ಪರೀಕರ್ ಇದ್ದಿದ್ದರಾದರೂ ಗೋವಾ ಬಿಜೆಪಿಗೆ ಬಹುಮತ ಪಡೆಯಲಾಗಲಿಲ್ಲ: ರಾವುತ್
Team Udayavani, Oct 14, 2021, 7:14 PM IST
ಪಣಜಿ: ಕಳೆದ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಗೋವಾದ ಮುಖ್ಯಮಂತ್ರಿ ದಿ ಮನೋಹರ್ ಪರೀಕರ್ ಅವರು ಇದ್ದಿದ್ದರಾದರೂ ಬಿಜೆಪಿಗೆ ಪೂರ್ಣ ಬಹುಮತ ಪಡೆಯಲು ಸಾಧ್ಯವಾಗಿರಲಿಲ್ಲ ಎಂದು ಶಿವಸೇನೆಯ ನಾಯಕ ಸಂಜಯ ರಾವುತ್ ಗುರುವಾರ ಹೇಳಿಕೆ ನೀಡಿದ್ದಾರೆ.
ಸುದ್ಧಿಗಾರರೊಂದಿಗೆ ಮಾತನಾಡಿದ ರಾವುತ್ ಅವರು ಬಿಜೆಪಿಯ ವಿರುದ್ಧ ಠೀಕಾ ಪ್ರಹಾರ ನಡೆಸಿದರು, ದೇಶದ ಗೃಹಮಂತ್ರಿ ಅಮಿತ್ ಶಾ ಗೋವಾದಲ್ಲಿ ಪಕ್ಷದ ಪರ ಪ್ರಚಾರ ಕಾರ್ಯ ನಡೆಸಿದ್ದಾರೆ. ಕಳೆದ ಬಾರಿಯೂ ಕೂಡ ಚುನಾವಣೆಯ ಸಂದರ್ಭದಲ್ಲಿ ಕೇಂದ್ರದಲ್ಲಿ ಬಿಜೆಪಿ ಸರಕಾರವಿತ್ತು ಹಾಗೂ ಅವರ ನಾಯಕರು ಗೋವಾಕ್ಕೆ ಚುನಾವಣಾ ಪ್ರಚಾರಕ್ಕೆ ಬಂದಿದ್ದರು. ಆದರೂ ಕೂಡ ಗೋವಾದಲ್ಲಿ ಬಿಜೆಪಿ ಕೇವಲ 13 ಸ್ಥಾನದಲ್ಲಿ ಜಯಗಳಿಸಿತ್ತು, ಕಾಂಗ್ರೆಸ್ 18 ಸ್ಥಾನಗಳಲ್ಲಿ ಜಯಗಳಿಸಿತ್ತು. ಸರ್ಕಾರ ಸ್ಥಾಪನೆಗೆ ಕಾಂಗ್ರೆಸ್ ಪಕ್ಷ ವಿಳಂಬ ಮಾಡಿದ್ದರಿಂದ ಗೋವಾದಲ್ಲಿ ಬಿಜೆಪಿ ಸರಕಾರ ಸ್ಥಾಪಿಸಿತು ಎಂದರು.
ಗೋವಾದಲ್ಲಿ ಪ್ರಸಕ್ತ ವಿಧಾನಸಭಾ ಚುನಾವಣೆಯ ನಂತರ ಅಧಿಕಾರ ಬದಲಾವಣೆಯಾಗಲಿದೆ. ಗೋವಾದಲ್ಲಿ ಶಿವಸೇನೆ ಪಕ್ಷವನ್ನು ಗೌರವಿಸುವ ಜನರು ಹೆಚ್ಚಿನ ಪ್ರಮಾಣದಲ್ಲಿದ್ದು, ಪ್ರಸಕ್ತ ಗೋವಾದ ಬಿಜೆಪಿ ಸರಾಕಾರದ ಮೇಲೆ ಜನತೆಗೆ ಬೇಸರವಿದೆ. ಇದರಿಂದಾಗಿ ಪ್ರಸಕ್ತ ಚುನಾವಣೆಯಲ್ಲಿ ಗೋವಾದಲ್ಲಿ ಅಧಿಕಾರ ಬದಲಾವಣೆಯಾಗಲಿದೆ ಎಂದು ರಾವುತ್ ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.