ಮಧ್ಯಪ್ರದೇಶ: ಒಳ ಉಡುಪಿನಲ್ಲಿ ಆರೋಪಿಗಳನ್ನು ನಿಲ್ಲಿಸಿದ ಪೊಲೀಸರು ಅಮಾನತು
ಬಟ್ಟೆಗಳನ್ನು ಬಳಸಿ ಆತ್ಮಹತ್ಯೆ ಮಾಡಿಕೊಳ್ಳಬಾರದೆಂದು ಈ ಕ್ರಮ !
Team Udayavani, Apr 8, 2022, 12:21 PM IST
ಭೋಪಾಲ್ : ಆರೋಪಿಗಳಾಗಿದ್ದ ಪತ್ರಕರ್ತ, ಯೂಟ್ಯೂಬರ್ ಸೇರಿದಂತೆ ಪುರುಷರ ಗುಂಪನ್ನು ಪೊಲೀಸ್ ಠಾಣೆಯೊಳಗೆ ಕೇವಲ ಒಳ ಉಡುಪಿನಲ್ಲಿ ನಿಲ್ಲಿಸಿದ್ದ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ವೈರಲ್ ಫೋಟೋದಲ್ಲಿ ಪತ್ರಕರ್ತ ಮತ್ತು ಯೂಟ್ಯೂಬರ್ ಸೇರಿದಂತೆ ಪುರುಷರು ಪೊಲೀಸ್ ಠಾಣೆಯೊಳಗೆ ಒಳ ಉಡುಪಿನಲ್ಲಿ ಮಾತ್ರ ಕಾಣಿಸಿಕೊಂಡಿದ್ದರು. ಈ ಬಗ್ಗೆ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳು ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯ ಪ್ರಭಾರಿ ಕೊತ್ವಾಲಿ ಸಿಧಿ ಮತ್ತು ಸಬ್ ಇನ್ಸ್‌ಪೆಕ್ಟರ್ ಅವರನ್ನು ಅಮಾನತುಗೊಳಿಸಿ ಕ್ರಮ ಕೈಗೊಂಡಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಎಸ್‌ಎಚ್‌ಒ ಮನೋಜ್ ಸೋನಿ ‘ಅವರು ತಮ್ಮ ಬಟ್ಟೆಗಳನ್ನು ಬಳಸಿ ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ನಾವು ಅವರನ್ನು ಈ ರೀತಿ ಜೈಲಿನಲ್ಲಿ ಇರಿಸಿದ್ದೇವೆ’ ಎಂದು ಸ್ಪಷ್ಟನೆ ನೀಡಿದ್ದಾರೆ.
ಬಿಜೆಪಿ ವಿರೋಧಿ ವಿಷಯವನ್ನು ಪೋಸ್ಟ್ ಮಾಡಿದ ಆರೋಪದಲ್ಲಿ ಯೂಟ್ಯೂಬರ್ ಬಂಧನವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಪತ್ರಕರ್ತ ಸೇರಿದಂತೆ 8 ಮಂದಿಯನ್ನು ಪೊಲೀಸರು ವಿವಸ್ತ್ರಗೊಳಿಸಿದ್ದರು, ಈ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿ ಹಲವರು ಆಕ್ರೋಶ ಹೊರ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.