾಹನ ಪಾರ್ಕಿಂಗ್‌ಗೆ ಸ್ಥಳಾವಕಾಶ ಕಲ್ಪಿಸಬೇಕಾಗಿದ್ದು ಇಂತಹ ಕಡೆ ಬೇರೆ ಉದ್ದೇಶಗಳಿಗೆ ಬಳಸಿಕೊಂಡಿದ್ದರೆ ಅದನ್ನು ತೆರವುಗೊಳಿಸಲು ನಗರಸಭೆ ಸೂಚಿಸಿದೆ.
ಕೆಲವು ವಾಣಿಜ್ಯ ಸಂಕೀರ್ಣ, ವಸತಿ ಸಮುಚ್ಚಯದವರು ಅನುಮೋದಿತ ನಕ್ಷೆಯಂತೆ ಪಾರ್ಕಿಂಗ್ ಜಾಗವನ್ನು ಅತಿಕ್ರಮಿಸಿ ವಾಣಿಜ್ಯ, ಇತರ ಚಟುವಟಿಕೆಗಳಿಗೆ ಬಳಸುತ್ತಿ ರುವುದು ಕಾನೂನುಬಾಹಿರವಾಗಿದೆ. ಇದರಿಂದ ಸಾರ್ವ ಜನಿಕರು ತಮ್ಮ ವಾಹನಗಳನ್ನು ರಸ್ತೆ ಬದಿಯ ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡುತ್ತಿದ್ದಾರೆ. ಇದರಿಂದ ಸುಗಮ ಜನಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ.
ಪಾರ್ಕಿಂಗ್‌ಗಾಗಿ ಮೀಸಲಿರಿಸಿದ ಸ್ಥಳಗಳಲ್ಲಿರುವ ವಾಣಿಜ್ಯ ಅಂಗಡಿಗಳನ್ನು ತೆರವುಗೊಳಿಸಿ, ಮಂಜೂರಾದ ಅನುಮೋದಿತ ನಕ್ಷೆಯಂತೆ ವಾಹನ ನಿಲುಗಡೆಗೆ 15 ದಿನಗಳಲ್ಲಿ ಸ್ಥಳಾವಕಾಶವನ್ನು ಕಲ್ಪಿಸಿಕೊಡಬೇಕು. ತಪ್ಪಿದಲ್ಲಿ ಸಮುಚ್ಚಯಗಳಿಗೆ ನೀಡಲಾದ ಮೂಲ ಸೌಕರ್ಯಗಳನ್ನು ಸ್ಥಗಿತಗೊಳಿಸಲಾಗುವುದು. ತಪ್ಪು ಮಾಹಿತಿ ನೀಡಿ ಪಡೆಯ ಲಾದ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಿ, ಅಕ್ರಮವಾಗಿ ಪಾರ್ಕಿಂಗ್ ಜಾಗದಲ್ಲಿ ನಿರ್ಮಿಸಿದ್ದರೆ ಅದ ನ್ನು ತೆರವುಗೊಳಿಸಿ, ಭಾರೀ ದಂಡದೊಂದಿಗೆ ಕ್ರಮ ವಹಿಸಲಾಗುವುದು ಎಂದು ಪೌರಾಯುಕ್ತರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.