ಆನ್‌ಲೈನ್ ಕ್ಲಾಸ್ ನಡೆಯುತ್ತಿರುವ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ
Team Udayavani, Aug 17, 2021, 8:14 PM IST
ವಾಡಿ (ಚಿತ್ತಾಪುರ): ಕಾಲೇಜಿನಿಂದ ಬಿತ್ತರಗೊಳ್ಳುತ್ತಿದ್ದ ಆನ್‌ಲೈನ್ ಕ್ಲಾಸ್ ಆಲಿಸುತ್ತಲೇ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಚಿತ್ತಾಪುರ ತಾಲೂಕಿನ ವಾಡಿ (ಜಂಕ್ಷನ್) ಪಟ್ಟಣದಲ್ಲಿ ಸಂಭವಿಸಿದೆ.
ಪಟ್ಟಣದ ಬಿರ್ಲಾ ಕ್ವಾಟರ್ಸ್ ನಿವಾಸಿ, ಬೆಂಗಳೂರು ಬೇಕರಿ ವ್ಯಾಪಾರಿ ಗಿರೀಶ ಉಡುಪಾ ಅವರ ಪುತ್ರ ಗುರುಚರಣ್ ಉಡುಪಾ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.
ಮೃತ ವಿದ್ಯಾರ್ಥಿ ಉಡುಪಿಯ ಪ್ರತಿಷ್ಠಿತ ಕಾಲೇಜೊಂದರಲ್ಲಿ ಪಿಯುಸಿ ದ್ವಿತೀಯ ವರ್ಷದಲ್ಲಿ ಓದುತ್ತಿದ್ದು, ಅಭ್ಯಾಸದಲ್ಲಿ ರ‍್ಯಾಂಕ್ ವಿದ್ಯಾರ್ಥಿ ಎನ್ನಲಾಗಿದೆ.
ಆನ್‌ಲೈನ್ ಕ್ಲಾಸ್ ಕೇಳಲು ಮನೆಯ ಒಳ ಕೋಣೆಯೊಳಗೆ ಹೋದಾತ ಎರಡು ತಾಸಿನ ಬಳಿಕ ಪೋಷಕರಿಗೆ ಫ್ಯಾನಿಗೆ ನೇತಾಡುವ ಸ್ಥಿತಿಯಲ್ಲಿ ಕಂಡು ಬಂದಿದ್ದಾನೆ.
ಇದನ್ನೂ ಓದಿ :ತಾಲಿಬಾನ್ ಹಿಡಿತದಲ್ಲಿ ಅಫ್ಘಾನ್ : ಮಹತ್ವದ ಸಭೆ ನಡೆಸಿದ ಮೋದಿ
ಆತ್ಮಹತ್ಯೆಗೆ ನಿಖರವಾದ ಕಾರಣಗಳು ತಿಳಿದುಬಂದಿಲ್ಲ. ಮಂಗಳವಾರ ಪಟ್ಟಣದಲ್ಲಿ ಮೃತ ವಿದ್ಯಾರ್ಥಿಯ ಅಂತ್ಯಸಂಸ್ಕಾರ ನೆರವೇರಿಸಲಾಯಿತು ಎಂದು ಕುಟುಂಬ ಮೂಲಗಳು ತಿಳಿಸಿವೆ. ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್‌ಗೆ
MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್?
Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್’
High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು
MUST WATCH
ಹೊಸ ಸೇರ್ಪಡೆ
Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್‌ಗೆ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Washington: ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ
MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.