ಧಾರವಾಡ: ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ ದೇಶಕ್ಕೆ ಸಮರ್ಪಿಸಿದ ಪ್ರಧಾನಿ
ಇತ್ತೀಚೆಗಷ್ಟೇ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ
Team Udayavani, Mar 12, 2023, 8:06 PM IST
ಧಾರವಾಡ: ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ನಿಲ್ದಾಣದಲ್ಲಿ “ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್” ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ದೇಶಕ್ಕೆ ಸಮರ್ಪಿಸಿದರು.
ಇತ್ತೀಚೆಗಷ್ಟೇ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯಿಂದ ಈ ದಾಖಲೆ ಗುರುತಿಸಿಕೊಂಡಿದ್ದು, ಸುಮಾರು 20 ಕೋಟಿ ರೂ. ವೆಚ್ಚದಲ್ಲಿ 1,507 ಮೀಟರ್ ಉದ್ದದ ಪ್ಲಾಟ್‌ಫಾರ್ಮ್ ನಿರ್ಮಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಧಾರವಾಡದ ಐಐಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು, ಹೊಸಪೇಟೆ-ಹುಬ್ಬಳ್ಳಿ-ತಿನೈಘಾಟ್ ವಿಭಾಗದ ವಿದ್ಯುದ್ದೀಕರಣ ಮತ್ತು ಹೊಸಪೇಟೆ ನಿಲ್ದಾಣದ ಮೇಲ್ದರ್ಜೆಗೇರಿಸಿ, ಈ ಪ್ರದೇಶದಲ್ಲಿ ಸಂಪರ್ಕವನ್ನು ಹೆಚ್ಚಿಸಲು ದೇಶಕ್ಕೆ ಸಮರ್ಪಿಸಿದರು.
530 ಕೋಟಿ ರೂ.ಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ವಿದ್ಯುದ್ದೀಕರಣ ಯೋಜನೆಯು ಇಲೆಕ್ಟ್ರಿಕ್ ತಡೆರಹಿತ ರೈಲು ಕಾರ್ಯಾಚರಣೆಯನ್ನು ಆರಂಭಿಸಿದೆ. ಹೊಸಪೇಟೆ ನಿಲ್ದಾಣವನ್ನು ಪುನರಾಭಿವೃದ್ಧಿ ಮಾಡಲಾಗಿದ್ದು, ಪ್ರಯಾಣಿಕರಿಗೆ ಅನುಕೂಲಕರ ಮತ್ತು ಆಧುನಿಕ ಸೌಲಭ್ಯಗಳನ್ನು ಒದಗಿಸಲಾಗುವುದು. ಇದನ್ನು ಹಂಪಿ ಸ್ಮಾರಕಗಳನ್ನು ಹೋಲುವಂತೆ ವಿನ್ಯಾಸಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿಯ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿಯವರು ನೆರವೇರಿಸಿದರು. ಈ ಯೋಜನೆಗಳ ಒಟ್ಟು ಅಂದಾಜು ವೆಚ್ಚ ಸುಮಾರು 520 ಕೋಟಿ ರೂ.ಆಗಿದೆ.
ಸುಮಾರು 250 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸುವ ಧಾರವಾಡ ಭಾಗದ ಜನರಿಗೆ ತೃತೀಯ ಹಂತದ ಹೃದಯ ಚಿಕಿತ್ಸೆ ನೀಡುವ ಜಯದೇವ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮತ್ತು 1,040 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವ ಧಾರವಾಡ ಬಹುಗ್ರಾಮ ನೀರು ಸರಬರಾಜು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು.
ತುಪ್ಪರಿಹಳ್ಳ ಪ್ರವಾಹ ಹಾನಿ ನಿಯಂತ್ರಣ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸುಮಾರು 150 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯೋಜನೆಯು ಪ್ರವಾಹದಿಂದ ಉಂಟಾಗುವ ಹಾನಿಯನ್ನು ತಗ್ಗಿಸುವ ಗುರಿಯನ್ನು ಹೊಂದಿದೆ ಮತ್ತು ತಡೆಗೋಡೆಗಳು ಮತ್ತು ಒಡ್ಡುಗಳ ನಿರ್ಮಾಣ ಮಾಡಲಾತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.