![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 15, 2021, 2:52 PM IST
ಪುತ್ತೂರು : ಉಪ್ಪಿನಂಗಡಿ ಠಾಣೆಯ ಎದುರು ಮಂಗಳವಾರ ಸಂಜೆ ಪಿಎಫ್ ಐ ಕಾರ್ಯಕರ್ತರ ಪ್ರತಿಭಟನೆ ವೇಳೆ ಲಾಠಿ ಚಾರ್ಜ್ ನಡೆದು ಪೊಲೀಸರು ಮತ್ತು ಪ್ರತಿಭಟನಾಕಾರರು ಗಾಯಗೊಂಡ ಬೆನ್ನಲ್ಲೇ ಪುತ್ತೂರು ಉಪವಿಭಾಗೀಯ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಮುಂದಿನ ಎರಡು ದಿನಗಳ ಕಾಲ ಸೆಕ್ಷನ್ 144ರನ್ವಯ ಪುತ್ತೂರು,ಬೆಳ್ತಂಗಡಿ,ಸುಳ್ಯ,ಕಡಬ ತಾಲೂಕಿನಾದ್ಯಂತ ನಿಷೇಧಾಜ್ಙೆ ಜಾರಿಗೊಳಿಸಲಾಗಿದೆ.
ಉಪ್ಪಿನಂಗಡಿಯಲ್ಲಿ ಡಿ 14 ರಂದು ರಾತ್ರಿ ನಡೆದ ಅಹಿತಕರ ಘಟನೆಯ ಹಿನ್ನಲೆಯಲ್ಲಿ ಉಪವಿಭಾಗಾಧಿಕಾರಿ ಮತ್ತು ಉಪವಿಭಾಗ ದಂಡಾಧಿಕಾರಿ ಡಾ. ಯತೀಶ್ ಉಳ್ಳಾಲ್ ಈ ಆದೇಶ ಹೊರಡಿಸಿದ್ದಾರೆ.
ಪುತ್ತೂರು,ಬೆಳ್ತಂಗಡಿ,ಸುಳ್ಯ,ಕಡಬ ತಾಲೂಕಿನಾದ್ಯಂತ ದಿನಾಂಕ:15 ರಿಂದ ದಿನಾಂಕ 17 ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆಯನ್ನು ವಿಧಿಸಿ ಆದೇಶಿಸುತ್ತೇನೆ ಎಂದು ಸಹಾಯಕ ಆಯುಕ್ತರು ತನ್ನ ಆದೇಶದಲ್ಲಿ ತಿಳಿಸಿದ್ದಾರೆ
ಪುತ್ತೂರು ತಾಲ್ಲೂಕಿನಾದ್ಯಂತ, ಬೆಳ್ಳಾರೆ, ಸವಣೂರು, ಬೆಳ್ತಂಗಡಿ, ಬಂಟ್ವಾಳ ಮತ್ತು ಸುಳ್ಯ ತಾಲ್ಲೂಕಿನ ವ್ಯಾಪ್ತಿಯ ಪಿಎಫ್ ಐ ಕಾರ್ಯಕರು ಠಾಣೆಯ ಎದುರು ಜಮಾವಣೆ ಗೊಂಡು ಪ್ರತಿಭಟನೆ ನಡೆಸಿದ್ದು, ಮುಂದೆ ಮತ್ತೆ ಒಂದುಗೂಡುವ ಸಾಧ್ಯತೆಗಳಿದ್ದು ಈ ಹಿನ್ನಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಸೆಕ್ಷನ್ 144 ಹಿನ್ನಲೆಯಲ್ಲಿ ಪುತ್ತೂರು ಉಪವಿಭಾಗೀಯ ವ್ಯಾಪ್ತಿಯಲ್ಲಿ ಯಾವುದೇ ಪ್ರತಿಭಟನೆ, ಮೆರವಣಿಗೆ ,ಸಾರ್ವಜನಿಕ ಸಭೆ ನಡೆಸದಂತೆ ಎಚ್ಚರಿಸಲಾಗಿದೆ.
ಈ ಅವಧಿಯಲ್ಲಿ ಪುತ್ತೂರು ಉಪವಿಭಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು 5 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ರಸ್ತೆ ಬೀದಿ,ಓಣಿ, ಕೇರಿಗಳಲ್ಲಿ, ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ, ಮತ್ತು ಸರಕಾರಿ ಕಛೇರಿ ಸುತ್ತಮುತ್ತ ಗುಂಪು ಸೇರುವುದನ್ನು ನಿಷೇಧಿಸಿದೆ.
ಯಾವುದೇ ಆಯುಧ, ಕೊಡುಗೋಲು,ಖರ ಭರ್ಚಿ,ಗದೆ, ಕೋಲು,ಚೂರಿ ದೊಡ್ಡ ಅಥವಾ ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಯಾವುದೇ ವಸ್ತುಗಳನ್ನು ಹೊಂದುವುದು ನಿಷೇಧಿಸಿದೆ.
ಯಾವುದೇ ಸಾರ್ವಜನಿಕ ಮೆರವಣಿಗೆ, ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸಬಾರದು. ಯಾವುದೇ ಕ್ಷಾರಕ ಅಥವಾ ಸ್ಫೋಟಕ ವಸ್ತುಗಳನ್ನು ಹೊಂದುವುದು ನಿಷೇಧಿಸಿದೆ.
ಸಾರ್ವಜನಿಕ ಕೋಮು ಸೌಹರ್ದಕ್ಕೆ ಧಕ್ಕೆ ಬರುವಂತಹ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು , ಸಂಸ್ಥೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಮಾಡುವುದು, ಪತ್ರಿಕೆಗಳ ಪ್ರಕಟಣೆ ಮಾಡುವುದು ಅಥವಾ ವಸ್ತುಗಳ ಪ್ರದರ್ಶನ, ಭಿತ್ತಿ ಪತ್ರಗಳನ್ನು ಅಂಟಿಸುವುದರಿಂದ, ಸಭ್ಯತನ ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅವರಾಧ ಎಸಗುವ ಮತ್ತು ಪ್ರೇರೆಪಿಸುವ ಕ್ರಮವನ್ನು ನಿಷೇಧಿಸಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.