![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Apr 2, 2023, 5:00 AM IST
ವೇಣೂರು: ಪಿಲ್ಯ ಗ್ರಾಮದ ನಿನ್ನಿಕಲ್ಲು ಎಂಬಲ್ಲಿ ವಿಶ್ವನಾಥ್ ಎಂಬಾತನು ತನ್ನ ಅಡಿಕೆ ತೋಟದಲ್ಲಿ ಅಕ್ರಮವಾಗಿ ಮಾರಾಟದ ಉದ್ದೇಶಕ್ಕಾಗಿ ದಾಸ್ತಾನು ಇರಿಸಲಾಗಿದ್ದ ಮದ್ಯವನ್ನು ಅಬಕಾರಿ ಇಲಾಖೆ ದಾಳಿ ನಡೆಸಿ 8.280 ಲೀ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಮಂಗಳೂರು ಅಬಕಾರಿ ಉಪ ಆಯುಕ್ತ ಹಾಗೂ ಅಬಕಾರಿ ಉಪ ಅದೀಕ್ಷಕರು, ಬಂಟ್ವಾಳ ಉಪ ವಿಭಾಗರವರ ನಿರ್ದೆಶನದಂತೆ ಸಾರ್ವತ್ರಿಕ ವಿಧಾನಸಭಾ ಚುನಾವಣೆ-22023ರ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಯಾವುದೇ ಅಬಕಾರಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಗಸ್ತು ನಡೆಸುತ್ತಿರುವ ವೇಳೆ ಈ ಪ್ರಕರಣ ಪತ್ತೆಯಾಗಿದೆ.
ವಶಪಡಿಸಿಕೊಂಡ ಸೊತ್ತಿನ ಮೌಲ್ಯ ಸುಮಾರು ರೂ.3,240 ಎಂದು ಅಂದಾಜಿಸಲಾಗಿದೆ. ಕಾರ್ಯಾಚರಣೆಯಲ್ಲಿ ಅಬಕಾರಿ ನಿರೀಕ್ಷಕ ನವೀನ್, ಉಪ ನಿರೀಕ್ಷಕ ಸಯ್ಯದ್ ಶಬೀರ್ ಹಾಗೂ ಕಾನ್ಸ್‌ಟೇಬಲ್ ಭೋಜ ಕೆ., ವಿನೋಯ್ ಸಿ.ಜಿ ಮತ್ತು ವಾಹನ ಚಾಲಕ ನವೀನ್ ಪಿ. ಭಾಗವಹಿಸಿದ್ದರು. ಪ್ರಕರಣವನ್ನು ನವೀನ್ ಕುಮಾರ್ ನಿರೀಕ್ಷಕರು, ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.