ಅಜೆಕಾರು: ಅಪೂರ್ಣ ಕಾಮಗಾರಿಯಿಂದಾಗಿ ಸ್ಥಳೀಯರಿಗೆ ಸಂಕಷ್ಟ
Team Udayavani, Feb 11, 2021, 5:40 AM IST
ಅಜೆಕಾರು : ಮರ್ಣೆ ಗ್ರಾ. ಪಂ. ಹಾಗೂ ಕಡ್ತಲ ಗ್ರಾ.ಪಂ.ಗಳ ನಡುವೆ ಸಂಪರ್ಕ ಕಲ್ಪಿಸುವ ದರ್ಬುಜೆ ಸೇತುವೆ ಕಾಮಗಾರಿ ಅಪೂರ್ಣಗೊಂಡಿದ್ದು ಸ್ಥಳೀಯರು ಸಂಕಷ್ಟಪಡು ವಂತಾಗಿದೆ. ಕಡ್ತಲ ಗ್ರಾಮ ಪಂಚಾಯತ್‌ನ ದರ್ಬುಜೆ ಹಾಗೂ ಮರ್ಣೆ ಗ್ರಾ. ಪಂ.ನ ದೆಪುತ್ತೆ ಭಾಗಗಳ ನಡುವೆ ಸಂಪರ್ಕ ಕಲ್ಪಿಸುವ ಈ ಸೇತುವೆ ಕಾಮಗಾರಿ ಆರಂಭಗೊಂಡು 3 ವರ್ಷ ಕಳೆದಿದ್ದು ಕಾಮಗಾರಿ ಇನ್ನೂ ಅಪೂರ್ಣವಾಗಿರುವ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
2016-17ನೇ ಸಾಲಿನ ಕೇಂದ್ರ ರಸ್ತೆ ನಿಧಿ ಯೋಜನೆಯ ಕ್ರಿಯಾ ಯೋಜನೆಯಲ್ಲಿ ದರ್ಬುಜೆ ಸೇತುವೆಗೆ 1 ಕೋ.ರೂ. ಅನುದಾನ ಮಂಜೂರು ಗೊಂಡಿತ್ತಾದರೂ ಕೆಲ ಸಮಯ ಟೆಂಡರ್ ಪ್ರಕ್ರಿಯೆ ವಿಳಂಬದಿಂದಾಗಿ ಕಾಮಗಾರಿ ಆರಂಭ ಗೊಂಡಿರಲಿಲ್ಲ. 2018ರ ಡಿಸೆಂಬರ್‌ನಲ್ಲಿ ಸೇತುವೆ ಕಾಮಗಾರಿ ಆರಂಭಗೊಂಡು ಪಿಲ್ಲರ್ ಅಳವಡಿಸಿ ಅನಂತರ ಕಾಮಗಾರಿ ಸ್ಥಗಿತಗೊಂಡಿತ್ತು. ಅನಂತರ ಸುಮಾರು ಒಂದು ವರ್ಷದ ಬಳಿಕ 2020 ಮೇನಲ್ಲಿ ಮತ್ತೆ ಕಾಮಗಾರಿ ಆರಂಭಗೊಂಡಿತ್ತು. ಅನಂತರ ಮಳೆಗಾಲದಲ್ಲಿ ಸ್ಥಗಿತಗೊಂಡ ಕಾಮಗಾರಿ ಇನ್ನೂ ಸಹ ಅಪೂರ್ಣವಾಗಿಯೇ ಉಳಿದಿದೆ.
