2022ರ ಮೊದಲ ವಿದೇಶ ಭೇಟಿ; ಮೇ ತಿಂಗಳಲ್ಲಿ ಪ್ರಧಾನಿ ಮೋದಿ 3 ಯುರೋಪ್ ದೇಶಗಳಿಗೆ ಭೇಟಿ
ಈ ದ್ವಿಪಕ್ಷೀಯ ಐಜಿಸಿ ಸಭೆಯಲ್ಲಿ ಉಭಯ ದೇಶಗಳ ಹಲವಾರು ಸಚಿವರು ಪಾಲ್ಗೊಳ್ಳಲಿದ್ದಾರೆ.
Team Udayavani, Apr 27, 2022, 2:55 PM IST
ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರ 2022ನೇ ಸಾಲಿನ ಮೊದಲ ವಿದೇಶ ಪ್ರಯಾಣದ ಪಟ್ಟಿ ಬಿಡುಗಡೆಯಾಗಿದ್ದು, ಮೇ 2ರಿಂದ 4ರವರೆಗೆ ಜರ್ಮನಿ, ಡೆನ್ಮಾರ್ಕ್ ಹಾಗೂ ಫ್ರಾನ್ಸ್ ಗೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬುಧವಾರ (ಏಪ್ರಿಲ್ 27) ತಿಳಿಸಿದೆ.
ಇದನ್ನೂ ಓದಿ:ಕೋವಿಡ್ ಭೀತಿ ಇನ್ನೂ ಸಂಪೂರ್ಣವಾಗಿ ಹೋಗಿಲ್ಲ: ಸಿಎಂಗಳೊಂದಿಗೆ ಪ್ರಧಾನಿ ಸಭೆ
ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ, 2022ರಲ್ಲಿನ ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ವಿದೇಶ ಪ್ರವಾಸ ಇದಾಗಿದೆ. ಬರ್ಲಿನ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜರ್ಮನಿಯ ಫೆಡರಲ್ ಚಾನ್ಸೆಲರ್ ಓಲಾಫ್ ಸ್ಕೋಲ್ಝ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ನಂತರ ಉಭಯ ನಾಯಕರು ಆರನೇ ಆವೃತ್ತಿಯ ಭಾರತ-ಜರ್ಮನಿ ನಡುವಿನ ಐಜಿಸಿ (ಇಂಟರ್ ಗವರ್ನಮೆಂಟಲ್ ಕನ್ಸ್ ಸಲ್ಟೇಶನ್ಸ್ ) ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಈ ದ್ವಿಪಕ್ಷೀಯ ಐಜಿಸಿ ಸಭೆಯಲ್ಲಿ ಉಭಯ ದೇಶಗಳ ಹಲವಾರು ಸಚಿವರು ಪಾಲ್ಗೊಳ್ಳಲಿದ್ದಾರೆ.
ಜರ್ಮನಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಅವರೊಂದಿಗೆ ಸಂವಹನ ನಡೆಸಲಿದ್ದಾರೆ ಎಂದು ವರದಿ ಹೇಳಿದೆ. 2021ರಲ್ಲಿ ಭಾರತ ಮತ್ತು ಜರ್ಮನಿ ನಡುವಿನ ರಾಜತಾಂತ್ರಿಕ ಸಂಬಂಧದ 70ನೇ ವರ್ಷಾಚರಣೆ ಆಚರಿಸಿತ್ತು.
ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫೆಡರಿಕ್ ಸೆನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೋಪನ್ ಹೇಗ್ ಗೆ ಅಧಿಕೃತ ಭೇಟಿ ನೀಡಲಿದ್ದಾರೆ. ನಂತರ ಡೆನ್ಮಾರ್ಕ್ ಆಯೋಜನೆಯ 2ನೇ ಭಾರತ-ನೋರ್ಡಿಕ್ ಶೃಂಗದಲ್ಲಿ ಪಾಲ್ಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.