ರಾಮ ಜನ್ಮಭೂಮಿಯ ನಿಧಿ ಸಂಗ್ರಹ ವಿಚಾರ :HDK ಅವರದ್ದು ಆಧಾರ ರಹಿತ ಆರೋಪ :ಪೇಜಾವರ ಶ್ರೀ


Team Udayavani, Feb 16, 2021, 9:00 PM IST

ರಾಮ ಜನ್ಮಭೂಮಿಯ ನಿಧಿ ಸಂಗ್ರಹ ವಿಚಾರ : HDK ಅವರದ್ದು ಆಧಾರರಹಿತ ಆರೋಪ : ಪೇಜಾವರ ಶ್ರೀ

ಉಡುಪಿ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಕುರಿತು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಮಾಡಿರುವ ಟ್ವಿಟರ್‌ ಹೇಳಿಕೆಗೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಉಡುಪಿಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಇದೊಂದು ಆಧಾರ ರಹಿತವಾದ ಆರೋಪವಾಗಿದ್ದು, ಶ್ರೀ ರಾಮ ಜನ್ಮಭೂಮಿಯ ನಿಧಿ ಸಂಗ್ರಹ ಪಾರದರ್ಶಕವಾಗಿ ನಡೆಯುತ್ತಿದೆ. ದೇಶದ ಪ್ರತಿಯೊಂದು ರಾಮಭಕ್ತರ ಮನೆಯನ್ನು ಸಂಪರ್ಕಿಸಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ ಎಂದರು.

ಈ ಉದ್ದೇಶದಿಂದ ನಿಧಿ ಸಂಗ್ರಹದ ಸಮಯದಲ್ಲಿ ಭೇಟಿ ನೀಡಿದ ಮನೆಗಳನ್ನು ಗುರುತು ಮಾಡಿಕೊಳ್ಳುತ್ತಿದ್ದೇವೆ. ಜನರ ಆಸಕ್ತಿ ನಿರೀಕ್ಷೆಗಿಂತಲೂ ಹೆಚ್ಚಿದೆ. ಕಾರ್ಯಕರ್ತರು ಸಂಪರ್ಕಿಸದ ಮನೆಗಳನ್ನು ಗುರುತು ಮಾಡಿಕೊಳ್ಳುತ್ತಿದ್ದೇವೆ. ಇದು ನಿಧಿ ಸಮರ್ಪಣೆ ಮಾಡದವರನ್ನು ಗುರುತಿಸುವ ಪ್ರಕ್ರಿಯೆಯಲ್ಲ ಎಂದು ಸ್ಪಷ್ಟನೆ ನೀಡಿದರು.

ಯಾವ ಮನೆಗಳು ಬಿಟ್ಟುಹೋಗಿವೆ ಅದನ್ನು ಮರು ಸಂಪರ್ಕ ಮಾಡುವ ನಿಟ್ಟಿನಲ್ಲಿ ಈ ಕೆಲಸ ಸಾಗುತ್ತಿದ್ದು, ಇಂತಹ ಮಹತ್ಕಾರ್ಯದ ಬಗ್ಗೆ ಪ್ರತಿಕ್ರಿಯೆ ನೀಡುವಾಗ ಜವಾಬ್ದಾರಿಯುತವಾಗಿ ಇರಬೇಕು ಎಂದು ತಿರುಗೇಟು ನೀಡಿದರು.

ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಮ ಜನ್ಮಭೂಮಿಗೆ ದೇಣಿಗೆ ನೀಡಲು ನಿರಾಕರಿಸಿದ ವಿಚಾರವಾಗಿ, ಯಾರಿಗೂ ನಿಧಿ ಸಮರ್ಪಣೆ ಮಾಡುವಂತೆ ನಾವು ಒತ್ತಾಯಿಸುವುದಿಲ್ಲ. ಯಾರಿಗೆ ಇಷ್ಟವಿದೆ ಅವರು ನೀಡಬಹುದು. ಇಷ್ಟವಿಲ್ಲದವರು ನೀಡದೆ ಇರಬಹುದು ಎಂದರು.

ಇದನ್ನೂ ಓದಿ:ಟ್ರೋಲ್ ಗಳ ಕಥೆ-ವ್ಯಥೆ: ಮನರಂಜನೆ ಮಿತಿಮೀರಿದಾಗ… ಟ್ರೋಲಿಂಗ್ ಗೆ ಶಿಕ್ಷೆಯೇನು ?

ಇನ್ನು ರಾಮ ಜನ್ಮ ಭೂಮಿ ವಿವಾದಿತ ಪ್ರದೇಶ ಎನ್ನುವ ಅವರ ಅಭಿಪ್ರಾಯದ ಬಗ್ಗೆ ನಾವು ಪ್ರತಿಕ್ರಿಯಿಸುವುದಿಲ್ಲ. ದೇಶದ ಸರ್ವೋಚ್ಚ ನ್ಯಾಯಾಲಯವೇ ಅಯೋಧ್ಯೆ ರಾಮನ ಜನ್ಮಭೂಮಿ ಎಂದು ಒಪ್ಪಿದೆ. ದೇಶದ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಅಗೌರವದಿಂದ ಕಾಣುವವರ ಬಗ್ಗೆ ಅವರ ದೇಶನಿಷ್ಠೆಯ ಬಗ್ಗೆ ನಮಗೆ ಸಂದೇಹವಿದೆ ಎಂದು ಪೇಜಾವರ ಶ್ರೀಗಳು ಪ್ರತಿಕ್ರಿಯೆ ನೀಡಿದ್ದಾರೆ.

ಟಾಪ್ ನ್ಯೂಸ್

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Udupi: ಸಂಚಾರ ಬದಲಿಸಿದರೂ ಸಮಸ್ಯೆ ಬದಲಾಗಲಿಲ್ಲ!

6

Karkala: ಲೈಸೆನ್ಸ್‌ ಇಲ್ಲದ ವ್ಯಾಪಾರಕ್ಕೆ ಕಡಿವಾಣ

9-

Delhi ಗಣರಾಜ್ಯೋತ್ಸವ; ಹೆಬ್ರಿಯ ಮಹಿಳೆಗೆ ವಿಶೇಷ ಅವಕಾಶ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

1-can

Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

1–dddd

Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

10

Udupi: ಸಂಚಾರ ಬದಲಿಸಿದರೂ ಸಮಸ್ಯೆ ಬದಲಾಗಲಿಲ್ಲ!

9

Surathkal-ಗಣೇಶಪುರ ರಸ್ತೆಯಲ್ಲಿ ಟ್ಯಾಂಕರ್‌ ರಾಜ್ಯಭಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.