PM ವರ್ಚುವಲ್ ಸಂವಾದ: ಆಯೋಗಕ್ಕೆ ದೂರು
Team Udayavani, Apr 29, 2023, 7:42 AM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನಡೆಸಿದ ವರ್ಚುವಲ್ ಸಂವಾದ ಕಾರ್ಯಕ್ರಮದ ವಿರುದ್ಧ ಚುನಾವಣ ಆಯೋಗಕ್ಕೆ ದೂರು ಸಲ್ಲಿಸಲು ಕಾಂಗ್ರೆಸ್ ನಿರ್ಧರಿಸಿದೆ.
ಯಾವುದೇ ಅನುಮತಿ ಇಲ್ಲದೆ ನರೇಂದ್ರ ಮೋದಿ ಅವರು ಲಕ್ಷಾಂತರ ಕಾರ್ಯಕರ್ತರೊಂದಿಗೆ ವರ್ಚುವಲ್ ಸಂವಾದ ನಡೆಸಿದ್ದಾರೆ. ಈ ಬಗ್ಗೆ ಆಯೋಗದ ಸಂಬಂಧಪಟ್ಟ ಅಧಿಕಾರಿಗಳನ್ನು ವಿಚಾರಿಸಿದಾಗ, ಅನುಮತಿ ಪಡೆದಿಲ್ಲದಿರುವುದು ಗೊತ್ತಾಗಿದೆ. ಇದು ಚುನಾವಣ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದ್ದು, ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.
50 ಲಕ್ಷ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ವರ್ಚುವಲ್ ಆಗಿ ಸಂವಾದ ನಡೆಸಿರುವುದಾಗಿ ಸ್ವತಃ ಬಿಜೆಪಿ ಅಧಿಕೃತವಾಗಿ ಹೇಳಿಕೊಂಡಿದೆ. ಅದು ಎಲ್ಲೆಡೆ ಪ್ರಕಟವಾಗಿದೆ. ಆದರೆ ಇದಕ್ಕೆ ಆಯೋಗದಿಂದ ಯಾವುದಾದರೂ ಅನುಮತಿ ಪಡೆಯಲಾಗಿದೆಯೇ? ಸಂವಾದ ಆಯೋಜನೆ ಪ್ರಾಯೋಜಕತ್ವ ಯಾರದ್ದು? ಅದರ ವೆಚ್ಚ ಯಾರ ಖಾತೆಗೆ ಜಮೆ ಮಾಡಲಾಗುತ್ತದೆ? ನಿಯಮ ಉಲ್ಲಂಘನೆಯಾಗಿದ್ದರೆ ಯಾರ ವಿರುದ್ಧ ಪ್ರಕರಣ ದಾಖಲಿಸುತ್ತೀರಿ ಮುಂತಾದ ಹಲವಾರು ಪ್ರಶ್ನೆಗಳಿಗೆ ಬಿಜೆಪಿ ಮತ್ತು ಆಯೋಗ ಉತ್ತರ ನೀಡಬೇಕಿದೆ ಎಂದು ಹೇಳಿದರು.
ಈ ಸಂಬಂಧ ಆಯೋಗಕ್ಕೆ ದೂರು ನೀಡುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ಖಂಡಿತವಾಗಿಯೂ ದೂರು ದಾಖಲಿಸುತ್ತೇವೆ. ಈಗಾಗಲೇ ಕಾಂಗ್ರೆಸ್‌ನ ಸಂಬಂಧಪಟ್ಟ ವಿಭಾಗದ ಮುಖ್ಯಸ್ಥರು ಆಯೋಗದ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಅನುಮತಿ ಪಡೆಯದಿರುವುದು ಖಾತ್ರಿ ಆಗಿದೆ. ಹಾಗಾಗಿ ದೂರು ದಾಖಲಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.