ಸುತ್ತು ಬಳಸಿ ಸಂಚಾರ
ಅಲ್ಲದೆ ಅಜೆಕಾರು ಭಾಗದಿಂದ ಕಡ್ತಲ ಕೈಕಂಬ ಮಾರ್ಗವಾಗಿ ಪೆರ್ಡೂರು, ಉಡುಪಿ ಸಂಪರ್ಕಿ ಸಲು ಹಾಗೂ ದೊಂಡೆರಂಗಡಿ, ದರ್ಬುಜೆ ಭಾಗದಿಂದ ಅಜೆಕಾರು, ಕಾರ್ಕಳ ಸಂಚರಿಸಲು ಅತಿ ಹತ್ತಿರದ ರಸ್ತೆ ಇದಾಗಿದೆ. ಹಲವು ವರ್ಷಗಳ ಬೇಡಿಕೆಯಿಂದಾಗಿ ಸೇತುವೆ ಮಂಜೂರುಗೊಂಡಿದ್ದು ಅಪೂರ್ಣ ಕಾಮಗಾರಿಯಿಂದಾಗಿ ಪ್ರಯೋಜನಕ್ಕೆ ಬಾರದಂತಾಗಿದೆ. ಈ ಭಾಗದ ವಿದ್ಯಾರ್ಥಿಗಳಿಗೂ ಶಾಲಾ ಕಾಲೇಜಿಗೆ ತೆರಳಲು ಸಮಸ್ಯೆಯಾಗಿದೆ.
ಕಾಮಗಾರಿ ಇನ್ನೂ ಅಪೂರ್ಣ
ಕಾಮಗಾರಿ ಮುಕ್ತಾಯದ ಅವಧಿ 2020ರ ಫೆಬ್ರವರಿಯಾಗಿದ್ದು ಅವಧಿ ಮುಗಿದು ಒಂದು ವರ್ಷ ಕಳೆದರೂ ಸಹ ಕಾಮಗಾರಿ ಅಪೂರ್ಣಗೊಂಡಿರುವುದರಿಂದ ಸ್ಥಳೀಯರ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.
ದರ್ಬುಜೆ, ದೆಪುತ್ತೆ ಪರಿಸರದ ಸುಮಾರು 500ರಷ್ಟು ಮನೆಗಳಿಗೆ ಸಂಪರ್ಕ ಕಲ್ಪಿಸಲು ಇರುವ ಏಕೈಕ ಸೇತುವೆ ಇದಾಗಿದೆ.
ಹದಗೆಟ್ಟ ರಸ್ತೆ
ದೆಪುತ್ತೆ ಹಾಗೂ ದರ್ಬುಜೆ ಭಾಗದ ಈ ಸೇತುವೆಗೆ ಸಂಪರ್ಕ ಕಲ್ಪಿಸುವ ಸುಮಾರು 4 ಕಿ.ಮೀ. ರಸ್ತೆ ಸಂಪೂರ್ಣ ಹೊಂಡಗುಂಡಿಗಳಿಂದ ಆವೃತವಾಗಿದ್ದು ರಸ್ತೆ ಮರು ಡಾಮರುಗೊಳ್ಳಬೇಕಿದೆ. ರಸ್ತೆಯಲ್ಲಿ ಬೃಹತ್ ಗಾತ್ರದ ಹೊಂಡಗಳು ನಿರ್ಮಾಣವಾಗಿ ವಾಹನ ಸಂಚಾರ ಅಸಾಧ್ಯವಾಗಿದೆ. ಸಂಬಂಧಪಟ್ಟ ವರು ತ್ವರಿತವಾಗಿ ಸೇತುವೆ ಕಾಮಗಾರಿ ಪೂರ್ಣಗೊಳಿಸುವ ಜತೆಗೆ ಸೇತುವೆಯ ಇಕ್ಕೆಲಗಳ ಸುಮಾರು 4 ಕಿ.ಮೀ. ರಸ್ತೆಯನ್ನು ಅಭಿವೃದ್ಧಿಪಡಿಸಿ ಜನರ ಸಮಸ್ಯೆಗೆ ಮುಕ್ತಿ ನೀಡಬೇಕಿದೆ ಎಂದು ಸ್ಥಳಿಯರು ಆಗ್ರಹಿಸಿದ್ದಾರೆ.
– ಜಗದೀಶ್ ಅಂಡಾರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.