ಪಾಕಿಸ್ತಾನ: ಕಾಶ್ಮೀರ ಪರ Rally ಮೇಲೆ ಗ್ರೆನೇಡ್ ದಾಳಿ- 30 ಜನರಿಗೆ ಗಾಯ
ಈ ದಾಳಿಯ ಹೊಣೆಯನ್ನು ಸಿಂಧುದೇಶ್ ರೆವೊಲ್ಯೂಶನರಿ ಆರ್ಮಿ ಹೊತ್ತುಕೊಂಡಿದೆ.
Team Udayavani, Aug 6, 2020, 9:29 AM IST
ಇಸ್ಲಾಮಾಬಾದ್:ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಿದ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕಾಶ್ಮೀರ ಪ್ರತ್ಯೇಕತೆ ಪರ ನಡೆಸಿದ ರಾಲಿ ಮೇಲೆ ಗ್ರೆನೇಡ್ ದಾಳಿ ನಡೆದ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, 30 ಜನರು ಗಾಯಗೊಂಡಿರುವುದಾಗಿ ವರದಿ ತಿಳಿಸಿದೆ.
ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ತೆರವುಗೊಳಿಸಿದ್ದನ್ನು ವಿರೋಧಿಸಿ ಜಮಾತ್ ಎ ಇಸ್ಲಾಮಿ ರಾಲಿ ನಡೆಸಿದ ವೇಳೆ ಗ್ರೆನೇಡ್ ದಾಳಿ ನಡೆದಿದ್ದು, ಘಟನೆಯಲ್ಲಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇವರನ್ನೆಲ್ಲಾ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ದಾಳಿಯ ಹೊಣೆಯನ್ನು ಸಿಂಧುದೇಶ್ ರೆವೊಲ್ಯೂಶನರಿ ಆರ್ಮಿ ಹೊತ್ತುಕೊಂಡಿದೆ. ಜೂನ್ ತಿಂಗಳಿನಲ್ಲಿ ಇಬ್ಬರು ಯೋಧರು ಸೇರಿದಂತೆ ನಾಲ್ವರನ್ನು ಸರಣಿ ಸ್ಫೋಟ ನಡೆಸಿ ಹತ್ಯೆಗೈದಿರುವ ಘಟನೆಯ ಹೊಣೆಯನ್ನು ಎಸ್ ಆರ್ ಎ ಹೊತ್ತುಕೊಂಡಿರುವುದಾಗಿ ವರದಿ ವಿವರಿಸಿದೆ.
ಪ್ರತ್ಯೇಕ ಸಿಂಧ್ ಪ್ರಾಂತ್ಯಕ್ಕಾಗಿ ಎಸ್ ಆರ್ ಎ ಹೋರಾಟ ನಡೆಸುತ್ತಿದೆ. ಪಾಕಿಸ್ತಾನದಿಂದ ಪ್ರತ್ಯೇಕಗೊಳ್ಳಬೇಕು ಎಂದು ತಿಳಿಸಿದೆ. ಅಲ್ಲದೇ ಬಲೂಚಿಸ್ತಾನ್ ಲಿಬರೇಷನ್ ಆರ್ಮಿ ಜತೆ ಹೊಂದಾಣಿಕೆ ಮಾಡಿಕೊಳ್ಳುವುದಾಗಿ ಹೇಳಿದೆ.
2019ರ ಆಗಸ್ಟ್ 5ರಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿತ್ತು. ಅಲ್ಲದೇ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಅನ್ನು ಪ್ರತ್ಯೇಕಗೊಳಿಸಿ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.