ಕೋವಿಡ್ ಲಕ್ಷಣ ಇರುವವರಿಗೆ ಮಾತ್ರ ಪರೀಕ್ಷೆ: ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ
ನಮ್ಮ ಆರೋಗ್ಯ ನಮ್ಮ ಕೈಯಲ್ಲಿ, ಜೀವ ಹಾಗೂ ಜೀವನ ಎರಡೂ ಮುಖ್ಯ
Team Udayavani, Jan 22, 2022, 12:23 PM IST
ಬೆಂಗಳೂರು: ಕೋವಿಡ್-19 3ನೇ ಅಲೆ ಇನ್ನು 2 ರಿಂದ 3 ವಾರಗಳಲ್ಲಿ ತೀವ್ರತೆ ಕಳೆದುಕೊಳ್ಳಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಆಗಿರುವುದು ಸಮಾಧಾನ ತಂದಿದೆ. ವೈಜ್ಞಾನಿಕವಾಗಿ ಪರಾಮರ್ಶೆ ಮಾಡಿ, ತಜ್ಞರ ಅಭಿಪ್ರಾಯ ಪಡೆದು ಸರ್ಕಾರ ವೀಕೆಂಡ್ ಕರ್ಫ್ಯೂ ರದ್ದು ಮಾಡಿದೆ ಎಂದರು.
ರಾಜ್ಯದಲ್ಲಿ ICMR ಮಾರ್ಗಸೂಚಿಯಂತೆ ಕೋವಿಡ್ ಲಕ್ಷಣ ಹೊಂದಿರುವವರಿಗೆ ಮಾತ್ರ ಟೆಸ್ಟ್ ಮಾಡಲಾಗುವುದು. ಜನರು ಎಚ್ಚರಿಕೆಯಿಂದ ಇದ್ದಷ್ಟು ಕೊರೊನಾ ವಿರುದ್ಧ ಹೋರಾಡಲು ಸಹಾಯವಾಗುತ್ತದೆ ಎಂದು ಸಚಿವರು ಹೇಳಿದರು.
ಜನರ ಜೀವ ಹಾಗೂ ಜೀವನ ಎರಡೂ ಮುಖ್ಯ. ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಈಗ ಜನರು ಜವಾಬ್ದಾರಿ ಹಾಗೂ ಕರ್ತವ್ಯಗಳನ್ನು ಅರಿತು ನಡೆಯಬೇಕು. ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ, ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಒಂದು ವೇಳೆ ಮತ್ತೆ ಕೊರೊನಾ ಸೋಂಕಿತರು ಆಸ್ಪತ್ರೆಗಳಿಗೆ ದಾಖಲಾಗುವುದು ಗಣನೀಯವಾಗಿ ಹೆಚ್ಚಾದರೆ ಸರ್ಕಾರ ಬೇರೆ ದಾರಿ ಇಲ್ಲದೆ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಲಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿಗಳ ಜೊತೆ ನಡೆದ 3 ಗಂಟೆಗಳ ಸುಧೀರ್ಘ ಸಭೆಯಲ್ಲಿ ರಚನಾತ್ಮಕ ಸಲಹೆಗಳನ್ನು ತೆಗೆದುಕೊಂಡು ವೈಜ್ಞಾನಿಕ ಆಧಾರದಲ್ಲಿ ಸರ್ಕಾರ ನಿರ್ಧಾರ ಮಾಡಿದೆ. ಜನರು ಅನಗತ್ಯವಾಗಿ ಗುಂಪು ಸೇರುವುದನ್ನು ಕಡಿಮೆ ಮಾಡಬೇಕು. ಒಳಾಂಗಣ ಹಾಗೂ ಹೊರಾಂಗಣ ಕಾರ್ಯಕ್ರಮಗಳನ್ನು ಮುಂದಕ್ಕೆ ಹಾಕುವುದು ಉತ್ತಮ ಎಂದು ಸಚಿವರು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.