ಎಚ್ಚರಿಕೆಯ ಹೆಜ್ಜೆ: ಸೋಮವಾರದಿಂದ ಹೈಸ್ಕೂಲ್ ಮಾತ್ರ ಆರಂಭ
Team Udayavani, Feb 10, 2022, 7:20 PM IST
ಬೆಂಗಳೂರು : ಹಿಜಾಬ್ ವಿವಾದ ಸಂಘರ್ಷ ತೀವ್ರ ಸ್ವರೂಪ ಪಡೆದಿರುವ ಹಿನ್ನಲೆಯಲ್ಲಿ ಸರಕಾರ ಎಚ್ಚರಿಕೆಯ ಹೆಜ್ಜೆ ಇಡಲು ಮುಂದಾಗಿದ್ದು, ಗುರುವಾರ ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸೋಮವಾರ ಫೆ. 14 ರಿಂದ 10 ನೇ ತರಗತಿಯವರೆಗೆ ಮಾತ್ರ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ಹೇಳಿದ್ದಾರೆ.
ಒಂದೆಡೆ ಹೈಕೋರ್ಟ್ ವಿಸ್ತ್ರತ ಪೀಠ ರಾಜ್ಯದ ಶಾಲಾ ಕಾಲೇಜುಗಳ ಹಿಜಾಬ್- ಕೇಸರಿ ಶಾಲು ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡು. ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಸೋಮವಾರಕ್ಕೆ ವಿಚಾರಣೆ ಮುಂದೂಡಿ, ಶಿಕ್ಷಣ ಸಂಸ್ಥೆಗಳು ತಕ್ಷಣ ಕಾರ್ಯಾರಂಭ ಮಾಡಲಿ. ಅರ್ಜಿಗಳ ವಿಚಾರಣೆ ಮುಗಿಯುವವರೆಗೆ ಯಾರೊಬ್ಬರೂ ಯಾವುದೇ ಧಾರ್ಮಿಕ ಗುರುತುಗಳನ್ನು (ಹಿಜಾಬ್ ಮತ್ತು ಶಾಲು) ಬಳಸುವಂತಿಲ್ಲ ಎಂದು ಸೂಚಿಸಿದೆ.
ಕೋರ್ಟ್ ಆದೇಶ ಬರುವ ವರೆಗೆ ಶಾಂತಿ ಸುವ್ಯವಸ್ಥೆಗೆ ಭಂಗ ಬರಬಾರದೆಂಬ ಉದ್ದೇಶದಲ್ಲಿ ಸರಕಾರ ಎಚ್ಚರಿಕೆಯ ಹೆಜ್ಜೆ ಇಡಲು ಮುಂದಾಗಿದೆ.
ಇದನ್ನೂ ಓದಿ :ಹಿಜಾಬ್ ವಿವಾದ: ವಿಚಾರಣೆ ಮುಗಿಯುವವರೆಗೆ ಧಾರ್ಮಿಕ ಗುರುತು ಬಳಸುವಂತಿಲ್ಲ; HC ಮಧ್ಯಂತರ ಆದೇಶ
ಮುಖ್ಯಮಂತ್ರಿಗಳು , ಶಾಲೆಗಳ ಡ್ರೆಸ್ ಕೋಡ್ ಬಗ್ಗೆ ವಿವಾದ ಆಗಿತ್ತು, ಹೈಕೋರ್ಟ್ ಮೆಟ್ಟಿಲು ಏರಿತ್ತು . ಎರಡು ಕಡೆ ಬಿಸಿ ಇತ್ತು. ನ್ಯಾಯಾಲಯದಲ್ಲಿ ಏನಾದರೂ ನಾವು ಗೌರವ ನೀಡಬೇಕು. ಮಕ್ಕಳಲ್ಲಿ ಗೊಂದಲ ಕಡಿಮೆ ಆಗಿದೆ. ಹೊರಗಡೆಯವರ ಪ್ರಚೋದನೆ ಇದೆ ಅದು ಕೂಡ ಕಡಿಮೆ ಆಗಬೇಕು. ಸಂಯಮದಿಂದ ವರ್ತಿಸುತ್ತಿದ್ದಾರೆ ಅವರಿಗೆ ನನ್ನ ಧನ್ಯವಾದಗಳು. ಹೈಕೋರ್ಟ್ ನ್ಯಾಯಾಧೀಶರ ಮುಂದೆ ಶಾಂತಿ ಕಾಪಾಡಬೇಕು ಎಂದು ಪ್ರಸ್ತಾಪ ಆಗಿದೆ. ಹಾಗೆ ಯಾವುದೇ ಧಾರ್ಮಿಕ ಡ್ರೆಸ್ ಕೋಡ್ ಹಾಕಬಾರ್ದು ಎಂದು ಆಗಿದೆ. ಶಾಲೆ, ಕಾಲೇಜು ಆವರಣದಲ್ಲಿ ಒಗ್ಗಟ್ಟು ಶಾಂತಿ ಇರಬೇಕು. ಲಾ ಆಂಡ್ ಆಡರ್ ಎಲ್ಲಾ ನಮ್ಮ ಜವಾಬ್ದಾರಿ ಇದೆ. ಪೊಲೀಸ್ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿದ್ದೇವೆ ಎಂದರು.
ಎರಡನೇ ಹಂತದಲ್ಲಿ ಪಿಯುಸಿ ಆರಂಭ ಮಾಡಲಾಗುತ್ತದೆ. ಎಜುಕೇಶನ್ ಡಿಪಾರ್ಟ್ಮೆಂಟ್ ಗಳ ಸಭೆ ಬೆಳಗ್ಗೆ ಮಾಡುತ್ತೇನೆ. ನಾಳೆ ಸಂಜೆ ಜಿಲ್ಲಾಧಿಕಾರಿಗಳ ಜೊತೆಗೆ ವೀಡಿಯೋ ಕಾನ್ಫರೆನ್ಸ್ ಮಾಡುತ್ತೇನೆ. ನಂತರ ಪ್ರಕಟಣೆ ಹೊರಡಿಸುತ್ತೇವೆ ಎಂದಿದ್ದಾರೆ.
ಮಹತ್ವದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪರಿಸ್ಥಿಟಿ ನೋಡಿ ಕಾಲೇಜು ಗಳನ್ನು ತೆರೆಯುವ ನಿರ್ಧಾರ ಮಾಡುತ್ತೇವೆ. ಈ ಬಗ್ಗೆ ನಾಳೆ ಸಭೆ ನಡೆಸಿ ನಿರ್ಧಾರ ತಿಳಿಸುತ್ತೇವೆ ಎಂದು ಹೇಳಿದ್ದಾರೆ.
ಹಿಜಾಬ್ ವಿವಾದ ಸಂಘರ್ಷಕ್ಕೆ ತಿರುಗಿದ ಹಿನ್ನಲೆಯಲ್ಲಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.
ಶುಕ್ರವಾರ ಸಂಜೆ ಮಂತ್ರಿಗಳು, ಡಿಸಿ, ಎಸ್ ಪಿ ಮತ್ತು ಶಿಕ್ಷಣ ಅಧಿಕಾರಿಗಳ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.