Nuclear Power Plant: ಪಾಕ್‌ನಲ್ಲಿ ಚೀನಾದಿಂದ ಪರಮಾಣು ವಿದ್ಯುತ್ ಸ್ಥಾವರ!
- 1,200 ಮೆಗಾವ್ಯಾಟ್ ಸಾಮರ್ಥ್ಯದ ಸ್ಥಾವರ
Team Udayavani, Jun 21, 2023, 8:08 AM IST
ಇಸ್ಲಾಮಾಬಾದ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ 4.8 ಬಿಲಿಯನ್ ಅಮೆರಿಕನ್ ಡಾಲರ್ ಮೌಲ್ಯದ 1,200 ಮೆಗಾವ್ಯಾಟ್ ಸಾಮರ್ಥ್ಯದ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಯ ಒಪ್ಪಂದಕ್ಕೆ ಚೀನಾ-ಪಾಕ್ ಮಂಗಳವಾರ ಪರಸ್ಪರ ಸಹಿ ಹಾಕಿವೆ.
“ಚಷ್ಮಾ-5” ಪರಮಾಣು ವಿದ್ಯುತ್ ಸ್ಥಾವರವು ಪಂಜಾಬ್ ಪ್ರಾಂತ್ಯದ ಮಿಯಾನ್‌ವಾಲಿ ಜಿಲ್ಲೆಯ ಚಷ್ಮಾದಲ್ಲಿ ನಿರ್ಮಾಣವಾಗಲಿದೆ. ಒಪ್ಪಂದಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಸಾಕ್ಷಿಯಾದರು. ಈ ವೇಳೆ ಮಾತನಾಡಿದ ಅವರು, “ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಪಾಕಿಸ್ತಾನದಲ್ಲಿ ವಿದ್ಯುತ್ ಸ್ಥಾವರ ಸ್ಥಾಪನೆಗೆ ಚೀನಾ ಹೂಡಿಕೆ ಮಾಡುತ್ತಿರುವುದು ಉಭಯ ರಾಷ್ಟ್ರಗಳ ನಡುವಿನ ಆರ್ಥಿಕ ಸಹಕಾರವನ್ನು ಹೆಚ್ಚಿಸಲಿದೆ. ಈ ಯೋಜನೆಯನ್ನು ಶೀಘ್ರ ಆರಂಭಿಸಲಾಗುವುದು,’ ಎಂದರು.
ಯುಎಇ ತೆಕ್ಕೆಗೆ ಕರಾಚಿ ಬಂದರು?
ತೀವ್ರ ಆರ್ಥಿಕ ದುಸ್ಥಿತಿ ಎದುರಿಸುತ್ತಿರುವ ಪಾಕಿಸ್ತಾನವು, ತನ್ನ ಕರಾಚಿ ಬಂದರು ಟರ್ಮಿನಲ್ಸ್ ಅನ್ನು ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ) ತೆಕ್ಕೆಗೆ ನೀಡುವ ನಿಟ್ಟಿನಲ್ಲಿ ಸಮಿತಿಯೊಂದನ್ನು ರಚಿಸಿದೆ. ಒಪ್ಪಂದ ಅಂತಿಮವಾದರೆ ಪಾಕಿಸ್ತಾನಕ್ಕೆ ತುರ್ತು ಆರ್ಥಿಕ ಅನುದಾನ ಸಿಗಲಿದೆ. ಪಾಕ್ ಹಣಕಾಸು ಸಚಿವ ಇಶಾಕ್ ದಾರ್ ನೇತೃತ್ವದಲ್ಲಿ ಅಂತರ್ ಸರ್ಕಾರಿ ವಾಣಿಜ್ಯ ವಹಿವಾಟುಗಳ ಸಂಪುಟ ಸಮಿತಿಯು ಸೋಮವಾರ ಸಭೆ ನಡೆಸಿತು. ಈ ವೇಳೆ ಕರಾಚಿ ಬಂದರು ಟ್ರಸ್ಟ್ ಮತ್ತು ಯುಎಇ ಸರ್ಕಾರ ನಡುವೆ ವಾಣಿಜ್ಯ ಒಪ್ಪಂದ ಏರ್ಪಡುವ ನಿಟ್ಟಿನಲ್ಲಿ ಸಮಿತಿ ರಚಿಸಲು ನಿರ್ಧರಿಸಿತು. ಈ ಸಮಿತಿಯು ಒಪ್ಪಂದದ ಅಂತಿಮ ರೂಪುರೇಷೆಗಳನ್ನು ಸಿದ್ಧಪಡಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.