ಹೊತ್ತಿ ಉರಿದ ಪಚ್ಚನಾಡಿ ತ್ಯಾಜ್ಯ ಸಂಸ್ಕರಣ ಘಟಕ; ತನಿಖೆಗೆ ಜಿಲ್ಲಾಡಳಿತ ಸೂಚನೆ


Team Udayavani, Apr 6, 2021, 4:20 AM IST

ಹೊತ್ತಿ ಉರಿದ ಪಚ್ಚನಾಡಿ ತ್ಯಾಜ್ಯ ಸಂಸ್ಕರಣ ಘಟಕ; ತನಿಖೆಗೆ ಜಿಲ್ಲಾಡಳಿತ ಸೂಚನೆ

ಮಹಾನಗರ: ಪಚ್ಚನಾಡಿ ತ್ಯಾಜ್ಯ ಸಂಸ್ಕರಣ ಘಟಕದಲ್ಲಿ ರವಿವಾರ ರಾತ್ರಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ಅಲ್ಲಿದ್ದ ಯಂತ್ರೋಪಕರಣಗಳು ಸುಟ್ಟು ಕರಕಲಾಗಿದ್ದು, ಅಪಾರ ಪ್ರಮಾಣದ ನಷ್ಟ-ಹಾನಿ ಸಂಭವಿಸಿದೆ. ಜತೆಗೆ, ಈ ಬೆಂಕಿ ಅವಘಡದ ಬಗ್ಗೆ ಸಂಪೂರ್ಣ ತನಿಖೆ ನಡೆಸಲು ದಕ್ಷಿಣ ಕನ್ನಡ ಜಿಲ್ಲಾಡಳಿತವು ಮಂಗಳೂರು ಮಹಾನಗರ ಪಾಲಿಕೆಗೆ ನಿರ್ದೇಶಿಸಿದೆ.
ಪಚ್ಚನಾಡಿ ತ್ಯಾಜ್ಯ ಸಂಸ್ಕರಣ ಘಟಕದಲ್ಲಿ ರವಿವಾರ ರಾತ್ರಿ ಕಾಣಿಸಿಕೊಂಡ ಬೆಂಕಿ ಸೋಮವಾರ ಬೆಳಗ್ಗಿನ ಜಾವ 4 ಗಂಟೆಯವರೆಗೆ ಹೊತ್ತಿ ಉರಿದಿತ್ತು. ಪಚ್ಚನಾಡಿ ಡಂಪಿಂಗ್‌ ಯಾರ್ಡ್‌ನಲ್ಲಿ ಈ ಹಿಂದೆಯೂ ಹಲವು ಸಲ ಬೆಂಕಿ ಕಾಣಿಸಿಕೊಂಡಿತ್ತು. ಆದರೆ, ತ್ಯಾಜ್ಯ ಸಂಸ್ಕರಣ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡದ್ದು ಇದೇ ಮೊದಲು. ಈ ಹಿನ್ನೆಲೆಯಲ್ಲಿ ಬೆಂಕಿಗೆ ಶಾರ್ಟ್‌ ಸರ್ಕ್ನೂಟ್‌ ಕಾರಣವೇ? ಅಥವಾ ಬೇರೆ ಏನಾದರೂ ಕಾರಣವಿದೆಯೇ? ಎಂಬ ಬಗ್ಗೆ ತಿಳಿಯಲು ತನಿಖೆಗೆ ಜಿಲ್ಲಾಡಳಿತ ಮುಂದಾಗಿದೆ.

