ಪ್ರಧಾನಿ ಮೋದಿ ಸ್ಫೂರ್ತಿದಾಯಕ ವ್ಯಕ್ತಿ : ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸನ್
Team Udayavani, Oct 9, 2021, 2:46 PM IST
ಹೊಸದಿಲ್ಲಿ : ನವೀಕರಿಸಬಹುದಾದ ಇಂಧನದ ಮೂಲಕ ಮಹತ್ವಾಕಾಂಕ್ಷೆಯ ವಾತಾವರಣ ನಿರ್ಮಾಣ ಮಾಡುವ ಗುರಿಯನ್ನು ಹೊಂದಿದ ಪ್ರಧಾನಿ ನರೇಂದ್ರ ಮೋದಿ ಯವರು ವಿಶ್ವದ ಇತರರಿಗೆ ಸ್ಫೂರ್ತಿದಾಯಕ ವ್ಯಕ್ತಿ ಎಂದು ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸನ್ ಶನಿವಾರ ಹೇಳಿಕೆ ನೀಡಿದ್ದಾರೆ.
ಮೂರು ದಿನಗಳ ಭಾರತ ಪ್ರವಾಸಕ್ಕೆ ಆಗಮಿಸಿರುವ ಡ್ಯಾನಿಶ್ ನಾಯಕಿ ಮೆಟ್ಟೆ ಫ್ರೆಡೆರಿಕ್ಸನ್,ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ‘ಡೆನ್ಮಾರ್ಕ್ ಗೆ ಬರುವಂತೆ ನಾನು ನೀಡಿರುವ ಆಹ್ವಾನವನ್ನು ಪ್ರಧಾನಿ ಮೋದಿ ಸ್ವೀಕರಿಸಿದ್ದಾರೆ’ ಎಂದು ಸಂತಸ ವ್ಯಕ್ತಪಡಿಸಿದರು.
‘ಎರಡೂ ಪ್ರಜಾಪ್ರಭುತ್ವ ರಾಷ್ಟ್ರಗಳು ನಿಯಮಗಳ ಮೇಲೆ ನಂಬಿಕೆಯುಳ್ಳ ಅಂತಾರಾಷ್ಟ್ರೀಯ ವ್ಯವಸ್ಥೆಯನ್ನು ಹೊಂದಿವೆ’ ಎಂದರು.
ಪ್ರಧಾನಿ ಮೋದಿ ಅವರು 2030ರ ವೇಳೆಗೆ 450 ಜಿಗಾ ವ್ಯಾಟ್ಸ್ ನವೀಕರಿಸಬಹುದಾದ ಇಂಧನ ಉತ್ಪಾದನೆಯ ಮಹತ್ವಾಕಾಂಕ್ಷೆ ಹೊಂದಿದ್ದಾರೆ.
ಪ್ರಧಾನಿ ಮೋದಿ ಮತ್ತು ಮೆಟ್ಟೆ ಫ್ರೆಡೆರಿಕ್ಸನ್ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
‘ಹಸಿರು ಕಾರ್ಯತಂತ್ರದ ಪಾಲುದಾರಿಕೆ ವಿಚಾರಕ್ಕೆ ಸಂಬಂಧಿಸಿ ಡೆನ್ಮಾರ್ಕ್ ಜೊತೆ ಭಾರತ ಸಹಭಾಗಿತ್ವ ಹೊಂದಿದೆ . ಎರಡೂ ದೇಶಗಳು ಪರಿಸರದ ಕುರಿತು ದೂರದರ್ಶಿತ್ವ ಹೊಂದಿದ್ದು, ಬದ್ಧತೆಯೊಂದಿಗೆ ಕೆಲಸ ಮಾಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.