ಸರಕಾರಿ ಶಾಲೆಗಳಿಗೆ ಬಣ್ಣ , ಚಿತ್ತಾರ : ಕ್ಯಾಂಪಸ್ ಟು ಕಮ್ಯೂನಿಟಿ ಬಳಗದ ಯುವಕರ ಸಾಧನೆ
Team Udayavani, Apr 15, 2021, 7:20 AM IST
ಬೆಂಗಳೂರು: ಸರಕಾರಿ ಶಾಲೆಯ ಸೌಂದರ್ಯ ಹೆಚ್ಚಿಸುವ ಜತೆಗೆ ಗುಣಾತ್ಮಕ ಕಲಿಕೆಗೂ ಯೋಗದಾನ ನೀಡುತ್ತಿರುವ ಯುವಕರ ದಂಡು.
“ಕ್ಯಾಂಪಸ್ ಟು ಕಮ್ಯೂನಿಟಿ’ ಬಳಗದ ಸದಸ್ಯರು “ಸ್ಕೂಲ್ ಬೆಲ್’ ಹೆಸರಿನಲ್ಲಿ ಈ ಕಾರ್ಯ ನಡೆಸುತ್ತಿದ್ದಾರೆ. ಈ ಬಳಗದಲ್ಲಿ ಬಹುತೇಕ ಮಂದಿ ಕಾಲೇಜು ವಿದ್ಯಾರ್ಥಿಗಳು ಮತ್ತು ಯುವ ಉದ್ಯೋಗಿಗಳು. ಇವರು ವಾರಾಂತ್ಯದಲ್ಲಿ ಶಾಲೆಗಳಿಗೆ ಭೇಟಿ ನೀಡಿ ಸ್ಥಳೀಯರು, ಎಸ್‌ಡಿಎಂಸಿಗಳ ಸಹಕಾರ ಪಡೆದು ಬಣ್ಣ ಬಳಿದು, ಧನಾತ್ಮಕ ಚಿಂತನೆಯ ಕಲಾಕೃತಿಗಳನ್ನು ಚಿತ್ರಿಸುತ್ತಾರೆ.
ಗ್ರಾಮೀಣ ಶಾಲೆಗಳನ್ನು ಆಯ್ದುಕೊಂಡು ಪ್ರತೀ ಶನಿವಾರ – ರವಿವಾರ ಅಲ್ಲೇ ವಾಸ್ತವ್ಯವಿರುತ್ತೇವೆ. ಲ್ಯಾಬ್, ಕ್ರೀಡಾ ಸಾಮಗ್ರಿ ಒದಗಿಸುವುದು, ಪರಿಸರ, ಆಹಾರ, ಶುಚಿತ್ವ ಮತ್ತು ಆರೋಗ್ಯದ ಬಗ್ಗೆ ಅರಿವು ಮೂಡಿಸುತ್ತೇವೆ. ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಪ್ರಯತ್ನ ಮಾಡುತ್ತೇವೆ ಎಂದು ಬಳಗದ ಸಂಯೋಜಕ ರಘು ಪೂಜಾರಿ ಹೇಳುತ್ತಾರೆ.
140 ಶಾಲೆಗಳಲ್ಲಿ “ಸ್ಕೂಲ್ ಬೆಲ್’
“ಸ್ಕೂಲ್ ಬೆಲ್’ ಇವರ ವಿಶಿಷ್ಟ ಕಾರ್ಯಕ್ರಮ. ವಿವಿಧ ಜಿಲ್ಲೆಗಳ 140ಕ್ಕೂ ಅಧಿಕ ಶಾಲೆಗಳಿಗೆ ಆಯಾ ಶಾಲೆಯ ಹಳೇ ವಿದ್ಯಾರ್ಥಿಗಳು, ಎಸ್‌ಡಿಎಂಸಿ ಸದಸ್ಯರು ಮತ್ತು ಸ್ಥಳೀಯರನ್ನು ಸೇರಿಸಿಕೊಂಡು ಸುಣ್ಣ ಬಣ್ಣ ಬಳಿಯುವ ಕಾರ್ಯ ಮಾಡಿದ್ದೇವೆ. “ಕ್ಯಾಂಪಸ್ ಟು ಕಮ್ಯೂನಿಟಿ’ಯಲ್ಲಿ 3,500ಕ್ಕೂ ಅಧಿಕ ಸ್ವಯಂಸೇವಕ ರಿದ್ದಾರೆ. ಆಯಾ ಜಿಲ್ಲೆಯ ಸ್ವಯಂ ಸೇವಕರನ್ನೇ ಇದಕ್ಕೆ ಜೋಡಿಸುತ್ತೇವೆ. ಚಿತ್ರಕಲಾ ವಿದ್ಯಾರ್ಥಿಗಳನ್ನು ಹೆಚ್ಚೆಚ್ಚು ಜೋಡಿಸಿಕೊಳ್ಳುತ್ತಿದ್ದೇವೆ ಎಂದು ರಘು ಪೂಜಾರಿ ವಿವರ ನೀಡಿದ್ದಾರೆ.
ಕಲಿಯೋಣ -ಕಲಿಸೋಣ ಬನ್ನಿ
ಕಾಲೇಜು ವಿದ್ಯಾರ್ಥಿಗಳು, ಯುವ ಉದ್ಯೋಗಿಗಳ ಮೂಲಕ ಸರಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ವಾರಾಂತ್ಯದಲ್ಲಿ ಮನೆಪಾಠದ ವ್ಯವಸ್ಥೆಯನ್ನೂ ಕ್ಯಾಂಪಸ್ ಟು ಕಮ್ಯೂನಿಟಿ ಮಾಡುತ್ತಿದೆ.
ಸ್ಕೂಲ್ ಬೆಲ್ ಕಾರ್ಯಕ್ರಮ ದಡಿ ಶಾಲೆಗಳ ಗೋಡೆಯನ್ನು ಸುಂದರವಾಗಿಸುವ ಜತೆಗೆ ಸ್ವತ್ಛ ಪರಿಸರದ ಜಾಗೃತಿಯನ್ನು ಮೂಡಿಸುತ್ತಿದ್ದೇವೆ.
-ಸೂರ್ಯನಾರಾಯಣ, ಮಾಲೂರು, ಕ್ಯಾಂಪಸ್ ಟು ಕಮ್ಯೂನಿಟಿ
– ರಾಜು ಖಾರ್ವಿ ಕೊಡೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.