Indore- Watch Video: ಪೇಂಟಿಂಗ್ ಕೆಲಸ ಮಾಡುತ್ತಿದ್ದಾಗಲೇ ಯುವಕ ಹೃದಯಾಘಾತದಿಂದ ಮೃತ್ಯು!
ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿದೆ.
Team Udayavani, Dec 29, 2023, 1:28 PM IST
ಮಧ್ಯಪ್ರದೇಶ(ಇಂದೋರ್): ಇತ್ತೀಚೆಗೆ ಕರ್ನಾಟಕ ಸೇರಿದಂತೆ ದೇಶಾದ್ಯಂತ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇತ್ತೀಚೆಗೆ ಪೇಂಟಿಂಗ್ ಮಾಡುತ್ತಿದ್ದ ಯುವಕನೊಬ್ಬ ದಿಢೀರನೆ ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು, ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ:Kannada Cinema; 2024 ವರ್ಷಪೂರ್ತಿ ಸಿನಿ ಜಾತ್ರೆ; ಇಲ್ಲಿದೆ ಸ್ಟಾರ್ ನಟರ ಸಿನಿಮಾ ಪಟ್ಟಿ
ಮೃತ ಯುವಕನನ್ನು ಪೇಂಟರ್ ಆಶಿಶ್ ಎಂದು ಗುರುತಿಸಲಾಗಿದೆ. ವರದಿಯ ಪ್ರಕಾರ, ಇಂದೋರ್ ನಲ್ಲಿ ಆಶಿಶ್ ಪೇಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಸುಸ್ತು ಕಾಣಿಸಿಕೊಂಡಿತ್ತು. ನಂತರ ಮುಖತೊಳೆದುಕೊಂಡು ಬಂದು, ಪೇಂಟ್ ಬಕೆಟ್ ಮೇಲೆ ಕುಳಿತು ವಿಶ್ರಾಂತಿ ಪಡೆಯುತ್ತಿದ್ದ. ಆದರೆ ಸ್ವಲ್ಪ ಹೊತ್ತಿನಲ್ಲೇ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿದೆ.
Indore | Heart Attack |
काम के दौरान इंदौर के पेंटर आशीष को घबराहट हुई। वह उठा तुरंत पानी पीया और मुंह धो कर लौटा।
उसके बाद एका एक सीने में दर्द उठा। वह पेंट के डब्बे पर बैठ गया पर 1 मिनट के अंदर वह गिर पड़ा।
उसके दिल की धड़कन रुक चुकी थी।
आज घर से निकलते वक्त आज कोई भी… pic.twitter.com/fqcERlA7pP
— काश/if Kakvi (@KashifKakvi) December 28, 2023
ಈ ಸಂದರ್ಭದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ತಕ್ಷಣವೇ ಓಡಿಬಂದು ನೆರವಿಗಾಗಿ ಬೊಬ್ಬೆ ಹೊಡೆಯುತ್ತಿದ್ದು, ಒಬ್ಬಾತ ಆಶಿಶ್ ನ ಕೈಯನ್ನು ತಿಕ್ಕಿ ಉಸಿರಾಡುವಂತೆ ಮಾಡಲು ಪ್ರಯತ್ನಿಸುತ್ತಿದ್ದ. ಆದರೆ ಪರಿಸ್ಥಿತಿ ಕೈಮೀರಿ ಹೋಗಿದ್ದು, ಆಶಿಶ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.