ತೋಟದಲ್ಲಿ ಪಿಕಪ್ ವಾಹನ ಪಲ್ಟಿ : ಮರಗಳ್ಳರು ಪರಾರಿ
ಬೀಟೆ ಮರದ ದಿಮ್ಮಿ ಸಾಗಾಟ ಪ್ರಯತ್ನ ವಿಫಲ
Team Udayavani, Jun 11, 2023, 5:36 AM IST
ಮಡಿಕೇರಿ: ಕಾಫಿ ತೋಟದಲ್ಲಿದ್ದ ಬೀಟೆ ಮರವನ್ನು ಅಕ್ರಮವಾಗಿ ಕಡಿದು ಅದರ ದಿಮ್ಮಿಗಳನ್ನು ಕದ್ದೊಯ್ಯುತ್ತಿದ್ದ ಸಂದರ್ಭ ವಾಹನ ಪಲ್ಟಿಯಾದ ಹಿನ್ನೆಲೆ ಮರಗಳ್ಳರು ಸ್ಥಳದಿಂದ ಪರಾರಿಯಾಗಿರುವ ಪ್ರಕರಣ ಪೊನ್ನಂಪೇಟೆ ತಾಲೂಕಿನಲ್ಲಿ ನಡೆದಿದೆ. ಈ ಕುರಿತು ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೀಟೆ ಮರದ 7 ದಿಮ್ಮಿಗಳ ಸಹಿತ ಸಾಗಾಟಕ್ಕೆ ಬಳಸಿದ್ದ ಪಿಕಪ್ ವಾಹನವನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ.
ಪೊನ್ನಂಪೇಟೆ ತಾಲೂಕಿನ ನಲ್ಲೂರು ಗ್ರಾಮದ ತೀತರಮಾಡ ಸುನೀಲ್ ಅವರ ಕಾಫಿ ತೋಟದಲ್ಲಿ ಬೀಟೆ ಮರಗಳಿದ್ದು, ವಾರದ ಹಿಂದೆ ಮರಗಳ್ಳರು 1 ಮರವನ್ನು ಕಡಿದು ಹಾಕಿದ್ದರು. ಈ ಕುರಿತು ತೋಟದ ಮಾಲಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.
ವಿಷಯ ತಿಳಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬಂದಿ ಸ್ಥಳಕ್ಕಾಗಮಿಸಿ ಮಹಜರು ನಡೆಸಿ ಸ್ಥಳದಿಂದ ತೆರಳಿದ್ದರು. ಬೀಟೆ ಮರದ ದಿಮ್ಮಿಗಳನ್ನು ತೋಟದಲ್ಲೇ ಬಿಡಲಾಗಿತ್ತು.
ತೋಟದ ಮಾಲಕರು ಬೆಂಗಳೂರಿಗೆ ತೆರಳಿದ್ದ ಮಾಹಿತಿ ಅರಿತ ಚೋರರು ಶುಕ್ರವಾರ ರಾತ್ರಿ ಪಿಕಪ್ ವಾಹನದಲ್ಲಿ ದಿಮ್ಮಿಗಳನ್ನು ತುಂಬಿಸಿ ಕದ್ದೊಯ್ಯುವ ಪ್ರಯತ್ನ ಮಾಡಿದ್ದರು. ಈ ಸಂದರ್ಭ ವಾಹನ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಪರಿಣಾಮ ಮರ ಕಳ್ಳರು ವಾಹನ ಸಹಿತ ಬೀಟೆ ಮರದ ದಿಮ್ಮಿಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.