ರವಿವಾರ ರಾತ್ರಿ ಸುಮಾರು 8.30ರ ವೇಳೆಗೆ ಈ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಳ್ಳಲು ಆರಂಭವಾಗಿತ್ತು. ಹೊತ್ತು ಕಳೆದಂತೆ ಬೆಂಕಿಯ ಕೆನ್ನಾಲಿಗೆ ಸುತ್ತಮುತ್ತಲು ವ್ಯಾಪಿಸಿ ಸಾರ್ವಜನಿಕರಿಗೆ ಭೀತಿ ಉಂಟುಮಾಡಿತ್ತು. ಆ ಸಮಯಕ್ಕಾಗಲೇ ಸುತ್ತಮುತ್ತಲ ಮಂದಿ ಸ್ಥಳಕ್ಕೆ ಜಮಾಯಿಸಿದ್ದರು. ಬೆಂಕಿಯ ಜತೆ ದಟ್ಟವಾದ ಹೊಗೆಯಿಂದಾಗಿ ತುರ್ತು ಕಾರ್ಯಾಚರಣೆಗೆ ಸ್ವಲ್ಪ ಹಿನ್ನೆಡೆ ಉಂಟಾಗಿತ್ತು. ಆದರೂ ಸ್ಥಳೀಯರು ಮತ್ತು ಅಗ್ನಿಶಾಮಖ ಇಲಾಖೆ ಸಿಬಂದಿ ಬೆಂಕಿಗೆ ನೀರು ಹಾಯಿಸುವ ಮುಖೇನ ಬೆಂಕಿಯ ತೀವ್ರತೆ ಕಡಿಮೆ ಮಾಡಲು ಪ್ರಯತ್ನಿಸಿದರು.

ಸ್ಥಳೀಯ ಮನಪಾ ಸದಸ್ಯೆ ಸಂಗೀತ ನಾಯಕ್‌ ಅವರು “ಉದಯವಾಣಿ ಸುದಿನ’ಕ್ಕೆ ಪ್ರತಿಕ್ರಿಯಿಸಿ, “ರವಿವಾರ ರಾತ್ರಿ ಕಾಣಿಸಿಕೊಂಡ ಬೆಂಕಿಯ ತೀವ್ರತೆ ಸೋಮವಾರ ಬೆಳಗ್ಗಿನ ಜಾವ ಸುಮಾರು 4 ಗಂಟೆಯವರೆಗೂ ಇತ್ತು. ಜೇಸಿಬಿ, ಟ್ಯಾಂಕರ್‌, ಅಗ್ನಿಶಾಮಕ ದಳದ ಸಿಬಂದಿ, ಸಾರ್ವಜನಿಕರ ಸಹಕಾರದಿಂದ ಬೆಂಕಿ ಆರಿಸುವ ಕೆಲಸ ಸೋಮವಾರ ಬೆಳಗ್ಗೆವರೆಗೆ ಮುಂದುವರಿದಿತ್ತು. ಸ್ಥಳಕ್ಕೆ ಜಿಲ್ಲಾಧಿಕಾರಿಗಳು, ಪಾಲಿಕೆ ಮೇಯರ್‌, ಆಯುಕ್ತರು ಸಹಿತ ಪಾಲಿಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ’ ಎಂದಿದ್ದಾರೆ.

ಯಂತ್ರಗಳೆಲ್ಲ ಬೆಂಕಿಗೆ ಆಹುತಿ
“ಪಚ್ಚನಾಡಿಯಲ್ಲಿ ತ್ಯಾಜ್ಯ ಸಂಸ್ಕರಣೆ ಮಾಡುವ ಉದ್ದೇಶಕ್ಕೆ ಸ್ಥಳದಲ್ಲಿ ಸುಮಾರು 14 ಬೃಹತ್‌ ಯಂತ್ರಗಳಿದ್ದವು. ಅದರಲ್ಲಿ ಬಹುತೇಕ ಯಂತ್ರಗಳು ಹೊಸತು. ಒಟ್ಟಾರೆ ಸುಮಾರು 60 ಲಕ್ಷ ರೂ.ಗೂ ಮಿಕ್ಕಿ ಬೆಲೆಯುಳ್ಳ ಯಂತ್ರ ಇವುಗಳಾಗಿದ್ದು, ಬೆಂಕಿಯ ಕೆನ್ನಾಲಿಗೆಗೆ ಅವುಗಳೆಲ್ಲ ಸುಟ್ಟು ಹೋಗಿವೆ. ಇವುಗಳನ್ನು ಸರಿಪಡಿಸಲು ಕೂಡ ಅಸಾಧ್ಯವಾಗುವಷ್ಟು ಸುಟ್ಟಿದ್ದು, ಮರು ಬಳಕೆ ಅಸಾಧ್ಯ’ ಎನ್ನುತ್ತಾರೆ ಕಾರ್ಮಿಕರು.

