ಹಿರೇಮಗಳೂರು ಕಣ್ಣನ್ ಗೆ ನೋಟಿಸ್; ಸ್ಪಷ್ಟನೆ ನೀಡಿದ ಸಚಿವ ರಾಮಲಿಂಗಾ ರೆಡ್ಡಿ
Team Udayavani, Jan 23, 2024, 3:29 PM IST
ಬೆಂಗಳೂರು: ಕನ್ನಡದ ಪೂಜಾರಿ ಎಂದೇ ಖ್ಯಾತಿ ಪಡೆದ ಹಿರೇಮಗಳೂರು ಕಣ್ಣನ್ ಅವರಿಗೆ ಚಿಕ್ಕಮಗಳೂರು ಜಿಲ್ಲಾಡಳಿತವು ವೇತನ ಕಡಿತದ ನೋಟಿಸ್ ನೀಡಿರುವುದು ಇದೀಗ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಪ್ರಕರಣ ತೀವ್ರತೆ ಪಡೆಯುತ್ತಿದ್ದಂತೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನಿಡಿದ್ದಾರೆ.
‘ಹಿರೇಮಗಳೂರು ಕಣ್ಣನ್ ಅವರು ನೋಟಿಸ್ ನಿಂದ ದೃತಿಗೆಡುವುದು ಬೇಡ. ಇದು ತಹಶೀಲ್ದಾರ್ ತಪ್ಪು. ಹೀಗಾಗಿ ಅವರೇ ಹಣ ಪಾವತಿಸಿ ಎಂದು ನೋಟಿಸ್ ನೀಡುತ್ತೇವೆ. ಸ್ಥಳಿಯ ತಹಶೀಲ್ದಾರ್ 90 ಸಾವಿರ ಹಣ ಪಾವತಿಸಿ ಸಮಸ್ಯೆ ಸೃಷ್ಟಿಸಿದ್ದಾರೆ. ಬೇರೆ ಯಾವುದೇ ಮುಜರಾಯಿ ದೇಗುಲದಲ್ಲಿ ಈ ಸಮಸ್ಯೆಯಾಗಿಲ್ಲ. ಹೀಗಾಗಿ ಸ್ಥಳೀಯ ತಹಶೀಲ್ದಾರ್ ಗೆ ಹಣ ಪಾವತಿಸುವಂತೆ ನೋಟಿಸ್ ನೀಡುತ್ತೇವೆ. ಈ ಸಮಸ್ಯೆಯನ್ನು ನಾನು ಕೂಡಲೇ ಬಗೆಹರಿಸುತ್ತೇನೆ” ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ಚಿಕ್ಕಮಗಳೂರು ಹೊರ ವಲಯದಲ್ಲಿರುವ ಶ್ರೀ ಕೋದಂಡ ರಾಮಚಂದ್ರ ಸ್ವಾಮಿ ದೇವಾಲಯದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಹಿರೇಮಗಳೂರು ಕಣ್ಣನ್ ಅವರಿಗೆ ಜಿಲ್ಲಾಡಳಿತ ನೋಟಿಸ್ ನೀಡಿತ್ತು. ಕನ್ನಡದ ಪಂಡಿತ, ಕನ್ನಡದ ಪೂಜಾರಿ ಎಂದೇ ಖ್ಯಾತಿ ಪಡೆದಿರುವ ಹಿರೇಮಗಳೂರು ಕಣ್ಣನ್ ಅವರ ವೇತನವನ್ನು ತಡೆ ಹಿಡಿದು, 4500 ರೂ 10 ವರ್ಷಕ್ಕೆ 4,74,000 ರೂ. ಹಣವನ್ನು ಸರ್ಕಾರಕ್ಕೆ ವಾಪಸ್ ನೀಡುವಂತೆ ಚಿಕ್ಕಮಗಳೂರು ಜಿಲ್ಲಾಡಳಿತ ನೋಟಿಸ್ ಜಾರಿ ಮಾಡಿದೆ.
ರಾಜ್ಯ ಸರ್ಕಾರ ಪ್ರತಿ ತಿಂಗಳು 7500 ರೂ. ವೇತನ ನೀಡುತ್ತಿತ್ತು. ಆದರೆ, ಇದೀಗ ದೇವಾಲಯದ ಆದಾಯ ಕಡಿಮೆ ಇದೆ ಎಂಬ ಕಾರಣ ನೀಡಿ ಈ ಹಿಂದೆ ನೀಡಿದ್ದ 7500 ರೂ. ವೇತನದಲ್ಲಿ 4500 ರೂ. ಅನ್ನು ವಾಪಸ್ ನೀಡುವಂತೆ, ಈ ತಿಂಗಳ ವೇತನವನ್ನು ತಡೆ ಹಿಡಿದು ತಹಶಿಲ್ದಾರ್ ಸುಮಂತ್ ನೋಟಿಸ್ ಜಾರಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.