ಒಂದೂವರೆ ಲಕ್ಷ ಕೋ. ರೂ. ಲೂಟಿ: ಕಾಂಗ್ರೆಸ್ ಆರೋಪ
Team Udayavani, May 7, 2023, 7:57 AM IST
ಬೆಂಗಳೂರು: ನಾಲ್ಕು ವರ್ಷಗಳಲ್ಲಿ ಮುಖ್ಯಮಂತ್ರಿ ಹುದ್ದೆಯೂ ಸೇರಿ ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ನಡೆದ ವಿವಿಧ ಪ್ರಮಾಣದ ಭ್ರಷ್ಟಾಚಾರದಲ್ಲಿ ಬಿಜೆಪಿ ಸರಕಾರ ಅಂದಾಜು ಒಂದೂವರೆ ಲಕ್ಷ ಕೋಟಿ ರೂ. ಲೂಟಿ ಮಾಡಿದ್ದು, ಇದು ಒಂದು ವರ್ಷದ ಇಡೀ ರಾಜ್ಯದ ಬಜೆಟ್‌ನ ಅರ್ಧದಷ್ಟಾಗಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.
ಸರಕಾರದ ಭ್ರಷ್ಟಾಚಾರದ ರೇಟ್ ಕಾರ್ಡ್ ಬಿಡುಗಡೆ ಮಾಡಿರುವ ಕಾಂಗ್ರೆಸ್ ನಾಯಕರು, ಆಡಳಿತ ಪಕ್ಷದ ಶಾಸಕರು, ಸಚಿವರು ವಿವಿಧ ಸಂದರ್ಭಗಳಲ್ಲಿ ಮಾಡಿದ ಆರೋಪಗಳನ್ನು ಕ್ರೋಡೀಕರಿಸಿ ಭ್ರಷ್ಟಾಚಾರ ಪ್ರಮಾಣದ ಪಟ್ಟಿ ಮಾಡಿದ್ದಾರೆ. ಅದರಂತೆ ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ರೂ., ಸಚಿವರ ಹುದ್ದೆಗೆ 500 ಕೋಟಿ ರೂ., ನೇಮಕಾತಿ ಮತ್ತು ವರ್ಗಾವಣೆಗೆ ಸಂಬಂಧಿಸಿ ಕೆಎಸ್‌ಡಿಎಲ್‌ನಲ್ಲಿ 5ರಿಂದ 15 ಕೋಟಿ, ಎಂಜಿನಿಯರ್‌ಗೆ 1- 5 ಕೋಟಿ, ಸಬ್ ರಿಜಿಸ್ಟ್ರಾರ್ 50 ಲಕ್ಷದಿಂದ 5 ಕೋಟಿ, ಬೆಸ್ಕಾಂನಲ್ಲಿ 1 ಕೋಟಿ ಹೀಗೆ ವಿವಿಧ ವಿಭಾಗಗಳಲ್ಲಿ ಭ್ರಷ್ಟಾಚಾರವು ಕನಿಷ್ಠ 40ರಿಂದ ಗರಿಷ್ಠ 75ರಷ್ಟು ಆಗಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲೇ ಠಿಕಾಣಿ ಹೂಡಿದ್ದರೂ ಈ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದು ದೂರಿದ್ದಾರೆ.
ಭ್ರಷ್ಟಾಚಾರದ ರೇಟ್ ಕಾರ್ಡ್‌ನಲ್ಲಿ ಕೋವಿಡ್ ಕಿಟ್ ಪೂರೈಕೆಯಲ್ಲಿ ಅತಿ ಹೆಚ್ಚು ಶೇ. 75ರಷ್ಟು ಭ್ರಷ್ಟಾಚಾರ ನಡೆದಿದ್ದರೆ, ಮೊಟ್ಟೆ ಪೂರೈಕೆಯಲ್ಲಿ ಅತಿ ಕಡಿಮೆ ಶೇ. 30ರಷ್ಟು ಲಂಚಾವತಾರ ಆಗಿದೆ. ಬಿಡಿಎ ಆಯುಕ್ತ, ಕೆಪಿಎಸ್ಸಿ ಅಧ್ಯಕ್ಷ, ಡಿಸಿ ಮತ್ತು ಎಸ್‌ಪಿ, ಉಪಕುಲಪತಿ, ಎಸಿ ಮತ್ತು ತಹಶೀಲ್ದಾರ್ ಹುದ್ದೆಗಳಿಗೆ ಕನಿಷ್ಠ 50 ಲಕ್ಷದಿಂದ ಗರಿಷ್ಠ 15 ಕೋಟಿ ರೂ.ವರೆಗೆ ಡೀಲ್ ನಡೆದಿದೆ ಎಂದು ಆರೋಪಿಸಿದರು.
