Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಬಾಂಗ್ಲಾದೇಶದಲ್ಲಿ ಇಸ್ಕಾನ್ ಹೇಗೆ ಬೆಳೆಯಿತು
Team Udayavani, Nov 27, 2024, 1:48 PM IST
ಢಾಕಾ: ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದ್ದ ಹಿಂದೂ ಮುಖಂಡ ಹಾಗೂ ಇಸ್ಕಾನ್ ಸದಸ್ಯ ಚಿನ್ಮಯ್ ಕೃಷ್ಣದಾಸ್ ಬ್ರಹ್ಮಚಾರಿ ಅವರನ್ನು ಬಾಂಗ್ಲಾದೇಶ ಬಂಧಿಸಿದ್ದ ಬೆನ್ನಲ್ಲೇ ಇದೀಗ ಇಸ್ಕಾನ್ ಧಾರ್ಮಿಕ ಮೂಲಭೂತವಾದಿ ಸಂಘಟನೆಯಾಗಿದ್ದು ಇದನ್ನು ನಿಷೇಧಿಸಬೇಕೆಂದು ಕೋರಿ ಬಾಂಗ್ಲಾದೇಶ ಸರ್ಕಾರ ಬುಧವಾರ (ನ.28) ಹೈಕೋರ್ಟ್ ಮೆಟ್ಟಿಲೇರಿದೆ ಎಂದು ವರದಿ ತಿಳಿಸಿದೆ.
ಬಾಂಗ್ಲಾದೇಶದಲ್ಲಿ ಇಸ್ಕಾನ್ ಅನ್ನು ನಿಷೇಧಿಸಬೇಕೆಂದು ಬಾಂಗ್ಲಾ ಸರ್ಕಾರ ಹೈಕೋರ್ಟ್ ನಲ್ಲಿ ರಿಟ್ ಪಿಟಿಷನ್ ಸಲ್ಲಿಸಿದೆ. ಹಿಂದೂ ಮುಖಂಡ ಚಿನ್ಮಯ್ ಕೃಷ್ಣದಾಸ್ ಬ್ರಹ್ಮದಾಸ್ ಅವರ ಬಂಧನ ಖಂಡಿಸಿ ಬಾಂಗ್ಲಾದಾದ್ಯಂತ ಬೃಹತ್ ಪ್ರತಿಭಟನೆ ನಡೆಯುತ್ತಿದೆ.
ಬಾಂಗ್ಲಾದೇಶ ಸರ್ಕಾರದ ಪರ ವಕೀಲ ಇಂದು ಇಸ್ಕಾನ್ ನಿಷೇಧಿಸುವಂತೆ ಕೋರಿ ಅರ್ಜಿ ಸಲ್ಲಿಸಿರುವುದಾಗಿ ವರದಿ ವಿವರಿಸಿದೆ. ಅಲ್ಲದೇ ಚಿನ್ಮಯ್ ಕೃಷ್ಣದಾಸ್ ಗೆ ಮಂಗಳವಾರ ಜಾಮೀನು ನಿರಾಕರಿಸಿದ ನಂತರ ನಡೆದ ಘರ್ಷಣೆಯಲ್ಲಿ ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್ ಸೈಫುಲ್ ಇಸ್ಲಾಂ ಅವರ ಸಾವು ಸಂಭವಿಸಿರುವುದಾಗಿ ಹೈಕೋರ್ಟ್ ಗಮನಕ್ಕೆ ತಂದಿರುವುದಾಗಿ ವರದಿ ತಿಳಿಸಿದೆ.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಬಾಂಗ್ಲಾದೇಶದಲ್ಲಿ ಇಸ್ಕಾನ್ ಹೇಗೆ ಬೆಳೆಯಿತು ಎಂಬ ಬಗ್ಗೆ ಮಾಹಿತಿ ನೀಡುವಂತೆ ಅಟಾರ್ನಿ ಜನರಲ್ ಗೆ ಸೂಚಿಸಿದೆ. ಅದಕ್ಕೆ ಉತ್ತರ ನೀಡಿದ ಅಟಾರ್ನಿ ಜನರಲ್ ಮೊಹಮ್ಮದ್ ಅಸಾದುಜ್ಜಾಮನ್, ಇಸ್ಕಾನ್ ಯಾವುದೇ ರಾಜಕೀಯ ಪಕ್ಷವಲ್ಲ,ಇದೊಂದು ಧಾರ್ಮಿಕ ಮೂಲಭೂತವಾದಿ ಸಂಘಟನೆಯಾಗಿದೆ. ಬಾಂಗ್ಲಾ ಸರ್ಕಾರ ಅದರ ಕಾರ್ಯ ಚಟುವಟಿಕೆಯನ್ನು ಪರಿಶೀಲಿಸುತ್ತಿದೆ ಎಂದು ತಿಳಿಸಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Putin Apologizes: ಅಜರ್ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Qatar: ಕತಾರ್ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.