ನಾನು ಎಲ್ಲಿಂದ ಸ್ಪರ್ಧಿಸಬೇಕೆಂದು ಪಕ್ಷ ತೀರ್ಮಾನ ಮಾಡಬೇಕು: ಬಿ.ವೈ.ವಿಜಯೇಂದ್ರ
Team Udayavani, Nov 28, 2021, 4:51 PM IST
ಚಿತ್ರದುರ್ಗ:ನಾನು ಪಕ್ಷಕ್ಕಾಗಿ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ,ಮುಂಬರುವ ಚುನಾವಣೆಯಲ್ಲಿ ನಾನೆಲ್ಲಿ ಸ್ಪರ್ಧಿಸಬೇಕೆಂದು ಪಕ್ಷ ತೀರ್ಮಾನ ಮಾಡಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾನುವಾರ ಹೇಳಿಕೆ ನೀಡಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಧಾನ ಪರಿಷತ್ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಉತ್ಸಹದಲ್ಲಿದ್ದಾರೆ.ಕನಿಷ್ಠ 15 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಖಚಿತ’ ಎಂದರು.
‘ಕಾಂಗ್ರೆಸ್ ಪಕ್ಷ ಈಗಾಗಲೇ ಮುಳುಗುತ್ತಿರುವ ಹಡಗು.ಇಡೀ ದೇಶದಲ್ಲಿ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಂಡಿದೆ.ಬರುವ ದಿನಗಳಲ್ಲಿ ಕಾಂಗ್ರೆಸ್ ಎಲ್ಲಿರುತ್ತದೆ ಎಂದು ತಿಳಿಯುತ್ತದೆ’ ಎಂದರು.
‘ಬಿಜೆಪಿ ಉಪ ಸಮರದಲ್ಲಿ ವಿಜಯ ಪತಾಕೆ ಹಾರಿಸಿದೆ. ಈ ಚುನಾವಣೆಯಲ್ಲಿ ಕೂಡಾ ಬಿಜೆಪಿ ಅಭ್ಯರ್ಥಿಗಳ ಗೆಲವು ಶತ ಸಿದ್ದ’ ಎಂದರು
‘ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆ ವಿಚಾರಕ್ಕೆ ಸಂಬಂಧಿಸಿ ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷರು, ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಅವರು ಚರ್ಚಿಸಿ ನಿರ್ಧಾರ ಮಾಡುತ್ತಾರೆ. ಎಲ್ಲಾ ಕ್ಷೇತ್ರದಲ್ಲಿ ಗೆಲ್ಲುವ ಅವಕಾಶ ಇದೆ, ಹೆಚ್ಚಿನ ಅಂತರದಲ್ಲಿ ಗೆಲ್ಲಲು ಜೆಡಿಎಸ್ ಪಕ್ಷದ ಬಗ್ಗೆ ಹೇಳಿದ್ದಾರೆ’ ಎಂದರು.
‘ಪಕ್ಷದ ಶಕ್ತಿ ಹಿಂದಿನ ಚುನಾವಣೆಯಲ್ಲಿ ಗೊತ್ತಾಗಿದೆ, ಈಗಲೂ ಕೂಡಾ ಗೊತ್ತಾಗುತ್ತದೆ’ ಎಂದರು.
ರಾಜ್ಯದಲ್ಲಿ ಓಮಿಕ್ರೋನ್ ವೈರಸ್ ಆತಂಕ ವಿಚಾರಕ್ಕೆ ಪ್ರತಿಕ್ರಿಯಿಸಿ, ‘ಇಡೀ ಜಗತ್ತಿನಲ್ಲಿ ಆತಂಕ ಸೃಷ್ಟಡಿಯಾಗಿದೆ.ಆರ್ಥಿಕ ಸಂಕಷ್ಟದಿಂದ ಹೊರ ಬಂದ ವೇಳೆ ಮತ್ತೆ ಈ ರೀತಿ ವಿಚಾರ ಆತಂಕ ತಂದಿದೆ.ದೇವರಲ್ಲಿ ಪ್ರಾರ್ಥನೆ ಮಾಡಬೇಕು ಅಷ್ಟೆ’ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.