ಒಕ್ಕಲಿಗ ಸಮುದಾಯದ ಅಭಿವೃದ್ದಿಗೂ ಪ್ರತ್ಯೇಕ ನಿಗಮ ಸ್ಥಾಪಿಸಿ: ಯಲುವಹಳ್ಳಿ ರಮೇಶ್ ಒತ್ತಾಯ
Team Udayavani, Nov 18, 2020, 3:39 PM IST
ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಅಭಿವೃದ್ದಿ ನಿಗಮ ಸ್ಥಾಪಿಸಿರುವುದು ಸಂತೋಷ ಅದರಂತೆ ಒಕ್ಕಲಿಗ ಸಮುದಾಯದ ಅಭಿವೃದ್ದಿಗಾಗಿ ನಿಗಮವನ್ನು ಸ್ಥಾಪಿಸಬೇಕೆಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಯಲುವಹಳ್ಳಿ ರಮೇಶ್ ಒತ್ತಾಯಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು ವೀರಶೈವ ಸಮಾಜದ ಅಭಿವೃದ್ದಿಗಾಗಿ ನಿಗಮವನ್ನು ಸ್ಥಾಪಿಸಲಾಗಿದೆ ಅದೇ ರೀತಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಅನ್ನದಾತವಾಗಿರುವ ಮತ್ತು ಕೃಷಿಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಒಕ್ಕಲಿಗರಲ್ಲೂ ಸಹ ಅನೇಕ ಮಂದಿ ಕೂಲಿ ಕಾರ್ಮಿಕರು ಮತ್ತು ಬಡವರಿದ್ದು ಅವರ ಶೈಕ್ಷಣಿಕ ಪ್ರಗತಿ ಮತ್ತು ಆರ್ಥಿಕ ಅಭಿವೃದ್ದಿಗಾಗಿ ಒಕ್ಕಲಿಗರ ಅಭಿವೃದ್ದಿ ನಿಗಮವನ್ನು ಸ್ಥಾಪಿಸಬೇಕೆಂದು ಆಗ್ರಹಿಸಿದರು.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೃಷಿ ಕಾರ್ಮಿಕರಾಗಿ ಒಕ್ಕಲಿಗರು ಕಾರ್ಯನಿರ್ವಹಿಸುತ್ತಿದ್ದಾರೆ ಅವರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಮತ್ತು ಆರ್ಥಿಕವಾಗಿ ಅಭಿವೃದ್ದಿ ಹೊಂದಲು ಒಕ್ಕಲಿಗರ ಸಮುದಾಯಕ್ಕೂ ಸಹ ಪ್ರತ್ಯೇಕ ನಿಗಮವನ್ನು ಸ್ಥಾಪಿಸಲು ಒತ್ತಾಯ ಮೊದಲಿನಿಂದಲೂ ಕೇಳಿ ಬರುತ್ತಿದೆ. ರಾಜ್ಯ ಮತ್ತು ರಾಷ್ಟ್ರದ ಅಭಿವೃದ್ದಿಯಲ್ಲಿ ಒಕ್ಕಲಿಗ ಸಮುದಾಯ ತನ್ನದೇ ಆದ ರೀತಿಯಲ್ಲಿ ಕೊಡುಗೆ ನೀಡಿದೆ ಸರ್ಕಾರ ಸಮುದಾಯದ ಅಭಿವೃದ್ದಿಗಾಗಿ ನಿಗಮವನ್ನು ಸ್ಥಾಪಿಸಿ ಅನುಕೂಲ ಕಲ್ಪಿಸಬೇಕೆಂದರು.
ಇದನ್ನೂ ಓದಿ:ಡಿ.1ಕ್ಕೆ ರಾಜ್ಯಸಭಾ ಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಿ ಕೆ.ನಾರಾಯಣ್ ನಾಮಪತ್ರ ಸಲ್ಲಿಕೆ
ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಬಳಲುತ್ತಿರುವ ಜನರಿಗೆ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡಲು ವಿಫಲವಾಗಿರುವ ಸರ್ಕಾರ ರಾಜ್ಯದ ಗಡಿ ವಿಷಯದಲ್ಲಿ ಕನ್ನಡಿಗರನ್ನು ಕೆಣಕುವ ಮರಾಠ ಸಮುದಾಯದ ಅಭಿವೃದ್ದಿಗಾಗಿ ಪ್ರತ್ಯೇಕ ಪ್ರಾಧಿಕಾರ ಸ್ಥಾಪನೆ ಮಾಡಿರುವುದನ್ನು ತೀವ್ರವಾಗಿ ಖಂಡಿಸಿದ ಅವರು ಸರ್ಕಾರ ಈ ನಿರ್ಧಾರವನ್ನು ವಾಪಸ್ಸು ಪಡೆಯದಿದ್ದ ಪಕ್ಷದಲ್ಲಿ ರಾಜ್ಯಾದ್ಯಂತ ಕನ್ನಡ ಪರ ಮತ್ತು ಪ್ರಗತಿ ಪರ ಸಂಘಟನೆಗಳು ಬೀದಿಗಿಳಿದು ಉಗ್ರ ರೀತಿಯ ಪ್ರತಿಭಟನೆ ಮಾಡಲಿದ್ದಾರೆ ಎಂದು ಎಚ್ಚರಿಸಿದರು.