ಮನಪಾ ಆಯುಕ್ತ ಅಕ್ಷಯ್‌ ಶ್ರೀಧರ್‌ ಪ್ರತಿಕ್ರಿಯಿಸಿ, “ಪಚ್ಚನಾಡಿ ತ್ಯಾಜ್ಯ ಸಂಸ್ಕರಣ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡ ಸ್ಥಳಕ್ಕೆ ತತ್‌ಕ್ಷಣ ಭೇಟಿ ನೀಡಿದ್ದೆ. ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಇದೇ ಮೊದಲ ಬಾರಿಗೆ ಬೆಂಕಿ ತಗುಲಿದ್ದು, ಈ ಬಗ್ಗೆ ತನಿಖೆ ನಡೆಸಲಿದ್ದೇವೆ. ಸೋಮವಾರ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಆ ಪ್ರದೇಶಕ್ಕೆ ಸಿ.ಸಿ. ಟಿವಿ ಅಳವಡಿಸಲು ಈಗಾಗಲೇ ಟೆಂಡರ್‌ ಕರೆದಿದ್ದು, ಕೂಡಲೇ ಅಳವಡಿಸಲು ಕ್ರಮ ತೆಗೆದುಕೊಳ್ಳುತ್ತೇವೆ’ ಎನ್ನುತ್ತಾರೆ.

ತಪ್ಪಿದ ದೊಡ್ಡ ದುರಂತ !
ಮಂಗಳೂರು ನಗರದಲ್ಲಿ ಉತ್ಪತ್ತಿಯಾಗುವ ಕಸವನ್ನು ಪಚ್ಚನಾಡಿಯಲ್ಲಿ ಸಂಸ್ಕರಣೆ ಮಾಡಲಾಗುತ್ತದೆ. ಪ್ಲಾಸ್ಟಿಕ್‌ ಬಾಟಲ್‌ಗ‌ಳು, ಪ್ಲಾಸ್ಟಿಕ್‌ ಚೀಲಗಳನ್ನು ಯಂತ್ರಗಳ ಮುಖೇನ ಇಲ್ಲಿ ಕ್ರಶ್ಶಿಂಗ್‌ ಮಾಡಲಾಗುತ್ತದೆ. ಇದಕ್ಕೆಂದು ಪಚ್ಚನಾಡಿ ಡಂಪಿಂಗ್‌ ಯಾರ್ಡ್‌ನ ಎದುರು ಭಾಗದಲ್ಲಿರುವ ವಿಶಾಲವಾದ ಜಾಗದಲ್ಲಿ ಪ್ರತ್ಯೇಕ ಘಟಕ ಇದೆ. ಸಂಸ್ಕರಣೆ ಮಾಡುವ ಉದ್ದೇಶಕ್ಕೆಂದು ಖಾಸಗಿ ಸಂಸ್ಥೆಗೆ ಲೀಸ್‌ಗೆ ನೀಡಲಾಗಿದೆ. ಈ ಘಟಕದಲ್ಲಿ ಸುಮಾರು 40ಕ್ಕೂ ಮಿಕ್ಕಿ ಕಾರ್ಮಿಕರು ದುಡಿಯುತ್ತಾರೆ. ರವಿವಾರ ಆದ ಕಾರಣ ಕಾರ್ಮಿಕರು, ಭದ್ರತ ಸಿಬಂದಿ ಸ್ಥಳದಲ್ಲಿ ಇರಲಿಲ್ಲ. ಹಾಗಾಗಿ ಯಾವುದೇ ಪ್ರಾಣಹಾನಿ ಸಂಭವಿಸಲಿಲ್ಲ. ಒಂದುವೇಳೆ, ತ್ಯಾಜ್ಯ ಸಂಸ್ಕರಣೆ ಸಮಯದಲ್ಲಿ ಈ ದುರಂತ ಸಂಭವಿಸುತ್ತಿದ್ದರೆ ಹೆಚ್ಚಿನ ಅಪಾಯವಾಗುತ್ತಿತ್ತು.

