Jammu Kashmir Result: ಮೆಹಬೂಬ ಮುಫ್ತಿ ಪುತ್ರಿಗೆ ಸೋಲು, National Conferenceಗೆ ಜಯ
ಕಾಂಗ್ರೆಸ್ ಮತ್ತು ಎನ್ ಸಿಪಿ ಮೈತ್ರಿ 52 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ
Team Udayavani, Oct 8, 2024, 12:58 PM IST
ಜಮ್ಮು-ಕಾಶ್ಮೀರ(Jammu Kashmir): ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಾಜಿ ಸಿಎಂ ಮೆಹಬೂಬ ಮುಫ್ತಿ ಪುತ್ರಿ ಇಲ್ತಿಜಾ ಮುಫ್ತಿ ಪರಾಭವಗೊಂಡಿದ್ದು, ಮುಫ್ತಿ ನೇತೃತ್ವದ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷ (PDP) ಚುನಾವಣೆಯಲ್ಲಿ ಹೀನಾಯ ಮುಖಭಂಗ ಅನುಭವಿಸಿದೆ.
“ಚುನಾವಣೆಯಲ್ಲಿ ಮತದಾರರ ತೀರ್ಪನ್ನು ಸ್ವೀಕರಿಸಿದ್ದೇನೆ. ನನ್ನ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವುದಾಗಿ” ಇಲ್ತಿಜಾ ತಿಳಿಸಿದ್ದಾರೆ.
ಜನರ ತೀರ್ಪನ್ನು ನಾನು ಗೌರವಿಸುತ್ತೇನೆ. ನಾನು ಬಿಜ್ ಬೆಹ್ರಾ ಕ್ಷೇತ್ರದ ಮತದಾರರ ಜತೆ ಯಾವತ್ತೂ ಇರಲಿದ್ದೇನೆ. ಪ್ರಚಾರ ಸಂದರ್ಭದಲ್ಲಿ ನನ್ನ ಪರವಾಗಿ ಕಾರ್ಯನಿರ್ವಹಿಸಿದ ಪಿಡಿಪಿ ಕಾರ್ಯಕರ್ತರಿಗೆ ಚಿರಋಣಿಯಾಗಿದ್ದೇನೆ ಎಂದು ಇಲ್ತಿಜಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಚುನಾವಣ ಆಯೋಗದ ಅಂಕಿಅಂಶದ ಪ್ರಕಾರ, ಬಿಜ್ ಬೆಹ್ರಾ ಕ್ಷೇತ್ರದಲ್ಲಿ ಪಿಡಿಪಿಯ ಇಲ್ತಿಜಾ ನ್ಯಾಷನಲ್ ಕಾನ್ಫರೆನ್ಸ್ ಅಭ್ಯರ್ಥಿ ಬಶೀರ್ ಅಹ್ಮದ್ ವೀರಿ ವಿರುದ್ಧ ಸೋಲು ಅನುಭವಿಸಿದ್ದಾರೆ.
ಪಿಡಿಪಿ ನಾಯಕಿ ಇಲ್ತಿಜಾ (37ವರ್ಷ) ಶ್ರೀಗುಪ್ವಾರ-ಬಿಜ್ ಬೆಹ್ರಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ಪಿಡಿಪಿ ಕೇವಲ 4 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. 2014ರಲ್ಲಿ ಪಿಡಿಪಿ 28 ಸ್ಥಾನಗಳಲ್ಲಿ ಜಯಗಳಿಸಿತ್ತು. ಇಂದು ನಡೆಯುತ್ತಿರುವ ಮತಎಣಿಕೆಯಲ್ಲಿ ಕಾಂಗ್ರೆಸ್ ಮತ್ತು ಎನ್ ಸಿಪಿ ಮೈತ್ರಿ 52 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಭಾರತೀಯ ಜನತಾ ಪಕ್ಷ 25 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.