UCC ಅಭಿಪ್ರಾಯ ಮರುಸಂಗ್ರಹಕ್ಕೆ ಆಕ್ಷೇಪ: ಕಾನೂನು ಆಯೋಗದ ಕ್ರಮಕ್ಕೆ ಕಾಂಗ್ರೆಸ್, JDU ಟೀಕೆ
Team Udayavani, Jun 16, 2023, 7:24 AM IST
ನವದೆಹಲಿ: ಸಮಾನ ನಾಗರಿಕ ಸಂಹಿತೆ ಜಾರಿ ಮಾಡಬೇಕೇ, ಬೇಡವೇ ಎಂಬ ಕುರಿತು ಮತ್ತೂಮ್ಮೆ ಸಾರ್ವಜನಿಕರು, ಧಾರ್ಮಿಕ ಸಂಘ ಸಂಸ್ಥೆಗಳ ಅಭಿಪ್ರಾಯ ಸಂಗ್ರಹಿಸಲು ಕಾನೂನು ಆಯೋಗ ಮುಂದಾಗಿರುವಂತೆಯೇ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಆಯೋಗದ ನಿರ್ಧಾರವು, ಧ್ರುವೀಕರಣ ಮತ್ತು ತಮ್ಮ ವೈಫಲ್ಯಗಳಿಂದ ಜನರ ಹಾದಿ ತಪ್ಪಿಸಲು ನರೇಂದ್ರ ಮೋದಿ ನೇತೃತ್ವದ ಸರ್ಕಾರ ತನ್ನ ಹತಾಶ ಪ್ರಯತ್ನವನ್ನು ಮುಂದುವರಿಸಿರುವುದಕ್ಕೆ ಸಾಕ್ಷಿ ಎಂದು ಕಾಂಗ್ರೆಸ್ ಆರೋಪಿಸಿದೆ. 2018ರ ಆಗಸ್ಟ್‌ನಲ್ಲೇ 21ನೇ ಕಾನೂನೂ ಆಯೋಗವು ಸಮಾಲೋಚನಾ ಪತ್ರವನ್ನು ಪ್ರಕಟಿಸಿದ್ದರೂ, ಈಗ ಕಾನೂನು ಆಯೋಗ ಮತ್ತೂಮ್ಮೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿರುವುದು ಅಚ್ಚರಿಯ ವಿಚಾರ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಸಂವಹನ) ಜೈರಾಂ ರಮೇಶ್ ಹೇಳಿದ್ದಾರೆ. ಅಲ್ಲದೆ, ಮತ್ತೂಮ್ಮೆ ಸಲಹೆ ಸಂಗ್ರಹಿಸಲು ಕಾರಣವೇನು ಎಂದೂ ಆಯೋಗ ತಿಳಿಸಿಲ್ಲ ಎಂದಿದ್ದಾರೆ.
ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ:
ಇನ್ನೊಂದೆಡೆ, ಯುಸಿಸಿ ವಿಚಾರದಲ್ಲಿ ಸರ್ಕಾರವು ಸರ್ವ ಸಮ್ಮತವನ್ನು ಪಡೆಯಲು ಯತ್ನಿಸಬೇಕು ಎಂದು ಹೇಳಿರುವ ಜೆಡಿಯು, ಆಯೋಗವು ಈ ವಿಚಾರದಲ್ಲಿ ವಿವಿಧ ಧರ್ಮಗಳು ಮತ್ತು ಸಮುದಾಯಗಳ ಸದಸ್ಯರು ಸೇರಿದಂತೆ ಸಂಬಂಧಪಟ್ಟ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾ*ಚಾರ!
Jammu Kashmir: ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ
Drone; ಸ್ತ್ರೀ ಸಶಕ್ತೀಕರಣಕ್ಕೆ ನಮೋ ಡ್ರೋನ್ ದೀದಿಗೆ ಕೇಂದ್ರ ಸರಕಾರ ಚಾಲನೆ
MUST WATCH
ಹೊಸ ಸೇರ್ಪಡೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Abhimanyu Kashinath; ಸೂರಿ ಲವ್ ಗೆ ಉಪ್ಪಿ ಮೆಚ್ಚುಗೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.