Nigeria: ತೈಲ ಟ್ಯಾಂಕರ್ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ
ಆಫ್ರಿಕಾದಲ್ಲಿ ಟ್ಯಾಂಕರ್ ಸ್ಫೋಟ ಘಟನೆ ಸಾಮಾನ್ಯವಾಗಿದೆ
Team Udayavani, Oct 16, 2024, 4:50 PM IST
ನೈಜೀರಿಯಾ(Nigeria): ತೈಲ ತುಂಬಿದ್ದ ಟ್ಯಾಂಕರ್(Fuel Tanker) ಸ್ಫೋಟಗೊಂಡು ನೂರು ಮಂದಿ ಸಾವನ್ನಪ್ಪಿದ್ದು, 50 ಜನರು ಗಾಯಗೊಂಡಿರುವ ಘಟನೆ ಉತ್ತರ ನೈಜೀರಿಯಾದಲ್ಲಿ ಮಂಗಳವಾರ ತಡರಾತ್ರಿ (ಅ.15) ನಡೆದಿರುವುದಾಗಿ ವರದಿ ತಿಳಿಸಿದೆ.
ನೈಜೀರಿಯಾದ ಉತ್ತರ ಜಿಗಾವಾ ಪ್ರದೇಶದಲ್ಲಿ ಟ್ಯಾಂಕರ್ ಟ್ರಕ್ ವೊಂದಕ್ಕೆ ಡಿಕ್ಕಿ ಹೊಡೆದಿತ್ತು. ಈ ಸಂದರ್ಭದಲ್ಲಿ ಜನರು ತೈಲ ಸಂಗ್ರಹಿಸಲು ಪ್ರಯತ್ನಿಸುತ್ತಿದ್ದ ವೇಳೆ ಸ್ಫೋಟಗೊಂಡ ಪರಿಣಾಮ ಈ ದುರ್ಘಟನೆ ನಡೆದಿರುವುದಾಗಿ ಪೊಲೀಸ್ ವಕ್ತಾರ ಲವಾನ್ ಶಿಸು ಅದಾಂ ಎಎಫ್ ಪಿಗೆ ತಿಳಿಸಿದ್ದಾರೆ.
ಜಿಗಾವಾ ನಗರದಲ್ಲಿ ಟ್ಯಾಂಕರ್ ಚಾಲಕ ಟ್ರಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದ್ದ, ಆದರೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿತ್ತು. ಆಗ ವಾಹನದ ಸುತ್ತ ನಿವಾಸಿಗಳು ಸೇರಿದ್ದು, ಇಂಧನ ಸಂಗ್ರಹಿಸಲು ಮುಗಿಬಿದ್ದಿದ್ದರು. ಈ ಸಂದರ್ಭದಲ್ಲಿ ಟ್ಯಾಂಕರ್ ಸ್ಫೋಟಗೊಂಡಿರುವುದಾಗಿ ವರದಿ ವಿವರಿಸಿದೆ.
ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ನೈಜೀರಿಯನ್ ಮೆಡಿಕಲ್ ಅಸೋಸಿಯೇಶನ್ ವೈದ್ಯರಲ್ಲಿ ಮನವಿ ಮಾಡಿಕೊಂಡಿದೆ. ಆಫ್ರಿಕಾದಲ್ಲಿ ಟ್ಯಾಂಕರ್ ಸ್ಫೋಟ ಘಟನೆ ಸಾಮಾನ್ಯವಾಗಿದೆ. ಹೊಂಡ, ಗುಂಡಿಯ ರಸ್ತೆಯಿಂದಾಗಿ ಅಪಘಾತ ನಡೆಯುತ್ತಲೇ ಇರುತ್ತದೆ. ಈ ಸಂದರ್ಭದಲ್ಲಿ ಜನರು ತೈಲ ಸಂಗ್ರಹಿಸುವುದನ್ನೇ ಕಾಯಕ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.