BJP: ವಿಪಕ್ಷ ನಾಯಕ ಕಗ್ಗಂಟು- ಇಂದು ಕೇಂದ್ರದಿಂದ ಇಬ್ಬರು ವೀಕ್ಷಕರ ಆಗಮನ
Team Udayavani, Jul 3, 2023, 7:18 AM IST
ಬೆಂಗಳೂರು: ವಿಧಾನ ಸಭೆಯಲ್ಲಿ ವಿಪಕ್ಷ ನಾಯಕನ ಆಯ್ಕೆ ಕಗ್ಗಂಟು ಇನ್ನೂ ಬಗೆಹರಿಯುವಂತೆ ಕಾಣುತ್ತಿಲ್ಲ.
ಸೋಮವಾರ ವಿಪಕ್ಷ ನಾಯಕನ ಆಯ್ಕೆ ಸಂಬಂಧ ವೀಕ್ಷಕರಾಗಿ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯ ಮತ್ತು ವಿನೋದ್ ತಾವಡೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ್ದು, ಕೇಂದ್ರ ವೀಕ್ಷಕರು ಆಗಮಿಸಲಿದ್ದಾರೆ ಎಂಬ ಮಾಹಿತಿ ನೀಡಿದರು.
ಇಬ್ಬರೂ ವೀಕ್ಷಕರು ಶಾಸಕರ ಅಭಿಪ್ರಾಯ ಸಂಗ್ರಹಿಸಿ, ವರಿಷ್ಠರ ಗಮನಕ್ಕೆ ತರಲಿದ್ದಾರೆ. ಬಳಿಕವಷ್ಟೇ ತೀರ್ಮಾನ ಹೊರಬೀಳಲಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ಅಗತ್ಯಬಿದ್ದರೆ ಇನ್ನೊಮ್ಮೆ ತಮ್ಮನ್ನು ದಿಲ್ಲಿಗೆ ಕರೆಸಿಕೊಳ್ಳಬಹುದು ಎಂದೂ ಬಿಎಸ್‌ವೈ ಹೇಳಿದ್ದಾರೆ.
ಮೂವರ ಹೆಸರು ಅಂತಿಮ?
ವಿಪಕ್ಷ ನಾಯಕನ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವರಾದ ಆರಗ ಜ್ಞಾನೇಂದ್ರ ಅವರ ಹೆಸರು ಅಂತಿಮ ಗೊಳಿಸಲಾಗಿದೆ. ಈ ಮಧ್ಯೆ ಅಂತಿಮ ಕ್ಷಣದಲ್ಲಿ ಮಾಜಿ ಸಚಿವ ಸುನಿಲ್ ಕುಮಾರ್ ಅವರಿಗೂ ಅದೃಷ್ಟ ಖುಲಾಯಿಸುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ರವಿವಾರ ಸಂಜೆ ನಾಲ್ಕು ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಾಜಿ ಮುಖ್ಯ
ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಧ್ಯೆ ಸಮಾಲೋಚನೆ ನಡೆದು ರಾತ್ರಿ ವೇಳೆಗೆ ಹೆಸರು ಪ್ರಕಟಗೊಳ್ಳಬಹುದು ಎಂಬ ನಿರೀಕ್ಷೆಯಿತ್ತು. ಆದರೆ ಮಹಾರಾಷ್ಟ್ರದಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದ ಕಾರಣ ಕರ್ನಾಟಕದ ವಿಚಾರ ಮುಂದೂಡಲ್ಪಟ್ಟಿತು. ಈ ಹಿನ್ನೆಲೆಯಲ್ಲಿ ಸಂಜೆ ವಾಪಸ್ ಬೆಂಗಳೂರಿಗೆ ಹಿಂದಿರುಗುವ ಯೋಚನೆಯಲ್ಲಿದ್ದ ಯಡಿ ಯೂರಪ್ಪ ದಿಲ್ಲಿಯಲ್ಲೇ ಉಳಿದುಕೊಂಡರು.
ಪಕ್ಷದ ಉನ್ನತ ಮೂಲಗಳ ಪ್ರಕಾರ ಬೊಮ್ಮಾಯಿ, ಆರಗ ಜ್ಞಾನೇಂದ್ರ ಮತ್ತು ಸುನಿಲ್ ಕುಮಾರ್ ಹೆಸರುಗಳು ಅಂತಿಮ ಪಟ್ಟಿಯಲ್ಲಿವೆ. ಈ ಪೈಕಿ ಬೊಮ್ಮಾಯಿ ಹೆಸರು ಮುಂಚೂಣಿಯಲ್ಲಿದೆ ಎಂದು ಹೇಳಲಾಗುತ್ತಿದೆ.
ಈ ಮಧ್ಯೆ ಮಾಜಿ ಸಿಎಂ ಯಡಿಯೂರಪ್ಪ ಅವರು ರಾತ್ರಿ 9ರ ವೇಳೆಗೆ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ ಬಳಿಕ ಅಮಿತ್ ಶಾ ಅವರನ್ನು ಭೇಟಿ ಮಾಡಿದರು. ಬಳಿಕ ಮಾಧ್ಯಮಗಳ ಜತೆಗೆ ಮಾತನಾಡಿದರು.
ಯಾರು ಮೇಲ್ಮನೆ ವಿಪಕ್ಷ ನಾಯಕ ?
ವಿಧಾನ ಪರಿಷತ್‌ನ ವಿಪಕ್ಷ ನಾಯಕ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಗಳಿಗೂ ಆಯ್ಕೆ ನಡೆಯಬೇಕಿದ್ದು, ವಿಧಾನಸಭೆಯ ವಿಪಕ್ಷ ನಾಯಕನ ಆಯ್ಕೆಯ ಜತೆಗೆ ಈ ಹುದ್ದೆಗಳ ಆಯ್ಕೆಯೂ ತಳಕು ಹಾಕಿಕೊಂಡಿದೆ. ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡೇ ಈ ಮೂರು ಸ್ಥಾನಗಳಿಗೆ ನೇಮಕ ನಡೆಯ ಲಿವೆ. ಆದ್ದರಿಂದ ಈ ಮೂರು ಸ್ಥಾನ ಗಳೊಂದಿಗೆ ಬಿಜೆಪಿಯ ಭವಿಷ್ಯದ ನಾಯ ಕತ್ವದ ಬಗ್ಗೆಗಿನ ಹೈಕಮಾಂಡ್‌ನ ಒಲವು, ನಿಲುವುಗಳು ಪ್ರಕಟವಾಗಲಿದೆ ಎಂದು ಬಿಜೆಪಿ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.