![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Feb 28, 2021, 8:00 PM IST
ಮೈಸೂರು: ಅರ್ಚಕ ವೃತ್ತಿಯನ್ನು ಬ್ರಾಹ್ಮಣರಿಂದ ಕಿತ್ತು ಕೊಳ್ಳುವ ಪ್ರಯತ್ನ ಸರ್ಕಾರದಿಂದ ನಡೆಯುತ್ತಿದ್ದು, ಇದಕ್ಕೇನೆಂದು ಹೇಳುವುದು ಎಂಬುದೇ ತೋಚುತ್ತಿಲ್ಲ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.
ನಗರದ ಖಾಸಗಿ ಸಭಾಂಗಣದಲ್ಲಿ ಜಿಲ್ಲಾ ಮತ್ತು ನಗರ ಬ್ರಾಹ್ಮಣ ಸಂಘ ವತಿಯಿಂದ ಭಾನುವಾರ ಆಯೋಜಿಸಲಾಗಿದ್ದ ವಿಪ್ರ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಕಾನೂನಿನಲ್ಲಿ ರೈಲ್ವೇ ನಿಲ್ದಾಣಗಳಲ್ಲಿ ಕೆಲಸ ಮಾಡುವ ಹಮಾಲಿಗಳಿಗೆ ತಮ್ಮ ಜೀವನ ತಾವು ನಡೆಸಲು ಅವಕಾಶವಿದ್ದರೆ, ಬ್ರಾಹ್ಮಣರಿಗೆ ಅರ್ಚಕರ ವೃತ್ತಿಯಲ್ಲಿ ಮುಂದುವರಿಯಲು ಅವಕಾಶ ಕೊಡದಿರುವುದು ಬೇಸರದ ಸಂಗತಿ. ಸರ್ಕಾರ ಬ್ರಾಹ್ಮಣರಿಂದ ಅರ್ಚಕ ವೃತ್ತಿಯನ್ನು ಕಿತ್ತು ಕೊಳ್ಳುವ ಪ್ರಯತ್ನ ನಡೆಸುತ್ತಿದೆ. ಈ ಎಲ್ಲಾ ಸಮಸ್ಯೆಗಳೊಳಗೆ ಪರಿಹಾರ ಕಂಡುಕೊಳ್ಳಲು ಸಂಘಟನೆಯೊಂದೇ ಪರಿಹಾರ. ನಮ್ಮ ಮೇಲೆ ದಾಳಿ ಮಾಡುತ್ತಿರುವವರ ವಿರುದ್ಧ ಹೋರಾಡಲು ಸಂಘಟನೆ ಅತ್ಯವಶ್ಯ ಎಂದು ಪ್ರತಿಪಾದಿಸಿದರು.
ಮಂದಿರ ನಿರ್ಮಾಣಕ್ಕೆ 1,500 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಈಗ 2,100 ಕೋಟಿ ರೂ. ಸಂಗ್ರಹವಾಗಿದೆ. ಮಂದಿರ ನಿರ್ಮಾಣ ಮಾಡುವುದು ದೊಡ್ಡ ವಿಷಯವೇನಲ್ಲ. ಆದರೆ ಇಷ್ಟು ಆಸ್ಥೆಯಿಂದ ನಿರ್ಮಿಸಿದ ಮಂದಿರವನ್ನು ಎಷ್ಟು ದಿವಸ ಉಳಿಸಿಕೊಳ್ಳುತ್ತೇವೆ ಎಂಬುದು ಮುಖ್ಯ. ಶ್ರೀ ರಾಮನ ಹೆಸರಿನಲ್ಲಿ ನಮ್ಮ ಸಂಸ್ಕೃತಿ ಪುನರುತ್ಥಾನವಾಗಬೇಕು. ನೀವು ಕಟ್ಟಿದ ಮಂದಿರ ಅದೆಷ್ಟು ಕಾಲ ನಿಮ್ಮ ಕೈಯಲ್ಲಿ ಉಳಿಯುತ್ತದೆ? ಅದು ಮತ್ತೆ ನಮ್ಮ ಕೈಗೆ ಬಂದೇ ಬರುತ್ತದೆ ಎಂಬ ಹೇಳಿಕೆಗಳನ್ನು ಹುಸಿಗೊಳಿಸಬೇಕು ಎಂದು ಹೇಳಿದರು.
ಇದನ್ನೂ ಓದಿ:ಧನ್ವಂತರಿ ದೇವರ ಹಾಡು ‘ಭಜರಂಗಿ 2’ ಸಿನಿಮಾದಲ್ಲಿ ವಿಶೇಷ : ನಾಗೇಂದ್ರ ಪ್ರಸಾದ್
ಕಾರ್ಯಕ್ರಮದಲ್ಲಿ ಗಣಪತಿ ಸಚ್ಚಿದಾನಂದ ಆಶ್ರಮದ ಶ್ರೀ ದತ್ತ ವಿಜಯಾನಂದ ಸ್ವಾಮೀಜಿ, ಶಾಸಕ ಎಸ್.ಎ.ರಾಮದಾಸ್, ಮುಡಾ ಅಧ್ಯಕ್ಷ ಎಚ್.ವಿ. ರಾಜೀವ್, ವಿಧಾನ ಪರಿಷತ್ ಮಾಜಿ ಸದಸ್ಯ ಗೋ.ಮಧುಸೂದನ್, ಜಿಲ್ಲಾ ಮತ್ತು ನಗರ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್, ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ , ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನಿರ್ದೇಶಕ ಎಂ.ಆರ್.ಬಾಲಕೃಷ್ಣ, ಸಿ.ವಿ. ಗೋಪಿನಾಥ್, ಪಾಲಿಕೆ ಸದಸ್ಯ ಮಾ.ವಿ.ರಾಮಪ್ರಸಾದ್, ಕೆ.ರಘುರಾಂ ವಾಜಪೇಯಿ, ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್ ಇದ್ದರು.
ಇತ್ತೀಚಿಗೆ ಬಿಡುಗಡೆಯಾದ ಕನ್ನಡ ಸಿನಿಮಾವೊಂದರಲ್ಲಿ ಬ್ರಾಹ್ಮಣರನ್ನು ಅವಹೇಳನವಾಗಿ ತೋರಿಸಲಾಗಿತ್ತು. ಇಂತಹ ಘಟನೆ ಇದೇ ಮೊದಲಲ್ಲ. ಇದಕ್ಕೆ ಪ್ರತಿರೋಧ ನಡೆದಿದ್ದು ಒಳ್ಳೆಯ ಬೆಳವಣಿಗೆಯಾಗಿದ್ದು, ಸಮಾಜ ಜಾಗೃತವಾಗಿದೆ ಎಂಬುದಕ್ಕೆ ಉದಾಹರಣೆ. ಅಭಿಮಾನ ಶೂನ್ಯ ಸಮಾಜ ಹೆಚ್ಚು ದಿನಕಾಲ ಬದುಕುವುದಿಲ್ಲ. ಸಿನಿಮಾ ಅವಹೇಳನ ದೃಶ್ಯ ಸಮಾಜದ ಎಲ್ಲರನ್ನೂ ಒಗ್ಗೂಡುವಂತೆ ಮಾಡಿದೆ.
– ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಪೇಜಾವರ ಮಠ.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.