ಬನಹಟ್ಟಿ ಪೊಲೀಸರ ಕಾರ್ಯಾಚರಣೆ : ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ, 5 ಬೈಕ್ ವಶಕ್ಕೆ
Team Udayavani, May 8, 2021, 7:31 PM IST
ಬನಹಟ್ಟಿ : ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬನಹಟ್ಟಿ ಠಾಣೆ ಪೊಲೀಸರು, ಬಂಧಿತರಿಂದ 1.1 ಲಕ್ಷ ರೂ. ಮೌಲ್ಯದ 5 ಬೈಕ್‌ಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ವಿಜಯಪುರ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಡೆದಿದ್ದ ಬೈಕ್ ಕಳ್ಳತನ ಪ್ರಕರಣಗಳನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಬಕವಿ-ಬನಹಟ್ಟಿ ತಾಲೂಕಿನ ಹನಗಂಡಿ ಗ್ರಾಮದ ತನವೀರ ರಮಜಾನ್‌ಸಾಬ ಲಾಡಖಾನ(21) ಹಾಗು ಬನಹಟ್ಟಿಯ ಅಶೋಕ ಕಾಲನಿಯ ರಮಜಾನ್ ಇಸ್ಮಾಯಿಲಸಾಬ ನದಾಫ್(29) ಎಂದು ಗುರುತಿಸಲಾಗಿದೆ. ಬೈಕ್ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳು ನಕಲಿ ಕೀ ಬಳಸಿ ವಿಶೇಷವಾಗಿ ಹೀರೋ ಹೊಂಡಾ ಸ್ಪ್ಲೆಂಡರ್ ಬೈಕ್‌ಗಳನ್ನೇ ಹೆಚ್ಚಾಗಿ ಕಳ್ಳತನ ಮಾಡಿದ್ದಾರೆಂದು ತಿಳಿದು ಬಂದಿದೆ.
ಇದನ್ನೂ ಓದಿ :ಬೋಯಿಂಗ್ ಇಂಡಿಯಾ ಸಂಸ್ಥೆಯಿಂದ ಕಲಬುರಗಿಯಲ್ಲಿ 250 ಆಕ್ಸಿಜನ್ ಬೆಡ್ ಗಳ ಆಸ್ಪತ್ರೆ ನಿರ್ಮಾಣ
ಜಮಖಂಡಿ ಡಿವೈಎಸ್ಪಿ ಪಾಂಡುರಂಗಯ್ಯ ಹಾಗು ಬನಹಟ್ಟಿ ವೃತ್ತ ನಿರೀಕ್ಷಕ ಜೆ. ಕರುಣೇಶಗೌಡ ಮಾರ್ಗದರ್ಶನದಲ್ಲಿ ಠಾಣಾಧಿಕಾರಿ ರವಿಕುಮಾರ ಧರ್ಮಟ್ಟಿ, ಎಎಸ್‌ಐ ಎಸ್.ಎಸ್. ಬಾಬಾನಗರ, ವಿ.ಎಸ್. ಅಜ್ಜನಗೌಡರ, ಎ.ಎಂ. ಜಮಖಂಡಿ, ನಿಂಗಪ್ಪ ಸಂತಿವೂರ, ಡಿ.ವಾಯ್. ಗುರಿಕಾರ, ಬಿ.ವಿ. ಕದಂ, ಎಂ.ಡಿ. ಸವದಿ, ಮಹೇಶ ಹಂಗಡಿ ಸೇರಿದಂತೆ ಅನೇಕ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.