ಪೋಕ್ಸೋ ಪ್ರಕರಣ: ಆರೋಪಿಗೆ ಜೈಲುಶಿಕ್ಷೆ
Team Udayavani, Apr 15, 2023, 5:14 AM IST
ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ನ್ಯಾಯಾಲಯದಲ್ಲಿನ ಪೋಕೊÕ ತ್ವರಿತ ವಿಶೇಷ ನ್ಯಾಯಾಲಯವು 3 ವರ್ಷ ಜೈಲುಶಿಕ್ಷೆ ವಿಧಿಸಿ ಮಂಗಳವಾರ ಆದೇಶಿಸಿದೆ.
ಗೋವಿಂದ ನಾಯ್ಕ ಶಿಕ್ಷೆಗೆ ಗುರಿಯಾಗಿರುವ ಆರೋಪಿ. 2021ರ ಮಾ. 2ರಂದು ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ 13ವರ್ಷ ವಯಸ್ಸಿನ ಬಾಲಕಿಯು ಆರೋಪಿ ಗೋವಿಂದ ನಾಯ್ಕನ ಅಂಗಡಿಗೆ ಬಿಸ್ಕೆಟ್ ಖರೀದಿಸಲು ಹೋಗಿದ್ದಳು. ಈ ವೇಳೆ ಆರೋಪಿ ಬಾಲಕಿಗೆ ಬಿಸ್ಕೆಟ್ ನೀಡಿ, ಜ್ಯೂಸ್ ಕೊಡುವುದಾಗಿ ಹೇಳಿ ಅಂಗಡಿ ಒಳಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಂದಿನ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಆರೋಪಿ ವಿರುದ್ಧ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅವರು ಆರೋಪಿ ಗೋವಿಂದ ನಾಯ್ಕನನ್ನು ದೋಷಿ ಎಂದು ತೀರ್ಮಾನಿಸಿ ಆದೇಶಿಸಿದ್ದಾರೆ. ಅದರಂತೆ ಪೋಕೊÕ ಕಾಯ್ದೆಯಡಿ ಮೂರು ವರ್ಷ ಜೈಲು ಶಿಕ್ಷೆ ಮತ್ತು 2 ಸಾವಿರ ರೂ. ದಂಡ, ದಂಡ ಪಾವತಿಸಲು ತಪ್ಪಿದಲ್ಲಿ ಮೂರು ತಿಂಗಳ ಜೈಲು ಶಿಕ್ಷೆ, 354(ಎ) ಕಾಯ್ದೆಯಡಿ ಒಂದು ವರ್ಷ ಸಾದಾ ಸಜೆ ಮತ್ತು 1,500 ರೂ. ದಂಡ, ದಂಡ ಪಾವತಿಸಲು ತಪ್ಪಿದ್ದಲ್ಲಿ ಒಂದು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ದಂಡದ ಒಟ್ಟು 3,500ರೂ. ಮೊತ್ತದಲ್ಲಿ 2,000ರೂ. ಸಂತ್ರಸ್ತೆಗೆ ಹಾಗೂ 1,500 ರೂ. ಸರಕಾರಕ್ಕೆ ಪಾವತಿಸಬೇಕಾಗಿ ಆದೇಶದಲ್ಲಿ ತಿಳಿಸಲಾಗಿದೆ. ಪ್ರಾಸಿಕ್ಯೂಶನ್ ಪರವಾಗಿ ಉಡುಪಿ ಪೋಕೊÕ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.