ಕಪೋಲಕಲ್ಪಿತ ಅಲ್ಲ; ಕಟುಸತ್ಯ
ಈ ಸಂಬಂಧ ಕಾಂಗ್ರೆಸ್ ನಾಯಕರು ಟ್ವೀಟ್ ಜತೆಗೆ ಪ್ರತ್ಯೇಕ ಸುದ್ದಿಗೋಷ್ಠಿ ಮಾಡಿ ಬಿಜೆಪಿ ವಿರುದ್ಧ ಮುಗಿಬಿದ್ದರು. ತಮಿಳುನಾಡು ಮತ್ತು ಪುದುಚೇರಿ ರಾಜ್ಯಗಳ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಮಾತನಾಡಿ, ನಾವು ಈ ರಿಪೋರ್ಟ್ ಕಾರ್ಡನ್ನು ಸ್ಪಷ್ಟ ಮಾಹಿತಿಯ ಆಧಾರದಲ್ಲಿ ಹೇಳಿದ್ದೇವೆ. ಇದೇನೂ ಕಪೋಲಕಲ್ಪಿತ ಸುದ್ದಿಯಲ್ಲ. ಅವರದ್ದೇ ಶಾಸಕರು ನೀಡಿದ ಹೇಳಿಕೆಗಳು. ನಾವು ಕಲೆಹಾಕಿದ ಮಾಹಿತಿಯಿಂದ ತಿಳಿದುಬಂದದ್ದಾಗಿದೆ ಎಂದು ದೂರಿದರು.
ರಾಷ್ಟ್ರೀಯ ನಾಯಕರು ಉತ್ತರಿಸಲಿ
ಎಐಸಿಸಿ ಮಾಧ್ಯಮ ಹಾಗೂ ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಮಾತನಾಡಿ, ರೈತರು, ಮಹಿಳೆಯರು, ಯುವಕರು, ಕಾರ್ಮಿಕರು ಸೇರಿ ಸಮಾಜದ ಎಲ್ಲ ವರ್ಗಗಳು ಈ 40 ಪರ್ಸೆಂಟ್ ಸರಕಾರದ ದುರಾಡಳಿತಕ್ಕೆ ಬಲಿಯಾಗಿವೆ. ಬಿಜೆಪಿ ರಾಷ್ಟ್ರೀಯ ನಾಯಕರು ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪ್ರವಾಸ ಮಾಡುತ್ತಿದ್ದು, ಉಳಿದ ನಾಲ್ಕು ದಿನಗಳಲ್ಲಿ ಸರಕಾರದ ಭ್ರಷ್ಟಾಚಾರದ ಬಗ್ಗೆ ಉತ್ತರ ನೀಡಬೇಕೆಂದು ಆಗ್ರಹಿಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಜಯ್ ಮಕೇನ್ ಮಾತನಾಡಿ, ಬಿಜೆಪಿಯ ಭ್ರಷ್ಟಾಚಾರದ ಪ್ರಮಾಣ ನೋಡಿ ಆಘಾತವಾಗಿದೆ. 1.50 ಲಕ್ಷ ಕೋಟಿ ರೂ. ಅನ್ನು ಈ ಸರಕಾರ ರಾಜ್ಯದ ಜನರಿಂದ ಲೂಟಿ ಮಾಡಿದೆ. ಇದು ಬಿಜೆಪಿ ಸರಕಾರ ರಾಜ್ಯಕ್ಕೆ ನೀಡಿರುವ ಕೊಡುಗೆ. ಹೀಗಾಗಿ ರಾಜ್ಯದ ಜನ ಕಾಂಗ್ರೆಸ್ ಪಕ್ಷವನ್ನು 150 ಕ್ಷೇತ್ರಗಳಲ್ಲಿ ಗೆಲ್ಲಿಸಲಿ¨ªಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.