ಮಹಿಳಾ ಸ್ವಸಹಾಯ ಸಂಘಗಳಿಗೆ 1,625 ಕೋಟಿ ರೂ. ಬಿಡುಗಡೆ
ಎಸ್‌ಎಚ್‌ಜಿ ಕಾರ್ಯಕರ್ತೆಯರ ಜೊತೆಗೆ ವರ್ಚುಯಲ್ ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ
Team Udayavani, Aug 12, 2021, 11:00 PM IST
ನವದೆಹಲಿ: “ಹಿಂದಿನ ಸರ್ಕಾರಗಳು ಮಹಿಳೆಯರ ಅಭಿವೃದ್ಧಿ ವಿಚಾರವನ್ನು ತೀವ್ರವಾಗಿ ನಿರ್ಲಕ್ಷಿಸಿದ್ದು, ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮಹಿಳೆಯರ ಸಬಲೀಕರಣಕ್ಕಾಗಿ ಹಿಂದೆಂದೂ ಕಾಣದ ರೀತಿಯಲ್ಲಿ ಹೊಸ ಹೆಜ್ಜೆಗಳನ್ನು ಇರಿಸಲಾಗಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಇದೇ ವೇಳೆ, ಸ್ವಸಹಾಯ ಸಂಘಗಳ ಮೂಲ ನಿಧಿಗಾಗಿ 1,625 ಕೋಟಿ ರೂ.ಗಳನ್ನು ಪ್ರಧಾನಿ ಬಿಡುಗಡೆ ಮಾಡಿದ್ದಾರೆ. ಜೊತೆಗೆ, 7,500 ಎಸ್‌ಎಚ್‌ಜಿಗಳ ಸ್ವಾವಲಂಬನೆಗಾಗಿ ಪ್ರಧಾನಮಂತ್ರಿ ಸಣ್ಣ ಆಹಾರ ಸಂಸ್ಕರಣಾ ಘಟಕಗಳ ನಿಯಮಬದ್ಧ ಯೋಜನೆಯಡಿ 25 ಕೋಟಿ ರೂ. ಹಾಗೂ ಆಹಾರ ಸಂಸ್ಕರಣೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಎಸ್‌ಎಚ್‌ಜಿಗಳ ಮೂಲಧನವಾಗಿ 4.13 ಕೋಟಿ ರೂ.ಗಳನ್ನು ಪ್ರಧಾನಿ ಬಿಡುಗಡೆ ಮಾಡಿದರು.
ಇದನ್ನೂ ಓದಿ:ಮೂರು ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ ರಣತಂತ್ರ
ಮಹಿಳಾ ಸ್ವಸಹಾಯ ಸಂಘಗಳ (ಎಸ್‌ಎಚ್‌ಜಿ) ಕಾರ್ಯಕರ್ತೆಯರ ಜೊತೆಗೆ ವರ್ಚುವಲ್ ಸಂವಾದ ನಡೆಸಿದ ಮೋದಿ, “ಬದಲಾದ ಭಾರತದಲ್ಲಿ ಮಹಿಳೆಯರು ಅಭಿವೃದ್ಧಿಗೊಳ್ಳಲು ನಾನಾ ಅವಕಾಶಗಳು ರೂಪುಗೊಂಡಿವೆ. ಅದರ ಪರಿಣಾಮವಾಗಿ, ಕಳೆದ ಆರೇಳು ವರ್ಷಗಳಲ್ಲಿ ದೇಶದ ನಾನಾ ಭಾಗಗಳಲ್ಲಿ ಸುಮಾರು 70 ಲಕ್ಷ ಮಹಿಳಾ ಸ್ವಸಹಾಯ ಸಂಘಗಳ ಕಾರ್ಯಕರ್ತೆಯರು ಮಹಿಳೆಯರ ಅಭ್ಯುದಯಕ್ಕಾಗಿ ಶ್ರಮಿಸುತ್ತಿದ್ದಾರೆ. ಇಂಥ ಸಂಘಗಳ ಸಂಖ್ಯೆ ಹಿಂದಿಗಿಂತ ಮೂರು ಪಟ್ಟು ಹೆಚ್ಚಾಗಿದೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.