ಈ ಹಿಂದೆಯೂ ಬೆಂಕಿ ಕಾಣಿಸಿಕೊಂಡಿತ್ತು
ಪಚ್ಚನಾಡಿ ಡಂಪಿಂಗ್‌ ಯಾರ್ಡ್‌ನಲ್ಲಿ ಕಳೆದ ವರ್ಷ ಮತ್ತು ಅದಕ್ಕೂ ಅದರ ಹಿಂದಿನ ವರ್ಷ ಕೆಲವು ಬಾರಿ ಬೆಂಕಿ ಕಾಣಿಸಿಕೊಂಡು ಅನಾಹುತ ಸಂಭವಿಸಿತ್ತು. ಬಳಿಕ ಮೂರ್‍ನಾಲ್ಕು ದಿನ ಕಾರ್ಯಾಚರಣೆ ನಡೆಸಿ ಬೆಂಕಿ ಆರಿಸುವ ಕೆಲಸ ಮಾಡಲಾಗಿತ್ತು. ಜೇಸಿಬಿ, ಲಾರಿ ಮುಖೇನ ಸ್ಥಳಕ್ಕೆ ಮಣ್ಣು ಹಾಕುವ ಕಾರ್ಯ ನಡೆದಿತ್ತು. ಆದರೆ ತ್ಯಾಜ್ಯ ಸಂಸ್ಕರಣ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡದ್ದು ಇದೇ ಮೊದಲು. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಶಾಶ್ವತ ಪರಿಹಾರ ಕಂಡುಕೊಳ್ಳುವತ್ತ ಪ್ರಯತ್ನಿಸಬೇಕಿದೆ ಎನ್ನುತ್ತಾರೆ ಸಾರ್ವಜನಿಕರು.

ವರದಿ ಸಲ್ಲಿಕೆಗೆ ಸೂಚನೆ
ಪಚ್ಚನಾಡಿ ತ್ಯಾಜ್ಯ ಸಂಸ್ಕರಣ ಘಟಕದಲ್ಲಿ ರವಿವಾರ ಬೆಂಕಿ ತಗುಲಿದ್ದು, ಶಾರ್ಟ್‌ ಸರ್ಕ್ನೂಟ್‌ನಿಂದ ಎಂದು ಹೇಳಲಾಗುತ್ತಿದೆ. ಈ ಕುರಿತಂತೆ ಬೇರೆ ಕಾರಣ ಇದೆಯೇ ಎಂಬ ಬಗ್ಗೆ ಪೊಲೀಸ್‌ ಮಟ್ಟದಲ್ಲಿಯೂ ತನಿಖೆ ನಡೆಸಲಾಗುತ್ತದೆ. ಈ ಘಟನೆಯ ಕುರಿತಂತೆ ಪಾಲಿಕೆ ಪರಿಸರ ಅಭಿಯಂತರರ ಮುಖೇನ ವರದಿಸಲ್ಲಿಕೆ ಮಾಡಲು ಮನಪಾ ಆಯುಕ್ತರಿಗೆ ಸೂಚಿಸಿದ್ದೇನೆ.
-ಡಾ| ರಾಜೇಂದ್ರ ಕೆ.ವಿ., ದ.ಕ. ಜಿಲ್ಲಾಧಿಕಾರಿ

ನೀರು ಸ್ಟೋರೇಜ್‌ ವ್ಯವಸ್ಥೆ
ಕೆಲವು ತಿಂಗಳುಗಳ ಹಿಂದೆ ಪಚ್ಚನಾಡಿ ಡಂಪಿಂಗ್‌ ಯಾರ್ಡ್‌ನ ತ್ಯಾಜ್ಯದಲ್ಲಿ ಬೆಂಕಿ ಕಾಣಿಕೊಂಡಿತ್ತು. ಇದೀಗ ತ್ಯಾಜ್ಯ ಸಂಸ್ಕರಣ ಘಟಕಕ್ಕೂ ಬೆಂಕಿ ತಗುಲಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಉದ್ದೇಶದಿಂದ ಸ್ಥಳದಲ್ಲಿ ಸುಮಾರು 20 ಲಕ್ಷ ಲೀ. ಸಾಮರ್ಥ್ಯದ ನೀರು ಸಂಗ್ರಹ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು.
-ಪ್ರೇಮಾನಂದ ಶೆಟ್ಟಿ, ಮನಪಾ ಮೇಯರ್‌

ಟಾಪ್ ನ್ಯೂಸ್

Hubli: Fire incident at Ayyappa camp: Nine devotees seriously injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hubli: Fire incident at Ayyappa camp: Nine devotees seriously injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.