ಭಾರತದ ಆರ್ಥಿಕ ಪ್ಯಾಕೇಜ್‌ನ ಗಾತ್ರ ಪಾಕ್‌ನ ಜಿಡಿಪಿಗಿಂತಲೂ ದೊಡ್ಡದು
Team Udayavani, Jun 11, 2020, 9:56 PM IST
ನವದೆಹಲಿ: ಕೋವಿಡ್ -19 ಹಿನ್ನೆಲೆಯಲ್ಲಿ ಕಡು ಬಡವರಿಗೆ ಆರ್ಥಿಕ ನೆರವು ಕಲ್ಪಿಸಲು ಭಾರತ ಸರ್ಕಾರಕ್ಕೆ ನೆರವು ನೀಡಲು ಸಿದ್ಧ ಎಂಬ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಭಾರತ, ಸರ್ಕಾರ ಘೋಷಿಸಿರುವ ಆರ್ಥಿಕ ಪ್ಯಾಕೇಜ್‌ನ ಗಾತ್ರ ಪಾಕಿಸ್ತಾನದ ಜಿಡಿಪಿಗಿಂತಲೂ ದೊಡ್ಡದಿದೆ ಎಂದು ಹೇಳಿದೆ.
ಕೋವಿಡ್ -19 ದಿಂದಾಗಿ ಭಾರತದಲ್ಲಿ ಕಡು ಬಡವರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂಬ ವರದಿಯೊಂದು ದಿನಪತ್ರಿಕೆಯಲ್ಲಿ ಪ್ರಕಟವಾಗಿತ್ತು. ಈ ವರದಿ ಉಲ್ಲೇಖೀಸಿ ಟ್ವೀಟ್ ಮಾಡಿದ್ದ ಇಮ್ರಾನ್ ಖಾನ್, ತಮ್ಮ ಸರ್ಕಾರ 9 ವಾರಗಳಲ್ಲಿ 120 ಬಿಲಿಯನ್ ರೂ.ಗಳನ್ನು ಬಡವರ ಬ್ಯಾಂಕ್ ಖಾತೆಗೆ ಯಶಸ್ವಿಯಾಗಿ ವರ್ಗಾವಣೆ ಮಾಡಿದೆ. ಇದರಿಂದ 10 ಮಿಲಿಯನ್ ಕುಟುಂಬಗಳಿಗೆ ಸಹಾಯವಾಗಿದೆ. ತಮ್ಮ ಸರ್ಕಾರದ ಯಶಸ್ವಿ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಶ್ಲಾಘನೆ ವ್ಯಕ್ತವಾಗಿದೆ. ಈ ತಂತ್ರಜ್ಞಾನದ ನೆರವನ್ನು ಭಾರತಕ್ಕೆ ನೀಡಲು ಸಿದ್ಧ ಎಂದಿದ್ದರು.
ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾತ್ಸವ, ಭಾರತ ಸರ್ಕಾರ ಘೋಷಿಸಿರುವ ಆರ್ಥಿಕ ಪ್ಯಾಕೇಜ್‌ನ ಗಾತ್ರ ಪಾಕಿಸ್ತಾನದ ಜಿಡಿಪಿಗಿಂತಲೂ ದೊಡ್ಡದಿದೆ. ಪಾಕಿಸ್ತಾನದ ಸಾಲ, ಅದರ ಜಿಡಿಪಿಯ ಶೇ.90ರಷ್ಟಿದೆ ಎಂಬುದು ನೆನಪಿರಲಿ ಎಂದು ಕುಟುಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.