![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 21, 2022, 3:37 PM IST
ಬೆಂಗಳೂರು: ಪಾವಗಡ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ವಿಧಾನಸಭೆ ಉಪ ನಾಯಕ ಯು.ಟಿ ಖಾದರ್ ಆಗ್ರಹಿಸಿದ್ದಾರೆ.
ಶೂನ್ಯವೇಳೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಅವರು, ಈ ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ಯನ್ನು ಸರ್ಕಾರ ಮಾಡಬೇಕು ಎಂದು ಆಗ್ರಹಿಸಿದರು. ಘಟನೆಯ ಹಿನ್ನೆಲೆಯಲ್ಲಿ ಸಾರಿಗೆ ಸಚಿವರು ಖಾಸಗಿ ಬಸ್ ಲೈಸೆನ್ಸ್ ರದ್ದು ಮಾಡಲಾಗುವುದು ಎಂದಿದ್ದಾರೆ. ಆದರೆ ಬಸ್ ಟಾಪ್ ಮೇಲೆ ಕುಳಿತುಕೊಂಡರೆ ಕೇಸ್ ಹಾಕುತ್ತೇವೆ ಎಂದು ಸಿಎಂ ಹೇಳಿಕೆ ನೀಡುತ್ತಾರೆ. 80 ಕ್ಕೂ ಸರ್ಕಾರಿ ಬಸ್ ಈ ಹಿಂದೆ ರೂಟ್ ನ ಲ್ಲಿ ಪ್ರಯಾಣ ಮಾಡುತ್ತಿದ್ದವು. ಇವಾಗ 30-40 ಸರ್ಕಾರಿ ಬಸ್ ಮಾತ್ರ ಓಡಾಡುತ್ತಿದೆ. ಆದರೆ 150 ಕ್ಕೂ ಹೆಚ್ಚು ಖಾಸಗಿ ಬಸ್ ಓಡಾಡುತ್ತಿದೆ ಎಂದು ತಿಳಿಸಿದರು.
ಜನಸಾಮಾನ್ಯರಿಗೆ ಸರಿಯಾದ ಸಾರಿಗೆ ಸೌಲಭ್ಯ ಕೊಡದಿರುವುದು ಟಾಪ್ ನಲ್ಲಿ ಪ್ರಯಾಣ ಮಾಡಬೇಕಾದ ಸ್ಥಿತಿ ನಿರ್ಮಾನವಾಗಿದೆ. ಈ ನಿಟ್ಟಿನಲ್ಲಿ ಉನ್ನತ ಮಟ್ಟ ಸಮಿತಿ ರಚನೆ ಮಾಡಿ ವಿವರ ಪಡೆದುಕೊಳ್ಳಬೇಕು . ಜೊತೆಗೆ ಮೃತರ ಕುಟುಂಬಕ್ಕೆ 25 ಲಕ್ಷ, ಗಾಯಾಳುಗಳಿಗೆ 10 ಲಕ್ಷ, ಸಣ್ಣ ಪ್ರಮಾಣದ ಗಾಯಾಳುಗಳಿಗೆ ಐದು ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಅಪಘಾತ ನಡೆದ ಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಹೋಗಬೇಕಿತ್ತು.ಆದರೆ ಸಿಎಂ ಆರ್ ಆರ್ ಆರ್ ಸಿನಿಮಾ ಟ್ರೇಲರ್ ರಿಲೀಸ್ ಗೆ ಹೋಗಿದ್ದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದಕ್ಕೆ ಸಚಿವ ಶ್ರೀರಾಮುಲು ಉತ್ತರಿಸಿ, ಅಪಘಾತದ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳನ್ನು ಕಳಿಸಿದ್ದೆ. ಪ್ರೈವೇಟ್ ಬಸ್ ಅಲ್ಲಿ ಓಡಾಡುತ್ತಿದ್ದವು. ಎರಡು ದಿನ ಮೊದಲು ಅಲ್ಲೊಂದು ಅಪಘಾತವಾಗಿ ಬಸ್‌ಗಳನ್ನು ಸ್ಟೇಷನ್‌ನಲ್ಲಿ ನಿಲ್ಲಿಸಲಾಗಿತ್ತು. ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಾಗಿತ್ತು. ಅಪಘಾತ ಆಗುತ್ತಿರುವ ಸ್ಥಳವನ್ನು ಬ್ಲ್ಯಾಕ್ ಸ್ಟಾಟ್ ಅಂತ ಪರಿಗಣಿಸಲಾಗುವುದು.ಅಧಿಕಾರಿಗಳ ಜೊತೆ ಚರ್ಚೆ ಮಾಡಿ, ಅಪಘಾತಕ್ಕೆ ಯಾರು ಕಾರಣ ಅಂತ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
ಸರ್ಕಾರದಿಂದ ಐದು ಲಕ್ಷ ಪರಿಹಾರ ಜೊತೆಯಲ್ಲಿ ವಯಕ್ತಿಕವಾಗಿ ನಾನು ಒಂದು ಲಕ್ಷ ನೀಡಿದ್ದೇನೆ. ಗಾಯಗೊಂಡವರಿಗೆ 50 ಸಾವಿರ ಹಣ ನೀಡಲಾಗಿದೆ. ದುರಂತ ಆಗಿರೋ ಸ್ಥಳದಲ್ಲಿ ಕೂಡ ಸ್ಥಳೀಯರು ಹೇಳಿದ್ರು. ಸರ್ಕಾರಿ ಬಸ್ ಬಂದ ಬಳಿಕ ಅಪಘಾತ ಕಡಿಮೆ ಆಗಿತ್ತು, ಆದರೆ ಈಗ ಬಸ್ ಬರದಿರೋದೇ ಅಪಘಾತಕ್ಕೆ ಕಾರಣ ಅಂದರು. ಕೂಡಲೇ ಅಧಿಕಾರಿಗಳಿಗೆ ಬಸ್ ಬಿಡುವಂತೆ ಸೂಚನೆ ನೀಡಿದ್ದೇನೆ ಎಂದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.