![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jan 14, 2022, 6:07 PM IST
ಬೆಂಗಳೂರು: ಮನೆ ಮನೆಗೆ ಅನಿಲ ಸಂಪರ್ಕ ಒದಗಿಸುವ ಮೂಲಕ ಸಿಲಿಂಡರ್ ಗೊಡವೆ ತಪ್ಪಿಸುವ ಕೇಂದ್ರ ಸರ್ಕಾರದ ಅನಿಲ ಕೊಳವೆ ಸಂಪರ್ಕ ಯೋಜನೆಯಡಿ ರಾಜ್ಯದ ಚಿಕ್ಕಬಳ್ಳಾಪುರ ಮತ್ತು ಯಾದಗಿರಿ ಆಯ್ಕೆಯಾಗಿದ್ದು, ಹೈದರಾಬಾದ್ ಮೂಲದ ಬಹು ಕ್ಷೇತ್ರದ ಜಾಗತಿಕ ಸಂಸ್ಥೆ ಮೆಘಾ ಇಂಜಿನಿಯರಿಂಗ್ & ಇನ್ಫ್ರಾಸ್ಟ್ರಕ್ಚರ್ ಯೋಜನೆ ಜಾರಿ ಅವಕಾಶವನ್ನು ತನ್ನದಾಗಿಸಿಕೊಂಡಿದೆ.
ಕೇಂದ್ರ ಸರ್ಕಾರಿ ಸ್ವಾಮ್ಯದ ನೈಸರ್ಗಿಕ ಅನಿಲ ನಿಯಂತ್ರಣ ಮಂಡಳಿ ದೇಶದ ಒಟ್ಟು 65 ಭೂ ಪ್ರದೇಶಗಳಲ್ಲಿ ಈ ಯೋಜನೆ ಜಾರಿಗೆ ಟೆಂಡರ್ ಕರೆದಿತ್ತು. ನಾಲ್ಕು ಪ್ರದೇಶಗಳ ಹೊರತಾಗಿ 61 ಪ್ರದೇಶಗಳ ಸೇವೆಗೆ ವಿವಿಧ ಸಂಸ್ಥೆಗಳು ಮುಂದಾಗಿದ್ದವು. ಈ ಪೈಕಿ ಈಗಾಗಲೇ ಅನಿಲ ವಿತರಣೆಯಲ್ಲಿ ಅನುಭವಹೊಂದಿರುವ ಎಂಇಐಎಲ್ 15 ಭೂ ಪ್ರದೇಶಗಳ ಟೆಂಡರ್ ಅನ್ನು ಪಡೆದುಕೊಂಡಿದೆ.
ಈಗಾಗಲೇ ರಾಜ್ಯದ ತುಮಕೂರು ಮತ್ತು ಬೆಳಗಾವಿಯಲ್ಲಿ ನೈಸರ್ಗಿಕ ಅನಿಲ ಸಂಪರ್ಕವನ್ನು ಸಾಧ್ಯವಾಗಿಸಿದ ಅನುಭವ ಹೊಂದಿರುವ ಎಂಇಐಎಲ್ ‘ನಗರ ಅಥವಾ ತಾಯಿ ಕೇಂದ್ರ (ಸಿಟಿ ಅಥವಾ ಮದರ್ ಕೇಂದ್ರ)ಗಳನ್ನು, ಮನೆ ಮನೆ ಸಂಪರ್ಕಕ್ಕೆ ಮುಖ್ಯ ಪೈಪ್‌ಲೈನ್‌ಗಳ ಅವಳಡಿಕೆ ಜತೆಗೆ ಸಿಎನ್‌ಜಿ ಕೇಂದ್ರಗಳನ್ನು ಸ್ಥಾಪಿಸಲಿದೆ.
ಹಸಿರು ಅನಿಲ ಬಳಕೆಗೆ ಉತ್ತೇಜನ ನೀಡುವ ಸಲುವಾಗಿ ಕೇಂದ್ರ ಸರ್ಕಾರದ ನೈಸರ್ಗಿಕ ಅನಿಲ ನಿಯಂತ್ರಣ ಮಂಡಳಿ ಈ ಯೋಜನೆಯನ್ನು ಜಾರಿಗೊಳಿಸುತ್ತಿದ್ದು, ಪೈಪ್‌ಗಳ ಮೂಲಕ ಗೃಹೋಪಯೋಗಿ ಮತ್ತು ಕೈಗಾರಿಕಾ ಉದ್ದೇಶಕ್ಕಾಗಿ ಅನಿಲ ಸಂಪರ್ಕ (ಪಿಎನ್‌ಜಿ), ವಾಹನ ಮತ್ತು ಆಟೋಮೋಬೈಲ್ ಕ್ಷೇತ್ರದ ಬಳಕೆಗಾಗಿ ಪಿಎನ್‌ಜಿ ಅನಿಲವನ್ನು ಒದಗಿಸುತ್ತಿದೆ.ಈಗಾಗಲೇ ದೇಶದ ಮೂರು ರಾಜ್ಯಗಳಲ್ಲಿ ಎಂಇಐಎಲ್ ‘ಮೆಘಾ ಗ್ಯಾಸ್’ ಹೆಸರಿನಡಿ 32 ಸಿಎನ್‌ಜಿ ಕೇಂದ್ರಗಳನ್ನು ಯಶಸ್ವಿಯಾಗಿ ನಡೆಸುತ್ತಿದೆ.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.