ರಾಜ್ಯದ ಗಡಿ ಪ್ರದೇಶದಲ್ಲಿ ಸ್ವಾಭಿಮಾನಿ ಕನ್ನಡಿಗರಿಗೆ ಮರಾಠಿಗರು ವಿನಾಕಾರಣ ತೊಂದರೆ ಮತ್ತು ಕಿರುಕುಳ ನೀಡುತ್ತಿದ್ದಾರೆ ಸರ್ಕಾರ ಗಡಿ ಪ್ರದೇಶಗಳಿಗೆ ಹೊಂದುಕೊಂಡಿರುವ ಜಿಲ್ಲೆಗಳಲ್ಲಿರುವ ಕನ್ನಡಿಗರಿಗೆ ಅವರ ಅಭಿವೃದ್ದಿಗಾಗಿ ವಿಶೇಷ ಯೋಜನೆ ಮತ್ತು ಕಾರ್ಯಕ್ರಮಗಳನ್ನು ರೂಪಿಸುವುದರಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಅದೇ ರೀತಿ ಕನ್ನಡ ಅಭಿವೃದ್ದಿಗಾಗಿ ಇರುವ ಪ್ರಾಧಿಕಾರಕ್ಕೆ ವಿಶೇಷ ಅನುದಾನ ನೀಡುವ ಬದಲಿಗೆ ಮರಾಠ ಸಮುದಾಯದ ಅಭಿವೃದ್ದಿಗಾಗಿ 50 ಕೋಟಿ ರೂ.ಗಳು ಮೀಸಲಿಟ್ಟು ಪ್ರತ್ಯೇಕ ಪ್ರಾಧಿಕಾರ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿ ಸರ್ಕಾರದ ಧೋರಣೆಯನ್ನು ಬಲವಾಗಿ ಖಂಡಿಸಿದರು.
ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ದಿವ್ಯ ನಿರ್ಲಕ್ಷ ವಹಿಸಿರುವ ಸರ್ಕಾರ ಮರಾಠಿಗರಿಗೆ ಪ್ರತ್ಯೇಕ ಪ್ರಾಧಿಕಾರ ಮಾಡಿರುವುದು ನೋಡಿದರೆ ಮುಂದಿನ ದಿನಗಳಲ್ಲಿ ಗಡಿ ಪ್ರದೇಶಗಳ ಜಿಲ್ಲೆಗಳನ್ನು ಮಹಾರಾಷ್ಟ್ರದಲ್ಲಿ ಸೇರ್ಪಡೆ ಮಾಡುವ ನಿರ್ಧಾರ ತೆಗೆದುಕೊಳ್ಳುವ ದಿನಗಳು ದೂರವಿಲ್ಲ ಎಂಬ ಅನುಮಾನ ಕನ್ನಡಿಗರು ಮತ್ತು ಕನ್ನಡ ಅಭಿಮಾನಿಗಳಿಗೆ ಮೂಡುವಂತಾಗಿದೆ ಮಹಾರಾಷ್ಟ್ರದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಅವರ ಪ್ರತಿಮೆಯನ್ನು ಸ್ಥಾಪಿಸಲು ಅವಕಾಶ ಮಾಡಿಕೊಟ್ಟಿಲ್ಲ ಅಂತಹದರಲ್ಲಿ ರಾಜ್ಯ ಬಿಜೆಪಿ ಸರ್ಕಾರ ಮರಾಠಿಗರಿಗೆ ಪ್ರತ್ಯೇಕ ಅಭಿವೃದ್ದಿ ಪ್ರಾಧಿಕಾರ ಮಾಡುವ ಮೂಲಕ ಕನ್ನಡಿಗರನ್ನು ಅಪಮಾನಗೊಳಿಸಿದೆ ಕೂಡಲೇ ಮುಖ್ಯಮಂತ್ರಿಗಳು ಈ ವಿಚಾರದಲ್ಲಿ ತಮ್ಮ ನಿಲುವು ಬದಲಾಯಿಸಿ ಪ್ರತ್ಯೇಕ ಪ್ರಾಧಿಕಾರದ ಅದೇಶವನ್ನು ವಾಪಸ್ಸು ಪಡೆಯಬೇಕೆಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.