ಕೋವಿಡ್ ನಿಯಂತ್ರಣ ಸಂಬಂಧ ರಾಜ್ಯಗಳ ಜತೆ ಪ್ರಧಾನಿ ಸಭೆ
Team Udayavani, Dec 23, 2021, 3:28 PM IST
ನವದೆಹಲಿ: ಕೋವಿಡ್ ನಿಯಂತ್ರಣ ಪ್ರಕ್ರಿಯೆಗಳ ಬಗ್ಗೆ ಚರ್ಚಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಜತೆಗೆ ಗುರುವಾರ ಸಂಜೆ ಮಹತ್ವದ ಸಭೆ ನಡೆಸಲಿದ್ದಾರೆ.
ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಪುನರ್ ಪರಿಶೀಲನೆಗಾಗಿ ಈ ಸಭೆ ನಡೆಸಲಾಗುವುದು ಎಂದು ಪ್ರಧಾನಿ ಕಾರ್ಯಾಲಯದ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
ದೇಶದಲ್ಲಿ ಇದುವರೆಗೆ 236 ಒಮಿಕ್ರಾನ್ ಪ್ರಕರಣಗಳು ವರದಿಯಾಗಿದ್ದು, 104 ಜನರು ಗುಣಮುಖರಾಗಿದ್ದಾರೆ. ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಕಳುಹಿಸಿರುವ ಮಾಹಿತಿ ಪ್ರಕಾರ, ಡೆಲ್ಟಾಗಿಂತಲೂ ಒಮಿಕ್ರಾನ್ ಮೂರು ಪಟ್ಟು ಹೆಚ್ಚು ವೇಗವಾಗಿ ಹರಡುತ್ತದೆ. ಈ ಹಿನ್ನೆಲೆಯಲ್ಲಿ ಮತ್ತೆ ವಾರ್ ರೂಂ ಆರಂಭಿಸುವುದು ಸೇರಿದಂತೆ ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಕೇಂದ್ರ ಸೂಚಿಸಿದೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.