ಅಪಘಾತ ಭೀತಿ : ಬೋಳ ಬರಬೈಲ್‌ ಕಿರು ಸೇತುವೆ ವಿಸ್ತರಣೆಗೆ ಗ್ರಾಮಸ್ಥರ ಆಗ್ರಹ

Team Udayavani, Mar 10, 2021, 4:30 AM IST

ಅಪಘಾತ ಭೀತಿ : ಬೋಳ ಬರಬೈಲ್‌ ಕಿರು ಸೇತುವೆ ವಿಸ್ತರಣೆಗೆ ಗ್ರಾಮಸ್ಥರ ಆಗ್ರಹ

ಬೆಳ್ಮಣ್‌: ಕಾರ್ಕಳ ತಾಲೂಕಿನಾದ್ಯಂತ ರಸ್ತೆಗಳು ವಾಹನ ಸಂಚಾರಕ್ಕೆ ಯೋಗ್ಯವಾಗಿದ್ದರೂ ಕೆಲವೆಡೆ ಕಿರು ಸೇತುವೆ, ಮೋರಿಗಳು ಇಕ್ಕಟ್ಟಾಗಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಇವುಗಳ ಪೈಕಿ ಕೆದಿಂಜೆಯಿಂದ ಕಾಂತಾವರಕ್ಕೆ ತೆರಳುವ ಪ್ರಮುಖ ಹೆದ್ದಾರಿಯಲ್ಲಿರುವ ಬರಬೆ„ಲ್‌ ಕಿರು ಸೇತುವೆಯೊಂದು ವಾಹನ ಸವಾರರಿಗೆ ನಿತ್ಯ ಸಮಸ್ಯೆಯಾಗಿದ್ದು ಸೇತುವೆ ವಿಸ್ತರಣೆಗೆ ಆಗ್ರಹ ಕೇಳಿಬಂದಿದೆ.

ಬೋಳ ಗ್ರಾ.ಪಂ. ವ್ಯಾಪ್ತಿಯ ಈ ಸೇತುವೆ ನಿರ್ಮಾಣಗೊಂಡು ಹಲವು ವರ್ಷ ಕಳೆದಿದ್ದರೂ ಅದರ ನಿರ್ವಹಣೆ ನಡೆದಿಲ್ಲ ಎನ್ನುವುದು ಗ್ರಾಮಸ್ಥರ ಆರೋಪ.

ಅಪಘಾತ ವಲಯ
ಈ ಕಿರು ಸೇತುವೆ ಇದೀಗ ಅಪಘಾತ ವಲಯವಾಗಿ ಮಾರ್ಪಟ್ಟಿದ್ದು ಪ್ರತಿ ನಿತ್ಯ ಒಂದಲ್ಲ ಒಂದು ಅಪಘಾತ ಸಂಭವಿಸುತ್ತಲೇ ಇವೆ. ಎರಡೂ ಬದಿಗಳಲ್ಲಿ ತಿರುವು, ತಗ್ಗು ಪ್ರದೇಶವಿರುವುದರಿಂದ ವಾಹನಗಳು ಅತ್ಯಂತ ವೇಗವಾಗಿ ಚಲಿಸಿದಾಗ ಗೊತ್ತುಗುರಿ ಇಲ್ಲದೆ ಅಪಘಾತಗಳು ನಡೆಯುತ್ತಿವೆ. ಪಕ್ಕದಲ್ಲೇ ಪ್ರಾಥಮಿಕ ಶಾಲೆಯೂ ಇದ್ದು ಇಲ್ಲಿನ ಮಕ್ಕಳು ನಿತ್ಯ ಸೇತುವೆ ದಾಟುವುದು ತುಂಬಾ ಅಪಾಯಕಾರಿಯಾಗಿದೆ.

ಈ ಕಿರು ಸೇತುವೆ ಅಭಿವೃದ್ಧಿಯಾಗ ಬೇಕೆಂಬುದು ಬೋಳ ಗ್ರಾಮಸ್ಥರ ಹಲವು ವರ್ಷಗಳ ಬೇಡಿಕೆಯಾಗಿದ್ದು ಈಗಾಗಲೇ ಹಲವು ಬಾರಿ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.

ಕೇವಲ ಸುಣ್ಣ ಬಣ್ಣ ಮಾತ್ರ ನಡೆಯುತ್ತಿದೆ
ಕಿರು ಸೇತುವೆಯ ಅಗಲೀಕರಣ ಬೇಡಿಕೆಯಿದ್ದರೂ ಪ್ರತೀ ಬಾರಿಯೂ ಬರಿ ಕಿರು ಸೇತುವೆಗೆ ಸುಣ್ಣ ಬಣ್ಣವನ್ನು ಬಳಿಯುವುದನ್ನು ಬಿಟ್ಟು ಅದರ ಅಗಲೀಕರಣದ ಬಗ್ಗೆ ಇಲಾಖೆ ಅಥವಾ ಅಧಿಕಾರಿಗಳು ಮನಸ್ಸೇ ಮಾಡುತ್ತಿಲ್ಲ. ಪದೇ ಪದೇ ಅಪಘಾತವನ್ನು ಸೃಷ್ಟಿಸುತ್ತಿರುವ ಈ ಸೇತುವೆಯ ಅಗಲೀಕರಣ ನಡೆಸುವಲ್ಲಿ ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು, ಲೋಕೋಪಯೋಗಿ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಶೀಘ್ರ ಕಾಮಗಾರಿ ಆರಂಭ
ಈ ಬಗ್ಗೆ ಈಗಾಗಲೇ ಶಾಸಕರ ಗಮನಕ್ಕೆ ತರಲಾಗಿದೆ. ಶೀಘ್ರದಲ್ಲೇ ಇದರ ಕಾಮಗಾರಿ ನಡೆಯಲಿದೆ.
-ಸ‌ತೀಶ್‌ ಪೂಜಾರಿ, ಬೋಳ ಗ್ರಾ.ಪಂ. ಮಾಜಿ ಅಧ್ಯಕ್ಷ

ಶೀಘ್ರ ದುರಸ್ತಿಗೊಳಿಸಿ
ಸೇತುವೆ ನಿರ್ಮಾಣವಾದ ಬಳಿಕ ಇದುವರೆಗೂ ದುರಸ್ತಿ ನಡೆದಿಲ್ಲ. ಅಧಿ ಕಾರಿಗಳು ಎಚ್ಚೆತ್ತು ಕಿರು ಸೇತುವೆಯ ವಿಸ್ತರಣೆ ನಡೆಸಬೇಕಿದೆ..
-ಚಂದ್ರಹಾಸ್‌ ಪುತ್ರನ್‌, ಸ್ಥಳೀಯರು.

ಟಾಪ್ ನ್ಯೂಸ್

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

puttige-5

Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.